ಉಡುಪಿ

“ಬಿಜೆಪಿಯ ಹೆಮ್ಮೆ ಪ್ರಧಾನಿ ನರೇಂದ್ರ ಮೋದಿ”

ಉಡುಪಿ: ಬಿಜೆಪಿ ನಾಯಕರು ಮತ ಗಳಿಕೆಗೆ “ಮೋದಿ’ ಹೆಸರನ್ನು ಬಳಸುವುದು ಸಮಯೋಚಿತವಲ್ಲದೆ,  ಹೆಮ್ಮೆಯೂ ಹೌದು ಎಂದು ನಗರ ಬಿಜೆಪಿ ಅಧ್ಯಕ್ಷ ಪ್ರಭಾಕರ ಪೂಜಾರಿ ಹೇಳಿದ್ದಾರೆ.

ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ಸುಮಾರು 60 ವರ್ಷಕ್ಕಿಂತಲೂ ಹೆಚ್ಚು ಕಾಲ ದೇಶವನ್ನಾಳಿದ ಕಾಂಗ್ರೆಸ್‌ ಸ್ವಜನ ಹಿತಾಸಕ್ತಿ, ಭ್ರಷ್ಟಾಚಾರ ಇತ್ಯಾದಿಗಳಿಂದ ದೇಶವನ್ನು ಕೊಳ್ಳೆ ಹೊಡೆದ ಸಾಧನೆ ಬಿಟ್ಟರೆ, ತಮ್ಮನ್ನು ಸಮರ್ಥಿಸಿಕೊಳ್ಳುವಂತಹ ಯಾವುದೇ ಜನಪರ ಸಾಧನೆ ಮಾಡಿಲ್ಲ. ಸಮರ್ಥ ನಾಯಕರಿಲ್ಲದ ಕಾಂಗ್ರೆಸ್‌ ಗಂಜಿ ಗಿರಾಕಿಗಳು, ಬುದ್ಧಿಜೀವಿಗಳು ಎನಿಸಿಕೊಂಡ ಎಡಬಿಡಂಗಿಗಳನ್ನು ಅವಲಂಬಿಸಿರುವುದು ಶೋಚನೀಯ ಎಂದು ಟೀಕಿಸಿದರು.

ಕಾಂಗ್ರೆಸ್‌ ಪಕ್ಷದಲ್ಲಿ ಟಾರ್ಚ್‌ ಹಾಕಿ ಹುಡುಕಿದರೂ ಸ್ವತ್ಛ, ಹೆಮ್ಮೆ ಪಡುವಂತಹ ನಾಯಕರನ್ನು ಕಾಣಲಸಾಧ್ಯ. ಪ್ರತಿಯೊಬ್ಬ ನಾಯಕರು ಭ್ರಷ್ಟಾಚಾರದ ಲೇಬಲನ್ನು ಅಂಟಿಸಿಕೊಂಡೇ ತಿರುಗಾಡುತ್ತಿದ್ದಾರೆ. ಆದರೆ ಮೋದಿಯವರು ಪ್ರಾಮಾಣಿಕ, ಸ್ವತ್ಛ, ಶಿಸ್ತಿನ ಆಡಳಿತ ನೀಡಿದ್ದಾರೆ. ಅವರ ನಾಲ್ಕು ವರ್ಷಗಳ ಆಡಳಿತದಲ್ಲಿ ದೇಶವು ಎಂದೂ ಕಾಣದಂತಹ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತರ ಸಾಧನೆಗೈದಿದೆ. ನಮ್ಮ ಸರಕಾರ, ನಮ್ಮ ನಾಯಕರ ಸಾಧನೆಗಳನ್ನು ಜನತೆಗೆ ತಿಳಿಸಿ ಮತ ಕೇಳುವಲ್ಲಿ ನಮಗೆ ನೈತಿಕತೆಯಿದೆ ಎಂದರು. ನಾಯಕರಾದ ಉಪೇಂದ್ರ ನಾಯಕ್‌, ಬಾಲಕೃಷ್ಣ ಶೆಟ್ಟಿ, ಜಗದೀಶ ಆಚಾರ್ಯ, ಶ್ರೀಶ ಕೊಡವೂರು ಉಪಸ್ಥಿತರಿದ್ದರು.

 

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

16 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

16 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

16 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

19 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

20 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

20 hours ago