Featured

ಬಿಜೆಪಿ‌ ನಾಯಕ ತಿಂಗಳೆ ವಿಕ್ರಮಾರ್ಜುನ ಹೆಗ್ಡೆಯ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ-ಹಣಕ್ಕೆ ಬೇಡಿಕೆ- ದೂರು ದಾಖಲು

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ನಾಯಕರು, ಪೊಲೀಸ್ ಅಧಿಕಾರಿಗಳ ಹೆಸರಲ್ಲಿ ನಕಲಿ ಖಾತೆಯನ್ನು ಸೃಷ್ಟಿಸಿ ದುಡ್ಡು ಕೀಳುವವರ ಗುಂಪೊಂದು ಸೃಷ್ಟಿಯಾಗಿದ್ದು ಬಿಜೆಪಿಯ ನಾಯಕ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆಯವರ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣ ಕೇಳುತ್ತಿರುವ ಬಗ್ಗೆ ಸೋಮವಾರ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆಯವರು ಉಡುಪಿ ನಗರ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತಿಂಗಳೆ ವಿಕ್ರಮಾರ್ಜುನ ಎಂಬ ಹೆಸರಲ್ಲಿ ನಕಲಿ ಖಾತೆ ತೆರೆದು ವಿಕ್ರಮಾರ್ಜುನ ಹೆಗ್ಗಡೆಯವರ ಆಪ್ತರಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಆಪ್ತರಲ್ಲಿ ಕೆಲವರು ತಿಂಗಳೆಯವರಿಗೆ ಕರೆ ಮಾಡಿ ಈ ಮಾಹಿತಿ ನೀಡಿದ ಬಳಿಕ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆಯವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ತನ್ನ ಹೆಸರಿನಲ್ಲಿ ಕೆಲವು ಕಿಡಿಗೇಡಿಗಳು ನಕಲಿ ಖಾತೆ ತೆರೆದಿದ್ದಾರೆ ಎಂದು ಹಂಚಿಕೊಂಡಿದ್ದರು

ಉಡುಪಿ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಮಾಜದಲ್ಲಿ ಇಂತಹ ಘಟನೆಗಳು ನಡೆದಾಗ ನಾವು ಮೌನವಾಗಿರುವುದು ತಪ್ಪಾಗುತ್ತದೆ. ನಮಗೆ ಆತ್ಮೀಯರಾದರೇ ಫೇಸ್ ಬುಕ್ ಮೂಲಕ ಹಣ ಕೇಳುದಿಲ್ಲ ಎಂಬುದನ್ನು ಎಲ್ಲರು ಮನದಲ್ಲಿಟ್ಟುಕೊಳ್ಳಬೇಕು. ಇವತ್ತು ಕೇವಲ ಹಣ ಕೇಳಿದ್ದಾರೆ ಆದರೆ ನಾಳೆ ನಕಲಿ ಖಾತೆಯ ಮೂಲಕ ದೇಶದ್ರೋಹದ ಹೇಳಿಕೆ ಪ್ರಕಟಿಸಿದರು ಆಶ್ಚರ್ಯ ಇಲ್ಲ. ಪೊಲೀಸ್ ಇಲಾಖೆ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ಪತ್ತೆಹಚ್ಚಬೇಕೆಂದು ಆಗ್ರಹಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago