Featured

ಬಿಜೆಪಿಯ ಸರ್ವನಾಶಕ್ಕೆ ಬಿಜೆಪಿಯೇ ಕಾರಣ: ವೀರಪ್ಪ ಮೊಯ್ಲಿ

ಚಿಕ್ಕಬಳ್ಳಾಪುರ:  ನಗರದ ಎಸ್​ಜೆಸಿಐಟಿ ಇಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾತನಾಡಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ, ವಾಮ ಮಾರ್ಗದ ಮೂಲಕ ಬಿಜೆಪಿ ಸರ್ಕಾರವನ್ನು ರಚಿಸಲು ಹೊರಟಿದೆ. ಇದರಿಂದ ಬಿಜೆಪಿಯವರು ಅವರ ನಾಶಕ್ಕೆ ಅವರೇ ಕಾರಣಕರ್ತರಾಗುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ಬಿಜೆಪಿಗರು ಈ ಹಿಂದೆ ಆಪರೇಷನ್ ಕಮಲ ಮಾಡೋಕೆ ಹೋಗಿ ಹೀನಾಯವಾಗಿ ಸೋತಿದ್ದರು. ಸದ್ಯ ಈಗ ಮತ್ತೆ ಆಪರೇಷನ್ ಕಮಲ ಮಾಡೋಕೆ ಮುಂದಾಗಿದ್ದಾರೆ. ಇದರಿಂದ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲೂ ಬಿಜೆಪಿ ನಾಶವಾಗುತ್ತೆ ಎಂದು ಭವಿಷ್ಯ ನುಡಿದರು.

ಇನ್ನು ಮಹಾರಾಷ್ಟ್ರ ಸಿಎಂ ಫಡ್ನವೀಸ್​ ಅವರು ಶಾಸಕ ಸತೀಶ್ ಜಾರಕಿಹೊಳಿ ಭೇಟಿ ಯಾಗಿರುವುದರ ಬಗ್ಗೆ ಪ್ರತಿಕ್ರಿಯಿಸಿ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಶುಗರ್ ಫ್ಯಾಕ್ಟರಿ ವಿಚಾರಕ್ಕೆ ಮಾತನಾಡಲು ಭೇಟಿಯಾಗಿದ್ದಾರೆ ಹೊರತೂ ರಾಜಕೀಯ ಬೆಳವಣಿಗೆಗೂ ಭೇಟಿಗೂ ಸಂಬಂಧವಿಲ್ಲ. ಕಾಂಗ್ರೆಸ್ ಪಕ್ಷವನ್ನು ಯಾವುದೇ ವ್ಯಕ್ತಿಗಳು ಒಡೆಯಲಿಕ್ಕೆ ಸಾಧ್ಯವಿಲ್ಲ ಎಂದು ಮೊಯ್ಲಿ ತಿಳಿಸಿದ್ದಾರೆ.

ಸತೀಶ್ ಜಾರಕಿಹೊಳಿ ರಾಜೀನಾಮೆ ಕೊಡೋ ವಿಚಾರ ಕೇವಲ ಉಹಾಪೋಹ ಅಷ್ಟೇ. ಸಚಿವ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ನ ಹಿರಿಯ ನಾಯಕ, ಅವರಿಗೆ ಲೇವಾದೇವಿ ವಿಷಯದಲ್ಲಿ ಅನವಶ್ಯಕವಾಗಿ ಕಿರುಕುಳ ನೀಡುಲಾಗುತ್ತಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಸಿಬಿಐ ಹಾಗೂ ಐಟಿಯನ್ನು ಬಳಸಿಕೊಂಡು ಕಿರುಕುಳ ನೀಡುತ್ತಿದ್ದಾರೆ ಎಂದು ಮೊಯ್ಲಿ ಆರೋಪಿಸಿದ್ದಾರೆ.

ರಾಜ್ಯ, ದೇಶದಲ್ಲೇ ಬಿಜೆಪಿ ಸರ್ವ ನಾಶವಾಗುತ್ತೆ : ಸಮ್ಮಿಶ್ರ ಸರ್ಕಾರ ಉರುಳಿಸಲು ಯತ್ನಿಸಿದರೆ ಬಿಜೆಪಿ ಸರ್ವನಾಶವಾಗುತ್ತದೆ ಅಂತ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವೀರಪ್ಪ ಮೊಯ್ಲಿ ಶಾಪ ಹಾಕಿದ್ದಾರೆ.

ಸಮ್ಮಿಶ್ರ ಸರ್ಕಾರ ಉರುಳಿಸಲು ಯತ್ನಿಸಿದ್ರೆ ಬಿಜೆಪಿ ಸರ್ವನಾಶವಾಗುತ್ತದೆ. ವಾಮ ಮಾರ್ಗದ ಮೂಲಕ ಅಧಿಕಾರ ಹಿಡಿದ್ರೆ ರಾಜ್ಯ ಹಾಗೂ ದೇಶದಲ್ಲೇ ಬಿಜೆಪಿ ಸರ್ವ ನಾಶವಾಗುತ್ತದೆ ಅಂತ ಹೇಳಿದ್ದಾರೆ.

 

ಸಮ್ಮಿಶ್ರ ಸರ್ಕಾರ ಬೀಳಿಸುವ ಕೆಲಸಕ್ಕೆ ಬಿಜೆಪಿ ಕೈ ಹಾಕಲ್ಲ ಅನ್ನೋ ವಿಶ್ವಾಸವಿದೆ. ಯಾಕಂದ್ರೆ ಅಪರೇಷನ್ ಕಮಲ ಮಾಡಿ ಬಿಜೆಪಿ ಈಗಾಗಲೇ ವಿಫಲವಾಗಿದೆ. ಹಿಂದೆ ಅಪರೇಷನ್ ಕಮಲ ಮಾಡಿ ಬಿಜೆಪಿ ಪಕ್ಷ ಒಡೆದು ಹೋಯಿತು. ತದನಂತರ ಹೀನಾಯವಾಗಿ ಬಿಜೆಪಿಯವರು ಸೋತರು. ವಾಮಮಾರ್ಗದಿಂದ ಅಧಿಕಾರ ಹಿಡಿದ್ರೆ ಆ ವ್ಯಕ್ತಿ ಹಾಗೂ ಪಕ್ಷಕ್ಕೆ ನಷ್ಟವಾಗುತ್ತದೆ ಅಂದ್ರು.

 

 

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago