Featured

ಬಿಜೆಪಿ ಅವರು ಸೈಕಲ್ ತುಳಿಯಲಿ ಆರೋಗ್ಯಕ್ಕೆ ಒಳ್ಳೆಯದು : ಬಿಜೆಪಿ ಸೈಕಲ್ ಪ್ರತಿಭಟನೆಗೆ ಎಂ.ಬಿ ಪಾಟೀಲ್ ಲೇವಡಿ – vishwanews24

ಮೋದಿ ತೈಲ ಬೆಲೆ ಏರಿಕೆ ಮಾಡಿದಾಗ ಬಿಜೆಪಿಯವರು ಯಾಕೆ ಪ್ರತಿಭಟಿಸಲಿಲ್ಲ: ಎಂ.ಬಿ.ಪಾಟೀಲ್

ಬೆಂಗಳೂರು: ತೈಲ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ನಡೆಸಿದ ಸೈಕಲ್ ಪ್ರತಿಭಟನೆಗೆ ಸಚಿವ ಎಂ.ಬಿ ಪಾಟೀಲ್  ಲೇವಡಿ ಮಾಡಿದ್ದಾರೆ. ಬಿಜೆಪಿ ಅವರು ಸೈಕಲ್ ತುಳಿಯಲಿ ಆರೋಗ್ಯಕ್ಕೆ ಒಳ್ಳೆಯದು ಎಂದು ಟೀಕಿಸಿದ್ದಾರೆ.

ಬಿಜೆಪಿ ಪ್ರತಿಭಟನೆ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಯುಪಿಎ ಮನಮೋಹನ್ ಸಿಂಗ್ ಸರ್ಕಾರ ಇದ್ದಾಗ ಜಾಗತಿಕ ಮಾರ್ಕೆಟ್‌ನಲ್ಲಿ ಕಚ್ಚಾತೈಲ ಬೆಲೆ ಜಾಸ್ತಿ ಇತ್ತು. ಆಗಲೂ ತೈಲ ಬೆಲೆ ಕಡಿಮೆ ಇತ್ತು. ಮೋದಿ ಸರ್ಕಾರ ಬಂದಾಗ ಕಚ್ಚಾತೈಲ ಬೆಲೆ ಕಡಿಮೆ ಆದರೂ ಮೋದಿ ಸರ್ಕಾರ ತೈಲಬೆಲೆ ಏರಿಕೆ ಮಾಡಿತ್ತು. ಆಗ ಯಾಕೆ ಬಿಜೆಪಿ ಅವರು ಪ್ರತಿಭಟನೆ ಮಾಡಿಲ್ಲ. ನಾವು 3 ರೂ. ಮಾತ್ರ ಜಾಸ್ತಿ ಮಾಡಿರೋದು. ಬೇರೆ ರಾಜ್ಯಗಳ ಜೊತೆ ನ್ಯಾಷನಲೈಸ್ ಮಾಡೋಕೆ ನಾವು ಏರಿಕೆ ಮಾಡಿದ್ದೇವೆ. ಬೆಲೆ ಏರಿಕೆ ಮಾಡಿದ್ದರೂ ಬೇರೆ ರಾಜ್ಯಕ್ಕಿಂತ ನಮ್ಮದು ಕಡಿಮೆ ಇದೆ ಎಂದು ಬೆಲೆ ಏರಿಕೆ ಸಮರ್ಥನೆ ಮಾಡಿಕೊಂಡರು.

ಮೋದಿ ಸರ್ಕಾರದಲ್ಲಿ ಬೆಲೆ ಜಾಸ್ತಿ ಮಾಡಿದಾಗ ಮೋದಿ ಮುಂದೆ ಮಾತಾಡೋ ಧೈರ್ಯ ಇವರಿಗೆ ಇರಲಿಲ್ಲ. ಅವತ್ತು ಜಾಸ್ತಿ ಮಾಡಿದಾಗ ಯಾಕೆ ಜಾಸ್ತಿ ಮಾಡಿದ್ರಿ ಅಂತ ಮೋದಿಗೆ ಹೇಳಬೇಕಿತ್ತು. ನಮ್ಮ ರಾಜ್ಯದ ಸಂಸದರು ಮಾತಾಡಿಲ್ಲ. ಈಗ ಯಾಕೆ ಮಾತನಾಡುತ್ತಾರೆ. ಸುಮ್ಮನೆ ಬಿಜೆಪಿ ಅವರು ಸೈಕಲ್ ಪ್ರತಿಭಟನೆ ಮಾಡಿದ್ದಾರೆ. ಮಾಡಲಿ ಅದು ಅವರ ಆರೋಗ್ಯಕ್ಕೆ ಒಳ್ಳೆಯದು.ನಾವು ಕೂಡಾ ಹಣ ಕೂಡಿಸಬೇಕು. ಹೀಗಾಗಿ ಜಾಸ್ತಿ ಮಾಡಿದ್ದೇವೆ. ಅವತ್ತು ಮೋದಿ ಜಾಸ್ತಿ ಮಾಡಿದಾಗ ಅಶೋಕ್, ವಿಜೇಂದ್ರ ಹೋಗಿ ಯಾಕೆ ಕೇಳಲಿಲ್ಲ ಎಂದು ಬಿಜೆಪಿ ನಾಯಕರನ್ನು ಪ್ರಶ್ನಿಸಿದರು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

8 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

9 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

9 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

10 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

10 hours ago