Featured

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮ : ನಾಳೆ ಸಂಭಾವ್ಯ ಪಟ್ಟಿಯೊಂದಿಗೆ ಸಿಎಂ ಬೊಮ್ಮಾಯಿ, ಯಡಿಯೂರಪ್ಪ ದೆಹಲಿಗೆ – Vishwanews24

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮ:  ನಾಳೆ ಸಂಭಾವ್ಯ ಪಟ್ಟಿಯೊಂದಿಗೆ ಸಿಎಂ ಬೊಮ್ಮಾಯಿ, ಯಡಿಯೂರಪ್ಪ ದೆಹಲಿಗೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ  ಈಗಾಗಲೇ ಕಾಂಗ್ರೆಸ್​​ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆಯಾಗಿದೆ. ಕಳೆದ ಮಾರ್ಚ್​ 25ರಂದು ಮೊದಲ ಹಂತದಲ್ಲಿ 124 ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್​ ಬಿಡುಗಡೆ ಮಾಡಿತ್ತು. ಬಾಕಿ ಇದ್ದ 100 ಕ್ಷೇತ್ರಗಳ ಪೈಕಿ ಇಂದು 2ನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇನ್ನು 58 ಅಭ್ಯರ್ಥಿಗಳ ಪಟ್ಟಿ ಬಾಕಿ ಉಳಿಸಿಕೊಂಡಿದೆ. ಇನ್ನು ಬಿಜೆಪಿ (BJP) ಅಭ್ಯರ್ಥಿಗಳ ಆಯ್ಕೆಗಾಗಿ ನಡೆದ ಎರಡು ದಿನಗಳ ರಾಜ್ಯ ಚುನಾವಣಾ ಸಮಿತಿ ಸಭೆ ನಿನ್ನೆ(ಏಪ್ರಿಲ್ 5) ರಾತ್ರಿ ಮುಕ್ತಾಯವಾಗಿದೆ‌. ಪ್ರತಿ ಕ್ಷೇತ್ರಕ್ಕೆ ತಲಾ ಮೂರು ಸಂಭಾವ್ಯ ಅಭ್ಯರ್ಥಿಗಳ ಹೆಸರು ಅಂತಿಮ ಮಾಡಲಾಗಿದ್ದು, ನಾಳೆ(ಏಪ್ರಿಲ್ 07) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಭಾವ್ಯ ಪಟ್ಟಿಯೊಂದಿಗೆ ದೆಹಲಿಗೆ ತೆರಳಲಿದ್ದಾರೆ.

ಹೈಕಮಾಂಡ್​ ಸೂಚನೆಯಂತೆ ಪ್ರತಿ ಕ್ಷೇತ್ರಕ್ಕೆ 3 ಸಂಭಾವ್ಯ ಅಭ್ಯರ್ಥಿಗಳಿರುವ ಪಟ್ಟಿಯನ್ನ ರಾಜ್ಯ ಬಿಜೆಪಿ ರೆಡಿ ಮಾಡಿದೆ. ಇದರಲ್ಲಿ ಸಿಎಂ ಬೊಮ್ಮಾಯಿ ಸ್ಪರ್ಧಿಸುವ ಶಿಗ್ಗಾವಿ ಕ್ಷೇತ್ರಕ್ಕೂ 3 ಸಂಭಾವ್ಯ ಅಭ್ಯರ್ಥಿಗಳ ಹೆಸರು ಇವೆ, ವಿಜಯೇಂದ್ರ ಸ್ಪರ್ಧಿಸುವ ಶಿಕಾರಿಪುರ ಕ್ಷೇತ್ರಕ್ಕೂ 3 ಸಂಭಾವ್ಯ ಅಭ್ಯರ್ಥಿಗಳ ಹೆಸರು ಶಿಫಾರಸು ಮಾಡಲಿದೆ. ನಾಳೆ ನಾಳೆ ಮಧ್ಯಾಹ್ನ 2.30ಕ್ಕೆ ಸಿಎಂ ಬೊಮ್ಮಾಯಿ ಹಾಗೂ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ಮತ್ತೊಂದು ಸುತ್ತಿನ ಸಿಇಸಿ ಸಭೆ ನಡೆಯಲಿದೆ. ಬಳಿಕ ಸರ್ವೆ ರಿಪೋರ್ಟ್, ಬ್ಯಾಲೆಟ್ ವೋಟ್ ಅಭಿಪ್ರಾಯ ಆಧರಿಸಿ ಟಿಕೆಟ್ ಫೈನಲ್ ಆಗಲಿದೆ.

ಏಪ್ರಿಲ್ 8 ರಂದು ನವದೆಹಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಿಗದಿಯಾಗಿದೆ. ಸಂಸದೀಯ ಮಂಡಳಿಯ ಸಭೆಯ ಬಳಿಕ, ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಲಿದೆ. ಇನ್ನು ಏಪ್ರಿಲ್ 9 ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದು, ವಾಪಾಸಾದ ಬಳಿಕವೇ ಪಟ್ಟಿ ಅಧಿಕೃತವಾಗಿ ಪ್ರಕಟಗೊಳ್ಳುವ ನಿರೀಕ್ಷೆ ಇದೆ

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

13 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

21 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

21 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

21 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

22 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

22 hours ago