Featured

ಬಿಜೆಪಿ ಕಾಂಗ್ರೆಸ್​ನ ಬ್ಯಾಂಕ್ ಖಾತೆಗಳನ್ನು ರದ್ದುಪಡಿಸಿದೆ  , ಪ್ರಚಾರಕ್ಕಾಗಿ ನಮ್ಮ ಬಳಿ ಹಣವಿಲ್ಲ : ಮಲ್ಲಿಕಾರ್ಜುನ ಖರ್ಗೆ – Vishwanews24

ಬಿಜೆಪಿ ಕಾಂಗ್ರೆಸ್​ನ ಬ್ಯಾಂಕ್ ಖಾತೆಗಳನ್ನು ರದ್ದುಪಡಿಸಿದೆ  , ಪ್ರಚಾರಕ್ಕಾಗಿ ನಮ್ಮ ಬಳಿ ಹಣವಿಲ್ಲ : ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ತಪ್ಪಾಗಿ ದೇಣಿಗೆ ಪಡೆದು ತನ್ನ ಬೊಕ್ಕಸ ತುಂಬಿಕೊಂಡಿದ್ದು, ಇದೀಗ ಕಾಂಗ್ರೆಸ್​ನ ಬ್ಯಾಂಕ್ ಖಾತೆಗಳನ್ನು ರದ್ದುಪಡಿಸಿದೆ ಎಂದು ಕಾಂಗ್ರೆಸ್​ ಗಂಭೀರ ಆರೋಪ ಮಾಡಿದೆ. ಈಗ ಕಾಂಗ್ರೆಸ್ ಚುನಾವಣಾ ಬಿಕ್ಕಟ್ಟು ಎದುರಿಸುತ್ತಿದೆ. ಪ್ರಚಾರಕ್ಕಾಗಿ ನಮ್ಮ ಬಳಿ ಹಣವಿಲ್ಲ. ಸೀತಾರಾಮ್ ಕೇಸರಿ ಅವರ ಕಾಲದ ನಿಧಿಗೆ ಸಂಬಂಧಿಸಿದಂತೆ ನಮಗೆ ನೋಟಿಸ್ ನೀಡಲಾಗುತ್ತಿದೆ ಎಂದು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್​ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್​ ಪತ್ರಿಕಾಗೋಷ್ಠಿ ನಡೆಸಿತು. ಐಟಿಯಂತಹ ಸಾಂವಿಧಾನಿಕ ಹಾಗೂ ನ್ಯಾಯಾಂಗ ಸಂಸ್ಥೆಗಳ ಮೇಲೆ ಆಡಳಿತ ಪಕ್ಷವು ನೇರ ಅಥವಾ ಪರೋಕ್ಷ ನಿಯಂತ್ರಣವನ್ನು ಹೊಂದಿರಬಾರದು ಎಂದಿದ್ದಾರೆ.

ಷಡ್ಯಂತ್ರದ ಭಾಗವಾಗಿ ಪ್ರಮುಖ ವಿರೋಧ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗಿದ್ದು, ಹಣದ ಕೊರತೆಯಿಂದ ಚುನಾವಣೆಗೆ ಸ್ಪರ್ಧಿಸಲು ಸಮಾನ ಅವಕಾಶ ಸಿಗುವುದಿಲ್ಲ ಎಂದು ಖರ್ಗೆ ಹೇಳಿದರು. ಈ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಬೇಕಾದರೆ ಸಮತಟ್ಟಾದ ಮೈದಾನ ನಿರ್ಮಾಣವಾಗಬೇಕು.

ಸಾಂವಿಧಾನಿಕ ಸಂಸ್ಥೆಗಳು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಬಯಸಿದರೆ, ನಮ್ಮ ಬ್ಯಾಂಕ್ ಖಾತೆಗಳನ್ನು ಮುಕ್ತವಾಗಿ ಪ್ರವೇಶಿಸಲು ಅವಕಾಶ ನೀಡಬೇಕು ಎಂದು ಖರ್ಗೆ ಹೇಳಿದರು. ಯಾವುದೇ ರಾಜಕೀಯ ಪಕ್ಷಗಳು ಆದಾಯ ತೆರಿಗೆ ವ್ಯಾಪ್ತಿಗೆ ಬರುವುದಿಲ್ಲ ಎಂದರು.

ದುರದೃಷ್ಟವಶಾತ್ ಇತ್ತೀಚೆಗೆ ಸುಪ್ರೀಂಕೋರ್ಟ್​ ಮಧ್ಯಪ್ರವೇಶಿಸಿದ ನಂತರ ಚುನಾವಣಾ ಬಾಂಡ್​ಗಳಿಗೆ ಸಂಬಂಧಿಸಿದಂತೆ ಹೊರಬಿದ್ದಿರುವ ಸಂಗತಿಗಳು ಆತಂಕಕಾರಿ ಹಾಗೂ ನಾಚಿಕೆಗೇಡಿನ ಅಂಗತಿಯಾಗಿದೆ ಎಂದು ಅವರು ಹೇಳಿದರು. ಇದು ದೇಶದ ಪ್ರತಿಷ್ಠೆಗೆ ಧಕ್ಕೆ ತಂದಿದೆ, 70 ವರ್ಷಗಳಲ್ಲಿ ನಮ್ಮ ದೇಶದಲ್ಲಿ ನಿರ್ಮಿಸಲಾದ ನ್ಯಾಯಯುತ ಚುನಾವಣೆ ಹಾಗೂ ಆರೋಗ್ಯಕರ ಪ್ರಜಾಪ್ರಭುತ್ವದ ಚಿತ್ರವನ್ನು ಪ್ರಶ್ನೆ ಮಾಡಲಾಗುತ್ತಿದೆ.

ಕಾಂಗ್ರೆಸ್ ಪಕ್ಷವನ್ನು ಆರ್ಥಿಕವಾಗಿ ಗುರಿಯಾಗಿಟ್ಟುಕೊಂಡು ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಲು ಬಿಜೆಪಿ ಚುನಾವಣಾ ಸಂಪನ್ಮೂಲಗಳ ಏಕಸ್ವಾಮ್ಯವನ್ನು ಹೊಂದಿದೆ ಎಂದು ಖರ್ಗೆ ಆರೋಪಿಸಿದರು.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಆರ್ಥಿಕವಾಗಿ ದುರ್ಬಲಗೊಳಿಸಲು ಪ್ರಧಾನಿಯವರಿಂದ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ಏಳು ಹಂತದ ಲೋಕಸಭೆ ಚುನಾವಣೆ ಏಪ್ರಿಲ್ 19 ರಂದು ಆರಂಭವಾಗಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago