Featured

ಬಿಜೆಪಿ ಅಧಿಕಾರಕ್ಕೆ ಬಂದರೂ ಬಹಳ ದಿನ ಸರ್ಕಾರ ನಡೆಯುವುದಿಲ್ಲ ,ಸರ್ಕಾರ ಮಾಡೋದು ಅಷ್ಟೊಂದು ಸುಲಭದ ಕೆಲಸವಲ್ಲ : ಬಸವರಾಜ ಹೊರಟ್ಟಿ -Vishwanews24

ಹುಬ್ಬಳ್ಳಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಂದು ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ. ಅವರಿಗೆ ದೇವರು ಒಳ್ಳೆಯದು ಮಾಡಲಿ, ಬಿಜೆಪಿ ಅಧಿಕಾರಕ್ಕೆ ಬಂದರೂ ಬಹಳ ದಿನ ಸರ್ಕಾರ ನಡೆಯುವುದಿಲ್ಲ , ಸರ್ಕಾರ ಮಾಡೋದು ಅಷ್ಟೊಂದು ಸುಲಭದ ಕೆಲಸವಲ್ಲ ಎಂದು ಜೆಡಿಎಸ್ ಹಿರಿಯ ನಾಯಕ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅತೃಪ್ತ ಶಾಸಕರನ್ನು ಸಚಿವರನ್ನಾಗಿ ಮಾಡುವ ಭರವಸೆ ನೀಡಿದ್ದಾರೆ. ಅತೃಪ್ತರನ್ನು ನಿಭಾಯಿಸುವುದು ಯಡಿಯೂರಪ್ಪಗೆ ಬಹಳ ಕಷ್ಟವಾಗುತ್ತದೆ. ರಾಜ್ಯದಲ್ಲಿ ಸ್ಥಿರವಾದ ಸರ್ಕಾರ ಕೊಡಲು ಸಾಧ್ಯವಿಲ್ಲ. ಈ ಬಗ್ಗೆ ಕೇಂದ್ರದ ಮೋದಿ ಸರ್ಕಾರ ಪರಿಶೀಲನೆ ನಡೆಸಬೇಕಾಗಿತ್ತು. ಬಿಎಸ್ ವೈ ಸರ್ಕಾರಕ್ಕೆ ತುಂಬಾ ದಿನ ಆಯುಷ್ಯ ಇಲ್ಲ ಎಂದು ಭವಿಷ್ಯ ನುಡಿದರು.

ಕುಮಾರಸ್ವಾಮಿ ಅವರಿಗೆ ತಾಳ್ಮೆ ಇತ್ತು. ಆದರೆ, ಆ ತಾಳ್ಮೆ ಬಿ.ಎಸ್. ಯಡಿಯೂರಪ್ಪಗೆ ಇಲ್ಲ. ಬಿಜೆಪಿ ಅಧಿಕಾರಕ್ಕೆ ಬಂದರೂ ತುಂಬಾ ದಿನ ನಡೆಯುವುದಿಲ್ಲ. ಸರ್ಕಾರ ಮಾಡೋದು ಅಷ್ಟೋಂದು ಸುಲಭದ ಕೆಲಸವಲ್ಲ ಎಂದರು.

ಅತೃಪ್ತ ಮೂರು ಶಾಸಕರನ್ನು ಅನರ್ಹ ಮಾಡಿದ್ದು, ಸರಿಯಾದ ಕ್ರಮ. ಸ್ಪೀಕರ್ ರಮೇಶ್ ಕುಮಾರ್ ಬಹಳ ವಿಚಾರಮಾಡಿ ಈ ನಿರ್ಧಾರ ಕೈಗೊಂಡಿದ್ದಾರೆ. ಇಂದು ಕಾಂಗ್ರೆಸ್ ಬಿಟ್ಟವರು ನಾಳೆ ಬಿಜೆಪಿ ಬಿಡಲ್ಲ ಎಂದು ಹೇಳಲು ಸಾಧ್ಯವಿಲ್ಲ. ಮೈತ್ರಿ ಸರ್ಕಾರದಲ್ಲಿ ಬಹಳ ಜನ ಟ್ರಬಲ್ ಶೂಟರ್ ಇದ್ದರು. ಆದರೆ ಬಿಜೆಪಿಯಲ್ಲಿ ಟ್ರಬಲ್ ಕ್ರಿಯೇಟರ್ ಇದ್ದಾರೆ. ಈ ಸರ್ಕಾರ ಬಹಳ ದಿನ ಇರಲಾರದು ಎಂದು ಹೇಳಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago