ಮಂಗಳೂರು: ಉಳ್ಳಾಲದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ ಯತ್ನ ನಡೆದಿದೆ ಎನ್ನಲಾದ ಸುದ್ದಿಯಲ್ಲಿ ಸತ್ಯಾಂಶವಿಲ್ಲ. ಈ ಬಗ್ಗೆ ಆ ವ್ಯಕ್ತಿಯೇ ಸ್ಪಷ್ಟಪಡಿಸಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ.
ಉಳ್ಳಾಲದ ಬಿಜೆಪಿ ಕಾರ್ಯಕರ್ತ ಕಿಶೋರ್ ಸಾಲ್ಯಾನ್ ಎಂಬವರು ಕೆಲಸಕ್ಕೆ ತೆರಳುತ್ತಿದ್ದ ವೇಳೆ ಮಾರಕಾಸ್ತ್ರಗಳಿಂದ ಮೂವರು ದಾಳಿ ಯತ್ನ ನಡೆಸಿದ್ದರು ಎಂಬುದಾಗಿ ಹರಡಿರುವ ಸುದ್ದಿಯಲ್ಲಿ ಸತ್ಯಾಂಶವಿಲ್ಲ. ಈ ಬಗ್ಗೆ ನಾನೇ ಆ ವ್ಯಕ್ತಿಯ ಬಳಿ ತೆರಳಿ ಮಾತನಾಡಿದಾಗ ತನ್ನ ಮೇಲೆ ಯಾರೂ ದಾಳಿ ನಡೆಸಿಲ್ಲ ಮತ್ತು ನನ್ನನ್ನು ಫಾಲೋ ಮಾಡಿಕೊಂಡು ಬಂದಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ. ನನ್ನ ಮೇಲೂ ದಾಳಿಯಾಗಬಹುದು ಎಂದು ಕಲ್ಪಿಸಿದ್ದೆ ಎಂದು ಆತ ಹೇಳಿದ್ದಾನೆ ಎಂದು ತಿಳಿಸಿದರು.
ಸೆಂಟ್ರಿಂಗ್ ಕೆಲಸ ಮಾಡುತ್ತಿರುವ ಕಿಶೋರ್ ಬೆಳಗ್ಗೆ ಕೆಲಸಕ್ಕೆಂದು ತೆರಳುತ್ತಿರುವಾಗ ನಿರ್ಜನ ಪ್ರದೇಶದಲ್ಲಿ ಮೂವರು ಆಗಂತಕರು ಮಾರಕಾಸ್ತ್ರಗಳನ್ನು ಹಿಡಿದು ಅಟ್ಟಾಡಿಸಿಕೊಂಡು ಬಂದಿದ್ದು, ಪ್ರಾಣ ರಕ್ಷಣೆಗಾಗಿ ಕಿಶೋರ್ ಅಂಗಡಿಯೊಂದಕ್ಕೆ ಓಡಿದ್ದರು ಎಂದು ಸುದ್ದಿಯಾಗಿತ್ತು. ಇದೀಗ ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…