ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ- ಕೆಲವು ಹಾಲಿ ಶಾಸಕರಿಗೆ ಟಿಕೆಟ್ ಸಿಗಲ್ಲ :  ಬಿಎಸ್ ವೈ  – Vishwanews24

Featured, ರಾಜ್ಯ ನ್ಯೂಸ್

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ- ಕೆಲವು ಹಾಲಿ ಶಾಸಕರಿಗೆ ಟಿಕೆಟ್ ಸಿಗಲ್ಲ :  ಬಿಎಸ್ ವೈ 

ನವದೆಹಲಿ : ಇಂದು ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಲಿದ್ದು, ಕೆಲವು ಹಾಲಿ ಶಾಸಕರಿಗೆ ಟಿಕೆಟ್ ಸಿಗಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸುಳಿವು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಲಿದ್ದು, ಮೊದಲ ಪಟ್ಟಿಯಲ್ಲಿ 180 ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದೆ.

ಕೆಲವು ಹಾಲಿ ಶಾಸಕರನ್ನು ಹೊರತುಪಡಿಸಿ ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ಸಿಗಲಿದೆ ಎಂದು ಹೇಳಿದ್ದಾರೆ.

ಸುಳ್ಯ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಿ ಇಲ್ಲವೇ ನಂದಕುಮಾರ್ ಅವರನ್ನು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತೇವೆ :ಅಭಿಮಾನಿ ಬಳಗ – Vishwanews24

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯ 100 ಕ್ಕೂ ಹೆಚ್ಚು ಪೊಲೀಸರು ಹಾಗೂ 2 ಕೆಎಸ್‌ಆರ್ ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ ಈಗಾಗಲೇ ಕೇಂದ್ರೀಯ ಸಂಸದೀಯ ಮಂಡಳಿಯ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಮಾಡಿದ್ದು, ಇಂದು ಮಧ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಿ ಬಳಿಕ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ.

ಉಡುಪಿ: ಕಾಂಗ್ರೆಸ್‌ ವಿತರಿಸುತ್ತಿರುವ ಗ್ಯಾರಂಟಿ ಕಾರ್ಡ್‌ಗಳಿಗೆ ಯಾವುದೇ ವಾರಂಟಿ ಇಲ್ಲ : ಕೋಟ ಶ್ರೀನಿವಾಸ ಪೂಜಾರಿ – Vishwanews24

Leave a Reply