ನವದೆಹಲಿ: ಅಭ್ಯರ್ಥಿಗಳ ಆಯ್ಕೆಗೆ ತೀವ್ರ ಕಸರತ್ತು ನಡೆಸುತ್ತಿರುವ ಬಿಜೆಪಿ ಇಂದು ತನ್ನ ಮೊದಲ ಪಟ್ಟಿ ಪ್ರಕಟಿಸುತ್ತಿದೆ. ಇಂದು ಮಧ್ಯಾಹ್ನದ ವೇಳೆಗೆ 175 ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಿದೆ. ಭಾನುವಾರ ಚುನಾವಣಾ ಸಮಿತಿ ಸಭೆ ನಡೆಸಿರುವ ವರಿಷ್ಠರು ಸಚಿವರು ಸೇರಿದಂತೆ 85ಕ್ಕೂ ಹೆಚ್ಚು ಹಾಲಿ ಶಾಸಕರ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಕರ್ನಾಟಕದಲ್ಲಿ ಗುಜರಾತ್, ಉತ್ತರ ಪ್ರದೇಶದ ಮಾದರಿಯನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಕ್ಕೆ ಹಿಂದೇಟು ಹಾಕಿರುವ ಬಿಜೆಪಿ ಹೈಕಮಾಂಡ್ ಬಹುತೇಕ ಸಚಿವರು ಮತ್ತು ಹಾಲಿ ಶಾಸಕರಿಗೆ ಟಿಕೆಟ್ ನೀಡಲು ನಿರ್ಧರಿಸಿದೆ. ಸುಮಾರು 20 ಶಾಸಕರಿಗೆ ಟಿಕೆಟ್ ತಪ್ಪಬಹುದು ಎನ್ನಲಾಗಿದ್ದು ಸರ್ವೆ ವರದಿಗಳಲ್ಲಿ ಖುಣಾತ್ಮಕ ವರದಿ ಬಂದಿರುವ ಹಿನ್ನಲೆಯಲ್ಲಿ ಅನಿವಾರ್ಯವಾಗಿ ಕೈ ಬಿಡಲಾಗುತ್ತಿದೆ.
ಈ ಬಾರಿ ಬಿಜೆಪಿಗೆ ಹಿನ್ನಡೆಯಾಗಬಹುದು ಎಂದು ಚುನಾವಣಾ ಸಮೀಕ್ಷೆಗಳು ತಿಳಿಸಿದ ಬೆನ್ನಲ್ಲೇ ಹೈಕಮಾಂಡ್ ನಾಯಕರು ಸರಣಿ ಸಭೆ ನಡೆಸಿ ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡುತ್ತಿದ್ದಾರೆ. ಈ ಬಾರಿ ಎರಡು ಡಜನ್‌ಗೂ ಹೆಚ್ಚು ಶಾಸಕರನ್ನು ಕೈ ಬಿಡುವ ಸಾಧ್ಯತೆ ಇದ್ದು, ಆಡಳಿತ ವಿರೋಧಿ ಅಲೆ, ಭ್ರಷ್ಟಾಚಾರ ಆರೋಪ, ಚಾರಿತ್ರ್ಯ ಕಾರಣದಿಂದ ಇಮೇಜ್ ಕಳೆದುಕೊಂಡ ನಾಯಕರಿಗೆ ಗೇಟ್ ಪಾಸ್ ನೀಡಲು ಸಭೆ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.
ಈ ಶಾಸಕರಿಗೆ ಟಿಕೆಟ್ ಕೈತಪ್ಪುತ್ತಾ?
ಚನ್ನಗಿರಿ – ಮಾಡಾಳ್ ವಿರೂಪಾಕ್ಷಪ್ಪ
ಹಾವೇರಿ – ನೆಹರೂ ಓಲೆಕಾರ್
ಮೂಡಿಗೆರೆ – ಎಂ ಪಿ ಕುಮಾರಸ್ವಾಮಿ
ಚಿತ್ರದುರ್ಗ – ಜಿ ಎಚ್ ತಿಪ್ಪಾರೆಡ್ಡಿ
ಯಾದಗಿರಿ – ವೆಂಕಟರೆಡ್ಡಿ ಮುದ್ನಾಳ
ಕನಕಗಿರಿ – ಬಸವರಾಜ ದಡೇಸುಗೂರು
ಶಿವಮೊಗ್ಗ – ಕೆ ಎಸ್ ಈಶ್ವರಪ್ಪ
ಅಥಣಿ – ಮಹೇಶ್ ಕುಮಟಳ್ಳಿ
ರಾಣೆಬೆನ್ನೂರು – ಅರುಣ್ ಕುಮಾರ್ ಪೂಜಾರ್
ರಾಯಚೂರು – ಡಾ.ಶಿವರಾಜ್ ಪಾಟೀಲ್
ಪುತ್ತೂರು – ಸಂಜೀವ್ ಮಠಂದೂರು
ಉಡುಪಿ – ರಘುಪತಿ ಭಟ್
ಭಟ್ಕಳ – ಸುನೀಲ್ ನಾಯ್ಕ
ಸೊರಬ – ಕುಮಾರ್ ಬಂಗಾರಪ್ಪ
ಆಳಂದ – ಸುಭಾಷ್ ಗುತ್ತೇದಾರ್
ಹೊಸದುರ್ಗ – ಗೂಳಿಹಟ್ಟಿ ಶೇಖರ್
ಧಾರವಾಡ – ಅಮೃತ ದೇಸಾಯಿ
ದಾವಣಗೆರೆ ಉತ್ತರ – ಎಸ್ ಎ ರವೀಂದ್ರನಾಥ್
ಕಾಪು – ಲಾಲಾಜಿ ಮೆಂಡನ್
ಚಿಕ್ಕಪೇಟೆ – ಉದಯ್ ಗರುಡಾಚಾರ್
ಎಸ್.ಎ.ರವೀಂದ್ರನಾಥ್– ದಾವಣಗೆರೆ ಉತ್ತರ (ನಿವೃತ್ತಿ ಘೋಷಣೆ)
ಲಿಂಗಣ್ಣ– ಮಾಯಕೊಂಡ
ಅಥಣಿ – ಮಹೇಶ್ ಕುಮಟಳ್ಳಿ
ಕಾಗವಾಡ- ಶ್ರೀಮಂತ ಪಾಟೀಲ್
ಬೈಂದೂರು- ಸುಕುಮಾರ್ ಶೆಟ್ಟಿ
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…