ಬೆಂಗಳೂರು: ಬಿಜೆಪಿ ಆಂತರಿಕ ಕಿತ್ತಾಟದಿಂದ ಪಕ್ಷಕ್ಕೆ ಹಿನ್ನಡೆಯಾಗಿದೆ. 15-20 ದಿನಗಳಲ್ಲಿ ಎಲ್ಲಾ ಗೊಂದಲಗಳು ಪರಿಹಾರ ಆಗಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಪಕ್ಷದ ಸಹ ಉಸ್ತುವಾರಿ ಸುಧಾಕರ್ ರೆಡ್ಡಿಯವರ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಪಕ್ಷದ ವಿಚಾರವನ್ನ ನಾಲ್ಕು ಗೋಡೆ ಮಧ್ಯೆ ಮಾತನಾಡಬೇಕು ಎಂದು ಹೈಕಮಾಂಡ್ ಹೇಳಿದೆ. ನಮ್ಮ ಸಹ ಉಸ್ತುವಾರಿ ಸುಧಾಕರ್ ರೆಡ್ಡಿಯವರು ಕೂಡ ಇದೇ ಹೇಳಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ನಿತ್ಯ ಅಕ್ರಮದಲ್ಲಿ ತೊಡಗಿದೆ. ಲೂಟಿ, ಕಮಿಷನ್, ಮೈಕ್ರೋ ಫೈನಾನ್ಸ್ ಸಾವು, ಬಾಣಂತಿಯರ ಸಾವು ಸೇರಿ ಅನೇಕ ವಿಷಯಗಳಿವೆ. ಇದರ ವಿರುದ್ಧ ನಾವು ಹೋರಾಟ ಮಾಡಬೇಕು. ನಮ್ಮ ಆಂತರಿಕ ಕಿತ್ತಾಟದಿಂದ ನಮಗೆ ಸ್ವಲ್ಪ ಅಡೆತಡೆ ಆಗಿದೆ. 15-20 ದಿನಗಳಲ್ಲಿ ಗೊಂದಲಗಳಿಗೆ ತೆರೆ ಬೀಳಲಿದ್ದು, ನಾರ್ಮಲ್ ಬಿಜೆಪಿ ರೀತಿ ಕೆಲಸ ಮುಂದುವರೆಸುತ್ತೇವೆ ಎಂದಿದ್ದಾರೆ.
ಎಲ್ಲಾ ನಾಯಕರು ಒಟ್ಟಾಗಿ ಹೋಗಬೇಕು. ಇಂತಹ ಘಟನೆ ಅಗಬಾರದಿತ್ತು ಆಗಿದೆ. ಇಂತಹ ಕಿತ್ತಾಟ ಪ್ರಾರಂಭದಲ್ಲೇ ಕಡಿಮೆ ಆಗಬೇಕಿತ್ತು. ಈಗ ಎಲ್ಲವೂ ಸರಿ ಆಗುತ್ತದೆ. ಎಲ್ಲವನ್ನೂ ಸರಿ ಮಾಡಿಕೊಂಡು ಹೋಗುತ್ತೇವೆ ಎಂದಿದ್ದಾರೆ.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…