ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವಂತ ಅಕ್ರಮಗಳ ಬಗ್ಗೆ ತನಿಖೆಯನ್ನು ಕಾಂಗ್ರೆಸ್ ಸರ್ಕಾರ ಶುರು ಮಾಡಿದೆ. ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಗಂಗಾ ಕಲ್ಯಾಣ ಯೋಜನೆಯಲ್ಲಿ ನಡೆದಿರುವಂತ ಅಕ್ರಮದ ತನಿಖೆ ಸಂಬಂಧ ಮೊದಲ ಎಫ್‌ಐಆರ್ ದಾಖಲಿಸಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ನಂತ್ರ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವಂತ ಅಕ್ರಮಗಳ ಬಗ್ಗೆ ತನಿಖೆ ಶುರು ಮಾಡಿದೆ.
ಗಂಗಾ ಕಲ್ಯಾಣ ಯೋಜನೆಯಲ್ಲಿ ಕೋಟ್ಯಂತರ ರೂ ಅಕ್ರಮ ನಡೆದಿದೆ ಎಂಬುದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ.
ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಗಂಗಾ ಕಲ್ಯಾಣ ಯೋಜನೆಯಲ್ಲಿ ನಡೆದಿರುವಂತ ಕೋಟ್ಯಂತರ ರೂ ಅಕ್ರಮದ ಬಗ್ಗೆ ತನಿಖೆ ಕೈಗೊಳ್ಳುವಂತೆ ಸರ್ಕಾರ ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಮೂಲಕ ಬಿಜೆಪಿ ಅವಧಿಯ ಅಕ್ರಮಗಳ ಬಗ್ಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತ್ರ ತನಿಖೆ ಆರಂಭಗೊಂಡಿದೆ.
ಅಂದಹಾಗೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗಂಗಾಕಲ್ಯಾಣ ಯೋಜನೆಯಲ್ಲಿ ಭಾರೀ ಅಕ್ರಮ ನಡೆದಿದ್ದಂತ ಆರೋಪ ಕೇಳಿ ಬಂದಿತ್ತು. ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪದೇ ಕೋಟ್ಯಾಂತರ ರೂ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲೇ ಕಾಂಗ್ರೆಸ್ ಸರ್ಕಾರದಿಂದ ಯೋಜನೆಯಲ್ಲಿನ ಅಕ್ರಮದ ಬಗ್ಗೆ ತನಿಖೆಗಾಗಿ ಮೊದಲ ಎಫ್‌ಐಆರ್ ದಾಖಲಾಗಿದೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…