ನವದೆಹಲಿ : ಇಂದು ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಲಿದ್ದು, ಕೆಲವು ಹಾಲಿ ಶಾಸಕರಿಗೆ ಟಿಕೆಟ್ ಸಿಗಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸುಳಿವು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಲಿದ್ದು, ಮೊದಲ ಪಟ್ಟಿಯಲ್ಲಿ 180 ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದೆ.
ಕೆಲವು ಹಾಲಿ ಶಾಸಕರನ್ನು ಹೊರತುಪಡಿಸಿ ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ಸಿಗಲಿದೆ ಎಂದು ಹೇಳಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯ 100 ಕ್ಕೂ ಹೆಚ್ಚು ಪೊಲೀಸರು ಹಾಗೂ 2 ಕೆಎಸ್‌ಆರ್ ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ ಈಗಾಗಲೇ ಕೇಂದ್ರೀಯ ಸಂಸದೀಯ ಮಂಡಳಿಯ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಮಾಡಿದ್ದು, ಇಂದು ಮಧ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಿ ಬಳಿಕ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…