ಬೆಳಗಾವಿ: ಎಚ್.ಡಿ. ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಮಧ್ಯೆ ನಾನು ಹೋಗುವುದಿಲ್ಲ. ಭಾರತೀಯ ಜನತಾ ಪಾರ್ಟಿ ಎ ಟೀಂ ಎನ್ನುವುದು ಖಾತ್ರಿಯಾಗಿದೆ. ಬಿ ಟೀಂ ಯಾವುದಾದರೇನು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಶನಿವಾರ ಡಾ.ಪ್ರಭಾಕರ ಕೋರೆ ಅವರ ನಿವಾಸಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ವ್ಯಖ್ಯಾನ ಬಗ್ಗೆ ನಾನು ಮಾತನಾಡುವುದಿಲ್ಲ.
ಕಾಂಗ್ರೆಸ್ ಪಕ್ಷ ಜೆಡಿಎಸ್ ಗೆ, ಜೆಡಿಎಸ್ ಪಕ್ಷ ಕಾಂಗ್ರೆಸ್ ಗೆ ಬಿ ಟೀಂ ಎನ್ನುತ್ತಿದೆ. ಹೀಗಾಗಿ ಎ ಟೀಂ ಎನ್ನುವುದು ಬಿಜೆಪಿ ಪಕ್ಕಾ ಆಗಿದೆ ಎಂದರು.
ನನ್ನ ವಿರುದ್ಧವೇ ಸಿದ್ದರಾಮಯ್ಯ ಹೆಚ್ಚು ಮಾತನಾಡುತ್ತಾರೆ. ಅವರು ಬಳಸುವ ಪದಗಳು ನನ್ನ ಬಗ್ಗೆ ಜಾಸ್ತಿ ಇರುತ್ತದೆ. ಬೆಳಗಾವಿಗೆ ಬಂದಾಗ ನೀವೇ ನೋಡಿದೀರಲ್ಲ ಎಂದರು.
ಬೆಳಗಾವಿಯ ಎಲ್ಲ ಸಾಹುಕಾರರೂ ಒಗ್ಗಟ್ಟಿದ್ದಾರೆ. ಎಲ್ಲರೂ ತಮ್ಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಎಲ್ ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಮುನಿಸಿಕೊಂಡಿಲ್ಲ. ಅವರನ್ನು ನಿರ್ಲಕ್ಷಿಸುವ ಮಾತೇ ಇಲ್ಲ. ನಮ್ಮ ಹಿರಿಯರು, ಮಾರ್ಗದರ್ಶಕರು. ಅವರದ್ದೇ ಆದ ಸ್ಥಾನ ಇದೆ. ನಾವು ಅವರನ್ನು ಅಲ್ಲಗಳೆದಿಲ್ಲ. ಪೂರ್ವಭಾವಿಯಾಗಿ ಆರು ತಿಂಗಳ ಮುಂಚೆಯೇ ಅವರು ಡಾಕ್ಟರೇಟ್ ಪಡೆಯಲು ಹೋಗಿದ್ದರು. ನನಗೆ ಹೇಳಿ ಹೋಗಿದ್ದರು. ನಾಲ್ಕು ದಶಕಗಳ ಸುದೀರ್ಘ ಅವಧಿಯಲ್ಲಿ ಸಾರ್ವಜನಿಕ ಸೇವೆಯಲ್ಲಿ ಮಾಡಿರುವ ಸೇವೆಯನ್ನು ಪಕ್ಷ ಹಾಗೂ ನಾವು ಗುರುತಿಸುತ್ತೇವೆ ಎಂದು ಹೇಳಿದರು.
ನಾಲ್ಕೂ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಇಬ್ಬರು ವಾಯವ್ಯ ಕ್ಷೇತ್ರದಲ್ಲಿ ಅರುಣ ಶಹಾಪುರ ಹಾಗೂ ಹನುಮಂತ ನಿರಾಣಿ ಹೆಚ್ಚಿನ ಅಂತರದಿಂದ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…