ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಇಂದು ದಿನಾಂಕ 08-10-2025 ರಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾದ “ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನ ಕಾರ್ಯಾಗಾರ”ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಸಭೆಯಲ್ಲಿ ಶಾಸಕರು ಮಾತನಾಡಿ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ವಿವಿಧ ಯಶಸ್ವಿ ಯೋಜನೆಗಳಿಂದ ಇಂದು ಪ್ರಪಂಚವೇ ಭಾರತದತ್ತ ತಿರುಗಿನೊಡುವಂತಾಗಿದೆ. ಆತ್ಮನಿರ್ಭರ ಭಾರತದಿಂದ ದೇಶ ಆರ್ಥಿಕವಾಗಿ ಬಲ ಗೊಳ್ಳುತ್ತಿದ್ದು ಭಾರತವು ಜಪಾನ್ ಅನ್ನು ಹಿಂದಿಕ್ಕಿ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿದೆ ಮತ್ತು ಜರ್ಮನ್ ನನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೆ ತಲುಪುವ ವಿಶ್ವಾಸವಿದೆ ಎಂದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು ಹಾಗೂ ಸದಾನಂದ ಪ್ರಭು, ಗಿರೀಶ್ ಅಂಚನ್, ಮಂಡಲ ವಕ್ತಾರರಾದ ನವೀನ್ ಎಸ್ ಕೆ ಮತ್ತು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…