ಉಡುಪಿ

ಬಿಜೆಪಿ ಅಭ್ಯರ್ಥಿ ಲಾಲಾಜಿ ಮೆಂಡನ್‌ ಪರ ಪ್ರಚಾರ ರಥ ಯಾತ್ರೆಗೆ ಚಾಲನೆ

ಕಾಪು: ಕೇಂದ್ರದ ಮೋದಿ ಸರಕಾರದ ಸಾಧನೆಯನ್ನು ಬಿಂಬಿಸುತ್ತಾ, ಕಾಪು ಕ್ಷೇತ್ರ ಬಿಜೆಪಿ ಅಭ್ಯರ್ಥಿ ಲಾಲಾಜಿ ಆರ್‌. ಮೆಂಡನ್‌ ಪರವಾಗಿ ಕ್ಷೇತ್ರಾದ್ಯಂತ ಸಂಚರಿಸಲಿರುವ ಚುನಾವಣಾ ಪ್ರಚಾರ ರಥ ಯಾತ್ರೆಗೆ ಬುಧವಾರ ಸಂಜೆ ಚಾಲನೆ ನೀಡಲಾಯಿತು.

ಯಾತ್ರೆಗೆ ಚಾಲನೆ ನೀಡಿದ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಗುರ್ಮೆ ಸುರೇಶ್‌ ಶೆಟ್ಟಿ ಮಾತನಾಡಿ, ಕಾಪು ಕ್ಷೇತ್ರದ ಜನತೆ ಬದಲಾವಣೆ ಬಯಸುತ್ತಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್‌ ಕೈಗೆ ನೀಡಿದ ಅಧಿಕಾರ ಮತ್ತೆ ಬಿಜೆಪಿಯ ಕೈಗೆ ಮರಲಿದೆ. ಬಿಜೆಪಿಯ ಗೆಲುವಿನೊಂದಿಗೆ ಕಾಂಗ್ರೆಸ್‌ ಅಭ್ಯರ್ಥಿಯನ್ನು ಮರಳಿ ಪುತ್ತೂರಿಗೆ ಕಳುಹಿಸಲು ಕಾರ್ಯಕರ್ತರ ತಂಡ ಸಿದ್ಧವಾಗಿದೆ ಎಂದರು.

ಬಿಜೆಪಿ ಕ್ಷೇತ್ರಾಧ್ಯಕ್ಷ ಪ್ರಕಾಶ್‌ ಶೆಟ್ಟಿ ಮಾತನಾಡಿ, ಕೇಂದ್ರದ ಮೋದಿ ಸರಕಾರದ ಸಾಧನೆ ಮತ್ತು ರಾಜ್ಯ ಕಾಂಗ್ರೆಸ್‌ ಸರಕಾರದ ವೈಫಲ್ಯವನ್ನು ಜನರಿಗೆ ತಿಳಿಸುತ್ತಾ ಕ್ಷೇತ್ರಾದ್ಯಂತ ಸಂಚರಿಸಲಿರುವ ಪ್ರಚಾರ ರಥಯಾತ್ರೆಯು ಜನರಲ್ಲಿ ಸಂಚಲನ ಮೂಡಿಸಲಿದೆ. ಆ ಮೂಲಕ ಬಿಜೆಪಿಗೆ ಹೆಚ್ಚಿನ ಜನಬೆಂಬಲ ದೊರಕಿಸಿಕೊಡಲಿದೆ ಎಂದರು.

ಬಿಜೆಪಿ ಅಭ್ಯರ್ಥಿ / ಮಾಜಿ ಶಾಸಕ ಲಾಲಾಜಿ ಆರ್‌. ಮೆಂಡನ್‌ ಮಾತನಾಡಿ, ಕಾಪು ಕ್ಷೇತ್ರದ ಕಾಂಗ್ರೆಸ್‌ ಶಾಸಕರ ದುರಾಡಳಿತ ಮತ್ತು ಪಕ್ಷ ಮತ್ತು ದ್ವೇಷದ ರಾಜಕೀಯದಿಂದಾಗಿ ಜನತೆ ಬೇಸತ್ತಿದಾರೆ. ಉಡುಪಿಯಲ್ಲಿ ಮಂಗಳವಾರ ನಡೆದ ಪ್ರಧಾನ ಮೋದಿಯವರ ಕಾರ್ಯಕ್ರಮ ಕಾರ್ಯಕರ್ತರಲ್ಲಿ ಮತ್ತಷ್ಟು ಉತ್ಸಾಹವನ್ನು ಮೂಡಿಸಿದೆ. ಕಾಪುವಿನಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಪ್ರತಿಯೋರ್ವರೂ ಪ್ರತಿಜ್ಞೆ ಸೀÌಕರಿಸ ಬೇಕಿದೆ ಎಂದರು.

ಬಿಜೆಪಿ ಜಿಲ್ಲಾ ವಕ್ತಾರ ಕಟಪಾಡಿ ಶಂಕರ ಪೂಜಾರಿ, ಮುಖಂಡರಾದ ಗಂಗಾಧರ ಸುವರ್ಣ, ರಥ ಯಾತ್ರೆ ಉಸ್ತುವಾರಿ ನಾಗರಾಜ ಶೆಟ್ಟಿ, ಪ್ರಸಾದ್‌ ಶೆಟ್ಟಿ ಕುತ್ಯಾರು, ಜೆರಾಲ್ಡ್‌ ಫೆರ್ನಾಂಡಿಸ್‌, ಇಂದಿರಾ ಲಾಲಾಜಿ ಮೆಂಡನ್‌, ಕೇಸರಿ ಯುರಾಜ್‌, ಸುಮಾ ಯು. ಶೆಟ್ಟಿ, ಮಮತಾ ಸಾಲ್ಯಾನ್‌, ಪ್ರಸಾದ್‌ ಶೆಟ್ಟಿ ಎರ್ಮಾಳು, ಸಚಿನ್‌ ಬೊಳೆj, ನಝೀರ್‌ ಶೇಖ್‌, ನವೀನ್‌ ಎಸ್‌.ಕೆ., ನವೀನ್‌ ಅಮೀನ್‌ ಮೊದಲಾದವರು ಉಪಸ್ಥಿತರಿದ್ದರು.

 

Vishwa News 24

Recent Posts

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

5 minutes ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

35 minutes ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

45 minutes ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

1 hour ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

1 hour ago

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ- vishwanews24

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ  ಯಾತ್ರೆ ಕೈಗೊಂಡಿದ್ದಾರೆ.…

2 hours ago