Featured

ಬಿಜೆಪಿ ಅವಧಿಯ ಅಕ್ರಮಗಳ ಬಗ್ಗೆ ಕಾಂಗ್ರೆಸ್ ಸರ್ಕಾರದಿಂದ ತನಿಖೆ ಆರಂಭ – Vishwanews24

ಬಿಜೆಪಿ ಅವಧಿಯ ಅಕ್ರಮಗಳ ಬಗ್ಗೆ ಕಾಂಗ್ರೆಸ್ ಸರ್ಕಾರದಿಂದ ತನಿಖೆ ಆರಂಭ – ಮೊದಲ FIR ದಾಖಲು

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವಂತ ಅಕ್ರಮಗಳ ಬಗ್ಗೆ ತನಿಖೆಯನ್ನು ಕಾಂಗ್ರೆಸ್ ಸರ್ಕಾರ ಶುರು ಮಾಡಿದೆ. ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಗಂಗಾ ಕಲ್ಯಾಣ ಯೋಜನೆಯಲ್ಲಿ ನಡೆದಿರುವಂತ ಅಕ್ರಮದ ತನಿಖೆ ಸಂಬಂಧ ಮೊದಲ ಎಫ್‌ಐಆರ್ ದಾಖಲಿಸಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ನಂತ್ರ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವಂತ ಅಕ್ರಮಗಳ ಬಗ್ಗೆ ತನಿಖೆ ಶುರು ಮಾಡಿದೆ.

ಗಂಗಾ ಕಲ್ಯಾಣ ಯೋಜನೆಯಲ್ಲಿ ಕೋಟ್ಯಂತರ ರೂ ಅಕ್ರಮ ನಡೆದಿದೆ ಎಂಬುದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ.

ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಗಂಗಾ ಕಲ್ಯಾಣ ಯೋಜನೆಯಲ್ಲಿ ನಡೆದಿರುವಂತ ಕೋಟ್ಯಂತರ ರೂ ಅಕ್ರಮದ ಬಗ್ಗೆ ತನಿಖೆ ಕೈಗೊಳ್ಳುವಂತೆ ಸರ್ಕಾರ ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಮೂಲಕ ಬಿಜೆಪಿ ಅವಧಿಯ ಅಕ್ರಮಗಳ ಬಗ್ಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತ್ರ ತನಿಖೆ ಆರಂಭಗೊಂಡಿದೆ.

ಅಂದಹಾಗೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗಂಗಾಕಲ್ಯಾಣ ಯೋಜನೆಯಲ್ಲಿ ಭಾರೀ ಅಕ್ರಮ ನಡೆದಿದ್ದಂತ ಆರೋಪ ಕೇಳಿ ಬಂದಿತ್ತು. ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪದೇ ಕೋಟ್ಯಾಂತರ ರೂ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲೇ ಕಾಂಗ್ರೆಸ್ ಸರ್ಕಾರದಿಂದ ಯೋಜನೆಯಲ್ಲಿನ ಅಕ್ರಮದ ಬಗ್ಗೆ ತನಿಖೆಗಾಗಿ ಮೊದಲ ಎಫ್‌ಐಆರ್ ದಾಖಲಾಗಿದೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

11 minutes ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

2 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

3 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

3 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

3 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

4 hours ago