ಚಿಕ್ಕಬಳ್ಳಾಪುರ: ನಗರದ ಎಸ್ಜೆಸಿಐಟಿ ಇಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾತನಾಡಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ, ವಾಮ ಮಾರ್ಗದ ಮೂಲಕ ಬಿಜೆಪಿ ಸರ್ಕಾರವನ್ನು ರಚಿಸಲು ಹೊರಟಿದೆ. ಇದರಿಂದ ಬಿಜೆಪಿಯವರು ಅವರ ನಾಶಕ್ಕೆ ಅವರೇ ಕಾರಣಕರ್ತರಾಗುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ಬಿಜೆಪಿಗರು ಈ ಹಿಂದೆ ಆಪರೇಷನ್ ಕಮಲ ಮಾಡೋಕೆ ಹೋಗಿ ಹೀನಾಯವಾಗಿ ಸೋತಿದ್ದರು. ಸದ್ಯ ಈಗ ಮತ್ತೆ ಆಪರೇಷನ್ ಕಮಲ ಮಾಡೋಕೆ ಮುಂದಾಗಿದ್ದಾರೆ. ಇದರಿಂದ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲೂ ಬಿಜೆಪಿ ನಾಶವಾಗುತ್ತೆ ಎಂದು ಭವಿಷ್ಯ ನುಡಿದರು.
ಇನ್ನು ಮಹಾರಾಷ್ಟ್ರ ಸಿಎಂ ಫಡ್ನವೀಸ್ ಅವರು ಶಾಸಕ ಸತೀಶ್ ಜಾರಕಿಹೊಳಿ ಭೇಟಿ ಯಾಗಿರುವುದರ ಬಗ್ಗೆ ಪ್ರತಿಕ್ರಿಯಿಸಿ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಶುಗರ್ ಫ್ಯಾಕ್ಟರಿ ವಿಚಾರಕ್ಕೆ ಮಾತನಾಡಲು ಭೇಟಿಯಾಗಿದ್ದಾರೆ ಹೊರತೂ ರಾಜಕೀಯ ಬೆಳವಣಿಗೆಗೂ ಭೇಟಿಗೂ ಸಂಬಂಧವಿಲ್ಲ. ಕಾಂಗ್ರೆಸ್ ಪಕ್ಷವನ್ನು ಯಾವುದೇ ವ್ಯಕ್ತಿಗಳು ಒಡೆಯಲಿಕ್ಕೆ ಸಾಧ್ಯವಿಲ್ಲ ಎಂದು ಮೊಯ್ಲಿ ತಿಳಿಸಿದ್ದಾರೆ.
ಸತೀಶ್ ಜಾರಕಿಹೊಳಿ ರಾಜೀನಾಮೆ ಕೊಡೋ ವಿಚಾರ ಕೇವಲ ಉಹಾಪೋಹ ಅಷ್ಟೇ. ಸಚಿವ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ನ ಹಿರಿಯ ನಾಯಕ, ಅವರಿಗೆ ಲೇವಾದೇವಿ ವಿಷಯದಲ್ಲಿ ಅನವಶ್ಯಕವಾಗಿ ಕಿರುಕುಳ ನೀಡುಲಾಗುತ್ತಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಸಿಬಿಐ ಹಾಗೂ ಐಟಿಯನ್ನು ಬಳಸಿಕೊಂಡು ಕಿರುಕುಳ ನೀಡುತ್ತಿದ್ದಾರೆ ಎಂದು ಮೊಯ್ಲಿ ಆರೋಪಿಸಿದ್ದಾರೆ.
ರಾಜ್ಯ, ದೇಶದಲ್ಲೇ ಬಿಜೆಪಿ ಸರ್ವ ನಾಶವಾಗುತ್ತೆ : ಸಮ್ಮಿಶ್ರ ಸರ್ಕಾರ ಉರುಳಿಸಲು ಯತ್ನಿಸಿದರೆ ಬಿಜೆಪಿ ಸರ್ವನಾಶವಾಗುತ್ತದೆ ಅಂತ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವೀರಪ್ಪ ಮೊಯ್ಲಿ ಶಾಪ ಹಾಕಿದ್ದಾರೆ.
ಸಮ್ಮಿಶ್ರ ಸರ್ಕಾರ ಉರುಳಿಸಲು ಯತ್ನಿಸಿದ್ರೆ ಬಿಜೆಪಿ ಸರ್ವನಾಶವಾಗುತ್ತದೆ. ವಾಮ ಮಾರ್ಗದ ಮೂಲಕ ಅಧಿಕಾರ ಹಿಡಿದ್ರೆ ರಾಜ್ಯ ಹಾಗೂ ದೇಶದಲ್ಲೇ ಬಿಜೆಪಿ ಸರ್ವ ನಾಶವಾಗುತ್ತದೆ ಅಂತ ಹೇಳಿದ್ದಾರೆ.
ಸಮ್ಮಿಶ್ರ ಸರ್ಕಾರ ಬೀಳಿಸುವ ಕೆಲಸಕ್ಕೆ ಬಿಜೆಪಿ ಕೈ ಹಾಕಲ್ಲ ಅನ್ನೋ ವಿಶ್ವಾಸವಿದೆ. ಯಾಕಂದ್ರೆ ಅಪರೇಷನ್ ಕಮಲ ಮಾಡಿ ಬಿಜೆಪಿ ಈಗಾಗಲೇ ವಿಫಲವಾಗಿದೆ. ಹಿಂದೆ ಅಪರೇಷನ್ ಕಮಲ ಮಾಡಿ ಬಿಜೆಪಿ ಪಕ್ಷ ಒಡೆದು ಹೋಯಿತು. ತದನಂತರ ಹೀನಾಯವಾಗಿ ಬಿಜೆಪಿಯವರು ಸೋತರು. ವಾಮಮಾರ್ಗದಿಂದ ಅಧಿಕಾರ ಹಿಡಿದ್ರೆ ಆ ವ್ಯಕ್ತಿ ಹಾಗೂ ಪಕ್ಷಕ್ಕೆ ನಷ್ಟವಾಗುತ್ತದೆ ಅಂದ್ರು.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…