ಮಂಗಳೂರು,: ಬಿಜೆಪಿಯ ಏಳು ಶಾಸಕರು ಆಯ್ಕೆಯಾದ ಬಳಿಕ ಕೋಮು ಗಲಭೆಗೆ ಆಸ್ಪದ ನೀಡುತ್ತಿಲ್ಲ ಎಂದು ಶಾಸಕ ಡಾ.ವೈ.ಭರತ್ ಶೆಟ್ಟಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ. ಜಿಲ್ಲೆಯಲ್ಲಿ ಕೋಮು ಗಲಭೆ ಮತ್ತು ಮಹಿಳೆಯ ಮಾನಭಂಗ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆಯುವ ಮೂಲಕ ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಜಿಲ್ಲೆಯಲ್ಲಿ ಮತ್ತೆ ಕೋಮು ಗಲಭೆಗೆ ಆಸ್ಪದ ನೀಡುತ್ತಿದೆ ಎಂದು ದೂರಿದ್ದಾರೆ.
ಜಿಲ್ಲೆಯಲ್ಲಿ ಈ ಹಿಂದಿನ ಕಾಂಗ್ರೆಸ್ ಸರಕಾರವಿದ್ದಾಗ, ಏಳು ಮಂದಿ ಕಾಂಗ್ರೆಸ್ ಶಾಸಕರಿದ್ದರು. ಆಗ ಪದೇಪದೇ ಕೋಮು ಗಲಭೆ ನಡೆಯುತ್ತಿತ್ತು. ಬಿಜೆಪಿಯ ಏಳು ಶಾಸಕರು ಆಯ್ಕೆಯಾದ ಬಳಿಕ ಕೋಮು ಗಲಭೆಗೆ ಆಸ್ಪದ ನೀಡುತ್ತಿಲ್ಲ ಎಂದು ಹೇಳಿದರು.
ಮುಖ್ಯಮಂತ್ರಿ ಕುಮಾರಸ್ವಾಮಿ ಕರಾವಳಿ ಜಿಲ್ಲೆಗೆ ಆಗಮಿಸಿ ಮತ ನೀಡುವಂತೆ ವಿನಂತಿಸುತ್ತಿದ್ದಾರೆ. ಇಲ್ಲಿನ ದೇವಸ್ಥಾನ ಇವರಿಗೆ ಬೇಕು. ತಿಳಿವಳಿಕೆ ಇಲ್ಲದವರು ಮತ ನೀಡಲು ಬೇಕೇ ಎಂಬುದನ್ನು ಕಾಂಗ್ರೆಸ್-ಜೆಡಿಎಸ್ ನಾಯಕರು ಉತ್ತರಿಸಲಿ ಎಂದು ಪ್ರಶ್ನಸಿದ್ದಾರೆ.
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…
ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಶಿಕ್ಷಣ ಇಲಾಖೆ ನಿಷೇಧ; ಹೊಸ ಮಾರ್ಗಸೂಚಿ ಪ್ರಕಟ, ಅಧಿಕೃತ ಆದೇಶ ಬೆಂಗಳೂರು : ಶಾಲಾ ಸಾಂಸ್ಕೃತಿಕ…
ಉಡುಪಿ : ಅಗ್ನಿ ಅವಘಡ ವೇಳೆ ಅಗ್ನಿಶಾಮಕ ಸೇವೆಯಲ್ಲಿ ವಿಳಂಬವಾಗಿಲ್ಲ : ಅಗ್ನಿಶಾಮಕ ಅಧಿಕಾರಿ ಸ್ಪಷ್ಟನೆ ಉಡುಪಿ: ಇತ್ತೀಚೆಗೆ ಉಡುಪಿ…