ಉಡುಪಿ : ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ಅವಧಿಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಿಂದೆಂದೂ ಕಂಡ ದಾಖಲೆ ಪ್ರಮಾಣದ ಅಭಿವೃದ್ಧಿ ಕೆಲಸ ಕಾರ್ಯಗಳು ನಡೆದಿರುವುದನ್ನು ಉಡುಪಿಯ ಮಹಾಜನತೆ ಇಂದಿಗೂ ಮರೆತಿಲ್ಲ. ನವ ಉಡುಪಿಯ ನಿರ್ಮಾತೃ ದಿ.| ಡಾ.ವಿ.ಯಸ್. ಆಚಾರ್ಯರ ಅಭಿವೃದ್ಧಿ ಪರ ಚಿಂತನೆಯ ದೂರದರ್ಶಿತ್ವದ ಯೋಜನೆಗಳ ಸಾಕಾರಕ್ಕೆ ಪಣ ತೊಟ್ಟಿರುವ ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ. ರಘುಪತಿ ಭಟ್ ಅವರ ಗೆಲುವು ನಿಶ್ಚಿತ ಎಂದು ಬಿಜೆಪಿ ಜಿಲ್ಲಾ ಸಹವಕ್ತಾರ ಶಿವಕುಮಾರ್ ಅಂಬಲಪಾಡಿ ತಿಳಿಸಿದ್ದಾರೆ.
ಅವರು ವಿಧಾನಸಭಾ ಚುಣಾವಣೆಯ ಪ್ರಯುಕ್ತ ನಡೆಯುತ್ತಿರುವ ಮಹಾ ಸಂಪರ್ಕ ಅಭಿಯಾನದಡಿ ಮನೆ ಮನೆ ಭೇಟಿಯ ಬಳಿಕ ಬೂತ್ ಸಭೆಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.
ಪ್ರಧಾನಿ ಮೋದಿಯವರ ಮೇ ೧ರ ಉಡುಪಿ ಭೇಟಿ ಹಾಗೂ ಸಾರ್ವಜನಿಕ ಭಾಷಣ ಕಾರ್ಯಕ್ರಮವು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಚೈತನ್ಯವನ್ನು ಮೂಡಿಸಿದೆ. ಅಲ್ಲದೆ ಉಡುಪಿ ಜಿಲ್ಲೆಯ ಎಲ್ಲಾ ೫ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ನಿಶ್ಚಿತ ಗೆಲುವಿಗೆ ಪೂರಕ ವಾತಾವರಣ ಸೃಷ್ಟಿಸಿದೆ ಎಂದು ಅವರು ಹೇಳಿದರು.
ರಘುಪತಿ ಭಟ್ ರ ನೇತೃತ್ವದಲ್ಲಿರಾ. ಹೆ. ೧೬೯ಎ ಕಾಮಗಾರಿಯು ವೇಗ ಪಡೆಯಲಿದೆ. ಅಭಿವೃದ್ಧಿ ಪರ ಚಿಂತನೆಯುಳ್ಳ ಉಡುಪಿ ಕ್ಷೇತ್ರದ ಮಹಾಜನತೆ ರಘುಪತಿ ಭಟ್ ಅವರ ಪ್ರಚಂಡ ಗೆಲುವಿಗೆ ಸಹಕರಿಸಬೇಕು ಎಂದು ಅವರು ಕೋರಿದರು. ಉಡುಪಿ ತಾ.ಪಂ. ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು ಮಾತನಾಡಿದರು.
ಅಂಬಲಪಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಎ. ಯೋಗೀಶ್ ಶೆಟ್ಟಿ, ಗ್ರಾ.ಪಂ. ಸದಸ್ಯೆ ಪುಷ್ಪಾ ಸಂತೋಷ್ ಶೆಟ್ಟಿ, ಭಾರತಿ ಭಾಸ್ಕರ್, ಬಿಜೆಪಿ ಅಂಬಲಪಾಡಿ ಬೂತ್ ಅಧ್ಯಕ್ಷ ಮಹೇಂದ್ರ ಕೋಟ್ಯಾನ್, ಬೂತ್ ಕಾರ್ಯದರ್ಶಿ ಸತೀಶ್ ರಾವ್, ಅಶೋಕ್, ಸುಧೀರ್ ಕುಮಾರ್, ಸಂತೋಷ್ ಸುವರ್ಣ, ಗೋವಿಂದ ಪಾಲನ್, ಉಮಾನಾಥ್, ಕರುಣಾಕರ ಪಾಲನ್ ಉಪಸ್ಥಿತರಿದ್ದರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…