Featured

ಬಿಜೆಪಿ ಎ ಟೀಂ ಎನ್ನುವುದು ಖಾತ್ರಿಯಾಗಿದೆ , ಬಿ ಟೀಂ ಯಾರಾದರೇನು : ಸಿಎಂ ಬೊಮ್ಮಾಯಿ – Vishwanews24

ಬಿಜೆಪಿ ಎ ಟೀಂ ಎನ್ನುವುದು ಖಾತ್ರಿಯಾಗಿದೆ , ಬಿ ಟೀಂ ಯಾರಾದರೇನು : ಸಿಎಂ ಬೊಮ್ಮಾಯಿ

ಬೆಳಗಾವಿ: ಎಚ್.ಡಿ. ಕುಮಾರಸ್ವಾಮಿ ಮತ್ತು‌ ಸಿದ್ದರಾಮಯ್ಯ ಮಧ್ಯೆ ನಾನು ಹೋಗುವುದಿಲ್ಲ. ಭಾರತೀಯ ಜನತಾ ಪಾರ್ಟಿ ಎ ಟೀಂ ಎನ್ನುವುದು ಖಾತ್ರಿಯಾಗಿದೆ. ಬಿ ಟೀಂ ಯಾವುದಾದರೇನು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಶನಿವಾರ ಡಾ.‌ಪ್ರಭಾಕರ ಕೋರೆ ಅವರ ನಿವಾಸಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ವ್ಯಖ್ಯಾನ ಬಗ್ಗೆ ನಾನು ಮಾತನಾಡುವುದಿಲ್ಲ.

ಕಾಂಗ್ರೆಸ್ ಪಕ್ಷ ಜೆಡಿಎಸ್ ಗೆ, ಜೆಡಿಎಸ್ ಪಕ್ಷ ಕಾಂಗ್ರೆಸ್ ಗೆ ಬಿ ಟೀಂ ಎನ್ನುತ್ತಿದೆ.‌ ಹೀಗಾಗಿ ಎ ಟೀಂ ಎನ್ನುವುದು ಬಿಜೆಪಿ ಪಕ್ಕಾ ಆಗಿದೆ ಎಂದರು.
ನನ್ನ ವಿರುದ್ಧವೇ ಸಿದ್ದರಾಮಯ್ಯ ಹೆಚ್ಚು ಮಾತನಾಡುತ್ತಾರೆ. ಅವರು ಬಳಸುವ ಪದಗಳು ನನ್ನ ಬಗ್ಗೆ ಜಾಸ್ತಿ ಇರುತ್ತದೆ. ಬೆಳಗಾವಿಗೆ ಬಂದಾಗ ನೀವೇ ನೋಡಿದೀರಲ್ಲ ಎಂದರು.

ಬೆಳಗಾವಿಯ ಎಲ್ಲ‌ ಸಾಹುಕಾರರೂ ಒಗ್ಗಟ್ಟಿದ್ದಾರೆ. ಎಲ್ಲರೂ ತಮ್ಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಎಲ್ ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ.‌ಪ್ರಭಾಕರ ಕೋರೆ ಮುನಿಸಿಕೊಂಡಿಲ್ಲ. ಅವರನ್ನು ನಿರ್ಲಕ್ಷಿಸುವ ಮಾತೇ ಇಲ್ಲ. ನಮ್ಮ ಹಿರಿಯರು, ಮಾರ್ಗದರ್ಶಕರು. ಅವರದ್ದೇ ಆದ ಸ್ಥಾನ ಇದೆ. ನಾವು ಅವರನ್ನು ಅಲ್ಲಗಳೆದಿಲ್ಲ. ಪೂರ್ವಭಾವಿಯಾಗಿ ಆರು ತಿಂಗಳ ಮುಂಚೆಯೇ ಅವರು ಡಾಕ್ಟರೇಟ್ ಪಡೆಯಲು ಹೋಗಿದ್ದರು. ನನಗೆ ಹೇಳಿ ಹೋಗಿದ್ದರು. ನಾಲ್ಕು ದಶಕಗಳ ಸುದೀರ್ಘ ಅವಧಿಯಲ್ಲಿ ಸಾರ್ವಜನಿಕ ಸೇವೆಯಲ್ಲಿ ಮಾಡಿರುವ ಸೇವೆಯನ್ನು ಪಕ್ಷ ಹಾಗೂ ನಾವು ಗುರುತಿಸುತ್ತೇವೆ ಎಂದು ಹೇಳಿದರು.
ನಾಲ್ಕೂ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಇಬ್ಬರು ವಾಯವ್ಯ ಕ್ಷೇತ್ರದಲ್ಲಿ ಅರುಣ ಶಹಾಪುರ ಹಾಗೂ ಹನುಮಂತ ನಿರಾಣಿ ಹೆಚ್ಚಿನ ಅಂತರದಿಂದ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

15 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

15 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

16 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

16 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

17 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

17 hours ago