Featured

ಬಿಜೆಪಿಯ ಹಾಲಿ ಶಾಸಕರಿಗೆ ಟಿಕೆಟ್ ಟೆಕ್ಷನ್ : ಹೈಕಮಾಂಡ್ ಕೈ ಸೇರಿದೆ 16 ಜಿಲ್ಲೆಗಳ ಶಾರ್ಟ್ ಲಿಸ್ಟ್ – Vishwanews24

ಬಿಜೆಪಿಯ ಹಾಲಿ ಶಾಸಕರಿಗೆ ಟಿಕೆಟ್ ಟೆಕ್ಷನ್ ..

ಹೈಕಮಾಂಡ್ ಕೈ ಸೇರಿದೆ 16 ಜಿಲ್ಲೆಗಳ ಶಾರ್ಟ್ ಲಿಸ್ಟ್..

20 ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಕೈ ತಪ್ಪುತ್ತಾ..?

ಬೆಂಗಳೂರು: 20 ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಕೈ ತಪ್ಪುತ್ತಾ..?, ವರ್ಚಸ್ಸು, ವಯಸ್ಸು, ಆಡಳಿತ ವಿರೋಧಿ ಅಲೆಯೇ ಮಾನದಂಡ ಆಗುತ್ತಾ ಎಂಬ ಪ್ರಶ್ನೆಗಳು ಬಿಜೆಪಿಯಲ್ಲಿ ಬಿಸಿಬಿಸಿ ಚರ್ಚೆಗೆ ಗ್ರಾಸವಾಗಿದೆ.

16 ಜಿಲ್ಲೆಗಳಲ್ಲಿ ಬಿಜೆಪಿ ಹಾಲಿ ಶಾಸಕರಿಗೆ ಕೊಕ್ ಕೊಡುವ ಶಾರ್ಟ್ ಲಿಸ್ಟ್ ರೆಡಿ ಆಗ್ತಿದೆ ಎನ್ನಲಾಗಿದ್ದು, ಹೈಕಮಾಂಡ್  ಮುಂದಿರುವ ವರದಿ ಅಸಲಿಯತ್ತಿನ ಬಗ್ಗೆ ಕುತೂಹಲ ಮೂಡಿದೆ. ಚುನಾವಣೆಗೆ ಇನ್ನು ಮೂರೂವರೆ ತಿಂಗಳು ಬಾಕಿ ಇರುವಾಗಲೇ ಟಿಕೆಟ್ ಲೆಕ್ಕಚಾರ ಶುರುವಾಗಿದ್ದು, ಬಿಜೆಪಿ ಟಿಕೆಟ್ ನೀಡಿಕೆ ಮಾನದಂಡಗಳ ಬಗ್ಗೆ ಪಕ್ಷದ ವೇದಿಕೆಯಲ್ಲೇ ಚರ್ಚೆ ಆಗುತ್ತಿದೆ. ಗುಜರಾತ್ ಮಾಡೆಲ್, ಉತ್ತರ ಪ್ರದೇಶ ಮಾಡೆಲ್‍ಗಳ ಪ್ರಯೋಗದ ಬಗ್ಗೆ ಆತಂಕ ವ್ಯಕ್ತವಾಗ್ತಿದೆ. ಬರೋಬ್ಬರಿ 20ಕ್ಕೂ ಹೆಚ್ಚು ಶಾಸಕರಿಗೆ ಟಿಕೆಟ್ ಕೈ ತಪ್ಪು ಆತಂಕವಿದೆ ಎನ್ನಲಾಗಿದೆ.

ನಾಲ್ಕು ಜಿಲ್ಲೆಗಳಲ್ಲಿ ತಲಾ ಇಬ್ಬರು ಹಾಲಿ ಶಾಸಕರಿಗೆ ಕೊಕ್ ಕೊಡುವ ಬಗ್ಗೆ ಚರ್ಚೆ ಆಗುತ್ತಿದ್ದರೆ, 12 ಜಿಲ್ಲೆಗಳಲ್ಲಿ ತಲಾ ಒಬ್ಬರು ಹಾಲಿ ಶಾಸಕರಿಗೆ ಕೊಕ್ ಕೊಡುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಆ ಕ್ಷೇತ್ರಗಳಲ್ಲಿ ವೈಯುಕ್ತಿಕ ವರ್ಚಸ್ಸಿನ ಕುಸಿತ, ಆಡಳಿತ ವಿರೋಧಿ ಅಲೆಯ ಬಗ್ಗೆ ಹೈಕಮಾಂಡ್ ವರದಿ ಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈಗಾಗಲೇ 20ಕ್ಕೂ ಹೆಚ್ಚು ಕ್ಷೇತ್ರಗಳ ವರದಿಯನ್ನ ಪಡೆದಿರುವ ಬಿಜೆಪಿ ಹೈಕಮಾಂಡ್, ಏನ್ ಮಾಡುತ್ತೆ ಅನ್ನೋ ಆತಂಕ ಇದೆ. ಅಲ್ಲದೆ ವಯಸ್ಸಿನ ಕಾರಣದಿಂದಾಗಿ ಯಡಿಯೂರಪ್ಪ ಮಾಡೆಲ್ ಅನುಸರಿಸುವ ಬಗ್ಗೆಯೂ ಸುಳಿವು ಸಿಕ್ಕಿದೆ ಎನ್ನಲಾಗ್ತಿದೆ. ಒಟ್ಟಾರೆ ಮೂರು ಅಂಶಗಳ ಮಾನದಂಡಗಳನ್ನಿಟ್ಟುಕೊಂಡು ಕೆಲ ಹಾಲಿ ಶಾಸಕರಿಗೆ ಗೇಟ್ ಪಾಸ್ ಸಾಧ್ಯತೆ ಇದ್ದು, ಫೆಬ್ರವರಿ ಎರಡನೇ ವಾರದ ಬಳಿಕ ಬಿಜೆಪಿ ಹೈಕಮಾಂಡ್ ನಿರ್ಧಾರದ ಬಗ್ಗೆ ಸ್ಪಷ್ಟವಾದ ಸುಳಿವು ಸಿಗಲಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

5 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

5 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

5 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

5 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

7 hours ago