Featured

ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಲೂಟಿ ಹೊಡೆಯುತ್ತಿದ್ದಾರೆ : ಈಶ್ವರಪ್ಪ ಆರೋಪ – vishwanews24

ರಾಜ್ಯದಲ್ಲಿರುವ ಕಾಂಗ್ರೆಸ್ ಹಗರಣಗಳ ಸರಮಾಲೆಯ ಸರ್ಕಾರವಾಗಿದೆ :ಈಶ್ವರಪ್ಪ

ಬಾಗಲಕೋಟೆ: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಹಗರಣಗಳ ಸರಮಾಲೆಯ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ದೂರಿದರು.

ನಗರದಲ್ಲಿ ಸುದ್ದಿದಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ನೇರವಾಗಿ ಮೂಡಾ ಹಗರಣ ಬಂದಿದೆ. ಈ ಆಪಾದನೆ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಬಂದ ಮೇಲೆ ಅವರು ಪ್ರತಿಯಾಗಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 22 ಹಗರಣಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ರೈತನ ತೆರಿಗೆ ಹಣ ಸಂಪೂರ್ಣ ದುರುಪಯೋಗ ಆಗುತ್ತಿದೆ ಎನ್ನುವುದು ರಾಜ್ಯದ ಪ್ರತಿಯೊಬ್ಬ ಪ್ರಜೆಗೂ ಅನುಮಾನವಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಗರಣಗಳು ನಡೆದಿದೆ. ಅವುಗಳನ್ನು ಸಿಬಿಐಗೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಆವಾಗ ಹೇಳುತ್ತಿದ್ದರು. ಈಗ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಅಪಾದಿಸುತ್ತಿದ್ದಾರೆ. ಭಯ ಪಕ್ಷಗಳ ನಾಯಕರು ಕೇವಲ ತನಿಖೆಯಾಗಲಿ ಎಂದು ಹೇಳುತ್ತಿದ್ದಾರೆ ವಿನಃ ಸಿಬಿಐಗೆ ನೀಡಲು ಯಾಕೆ ಹಿಂಜರಿಯುತ್ತಿದ್ದಾರೆ. ದೇಶದಲ್ಲಿ ಎರಡು ಸರ್ಕಾರದ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರದ ತನಿಖೆಯನ್ನು ಸಿಬಿಐಗೆ ನೀಡಿದರೆ ರಾಜ್ಯ ಮತ್ತು ದೇಶದಲ್ಲಿ ಯಾರು ಭ್ರಷ್ಟಾಚಾರ ಹಗರಣಗಳು ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿ ಜನರ ಮುಂದೆ ಬರುತ್ತದೆ. ಇಲ್ಲವಾದಲ್ಲಿ ಕೇವಲ ಪರಸ್ಪರ ಆರೋಪ ಆಪಾದನೆಗಳನ್ನು ಮಾಡಿದರೆ. ತಪ್ಪಿಸ್ತಸ್ಥರು ಯಾರು ಎಂಬುದು ಹೊರಗೆ ಬರುವುದಿಲ್ಲ. ಕೇವಲ ಟೀಕೆಗಳನ್ನು ಮಾಡುತ್ತಿದ್ದಾರೆ. ಸಿಬಿಐಗೆ ನೀಡಲು ಯಾರು ಸಿದ್ದವಿಲ್ಲ. ಒಬ್ಬರನ್ನೊಬ್ಬರು ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಲೂಟಿ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ: ರಾಜ್ಯದಲ್ಲಿ ಕಾಂಗ್ರೆಸ್ ಬಿಜೆಪಿ ಹೊಂದಾಣಿಕೆ ರಾಜಕಾರಣ ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ಈಶ್ವರಪ್ಪ ಆರೋಪಿಸಿದರು. ಶಿಕಾರಿಪುರದಲ್ಲಿ ಈಗಿನ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಚುನಾವಣೆಯಲ್ಲಿ ಗೆಲ್ಲಲು ಸಿದ್ದರಾಮಯ್ಯ ಅವರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಬಸನಗೌಡ ಯತ್ನಾಳ, ಪ್ರತಾಪ್ ಸಿಂಹ, ಸಿ.ಟಿ. ರವಿ ಅವರ ಮಾತುಗಳು ನೂರಕ್ಕೆ ನೂರು ಸತ್ಯ. ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ಇರುವುದರಿಂದ ರಾಜಕೀಯ ಭ್ರಷ್ಟಾಚಾರ, ವ್ಯಬಿಚಾರ ನಡೆಯುತ್ತಿರುವುದು ರಾಜ್ಯದ ಜನರಿಗೆ ಗೊತ್ತಾಗಿದೆ. ಈ ಹೊಂದಾಣಿಕೆ ಕೂಡಾ ಹೊರಗಡೆ ಬರುತ್ತದೆ. ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆದ ಹಗರಣಗಳು, ಅವ್ಯವಹಾರಗಳನ್ನು ಸಿಬಿಐಗೆ ನೀಡಬೇಕು ಎಂದು ಬಾಗಲಕೋಟೆಯಲ್ಲಿ ಈಶ್ವರಪ್ಪ ಒತ್ತಾಯಿಸಿದರು.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

4 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

4 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

5 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

5 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

5 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

5 hours ago