ಉಡುಪಿ: ಬಿಜೆಪಿ ನಾಯಕರು ಮತ ಗಳಿಕೆಗೆ “ಮೋದಿ’ ಹೆಸರನ್ನು ಬಳಸುವುದು ಸಮಯೋಚಿತವಲ್ಲದೆ, ಹೆಮ್ಮೆಯೂ ಹೌದು ಎಂದು ನಗರ ಬಿಜೆಪಿ ಅಧ್ಯಕ್ಷ ಪ್ರಭಾಕರ ಪೂಜಾರಿ ಹೇಳಿದ್ದಾರೆ.
ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ಸುಮಾರು 60 ವರ್ಷಕ್ಕಿಂತಲೂ ಹೆಚ್ಚು ಕಾಲ ದೇಶವನ್ನಾಳಿದ ಕಾಂಗ್ರೆಸ್ ಸ್ವಜನ ಹಿತಾಸಕ್ತಿ, ಭ್ರಷ್ಟಾಚಾರ ಇತ್ಯಾದಿಗಳಿಂದ ದೇಶವನ್ನು ಕೊಳ್ಳೆ ಹೊಡೆದ ಸಾಧನೆ ಬಿಟ್ಟರೆ, ತಮ್ಮನ್ನು ಸಮರ್ಥಿಸಿಕೊಳ್ಳುವಂತಹ ಯಾವುದೇ ಜನಪರ ಸಾಧನೆ ಮಾಡಿಲ್ಲ. ಸಮರ್ಥ ನಾಯಕರಿಲ್ಲದ ಕಾಂಗ್ರೆಸ್ ಗಂಜಿ ಗಿರಾಕಿಗಳು, ಬುದ್ಧಿಜೀವಿಗಳು ಎನಿಸಿಕೊಂಡ ಎಡಬಿಡಂಗಿಗಳನ್ನು ಅವಲಂಬಿಸಿರುವುದು ಶೋಚನೀಯ ಎಂದು ಟೀಕಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಟಾರ್ಚ್ ಹಾಕಿ ಹುಡುಕಿದರೂ ಸ್ವತ್ಛ, ಹೆಮ್ಮೆ ಪಡುವಂತಹ ನಾಯಕರನ್ನು ಕಾಣಲಸಾಧ್ಯ. ಪ್ರತಿಯೊಬ್ಬ ನಾಯಕರು ಭ್ರಷ್ಟಾಚಾರದ ಲೇಬಲನ್ನು ಅಂಟಿಸಿಕೊಂಡೇ ತಿರುಗಾಡುತ್ತಿದ್ದಾರೆ. ಆದರೆ ಮೋದಿಯವರು ಪ್ರಾಮಾಣಿಕ, ಸ್ವತ್ಛ, ಶಿಸ್ತಿನ ಆಡಳಿತ ನೀಡಿದ್ದಾರೆ. ಅವರ ನಾಲ್ಕು ವರ್ಷಗಳ ಆಡಳಿತದಲ್ಲಿ ದೇಶವು ಎಂದೂ ಕಾಣದಂತಹ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತರ ಸಾಧನೆಗೈದಿದೆ. ನಮ್ಮ ಸರಕಾರ, ನಮ್ಮ ನಾಯಕರ ಸಾಧನೆಗಳನ್ನು ಜನತೆಗೆ ತಿಳಿಸಿ ಮತ ಕೇಳುವಲ್ಲಿ ನಮಗೆ ನೈತಿಕತೆಯಿದೆ ಎಂದರು. ನಾಯಕರಾದ ಉಪೇಂದ್ರ ನಾಯಕ್, ಬಾಲಕೃಷ್ಣ ಶೆಟ್ಟಿ, ಜಗದೀಶ ಆಚಾರ್ಯ, ಶ್ರೀಶ ಕೊಡವೂರು ಉಪಸ್ಥಿತರಿದ್ದರು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…