ವಿಜಯಪುರ: ಮಾಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಕಾಂಗ್ರೆಸ್ ಹೊಂದಾಣಿಕೆ ವಿಚಾರ ಎಐಸಿಸಿ ಮಟ್ಟದಲ್ಲಿ ನಡೆದಿರುವ ಚರ್ಚೆ. ಹೀಗಾಗಿ ಈ ಕುರಿತು ಪ್ರತಿಕ್ರಯಿಸಲಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ವಾಧಿಕಾರಿ ಧೋರಣೆಯ ಪಕ್ಷ ಎಂಬುದು ಈಗ ಮೈತ್ರಿ ಪಕ್ಷಗಳಿಗೆ ಮನವರಿಕೆ ಆಗತೊಡಗಿದೆ. ಶಿವಸೇನೆಯ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಬಿಜೆಪಿ ಈಗ ಮೈತ್ರಿ ಮುರಿದುಕೊಂಡಿದ್ದಾರೆ ಎಂದು ದೂರಿದರು. ಬಿಜೆಪಿ ಕೋಮುವಾದಿ ಅಷ್ಟೆ ಅಲ್ಲ, ಅದು ಸರ್ವಾಧಿಕಾರಿ ಪಕ್ಷ ಎಂದು ಹರಿಹಾಯ್ದರು.
ರಾಜ್ಯದ ಉಪಚುನಾವಣೆಯ ಅಭ್ಯರ್ಥಿಗಳ ಆಯ್ಕೆ ವಿಳಂಬ ಆಗಿಲ್ಲ. ಕೆಲವು ಕ್ಷೇತ್ರಗಳಲ್ಲಿ ಸುಪ್ರೀಂಕೋರ್ಟ್ ನಿರ್ಣಯ ನೋಡಿ ತೀರ್ಮಾನ ಮಾಡಲು ನಿರ್ಧರಿಸಲಾಗಿದೆ. ನಾಳೆ ತೀರ್ಪು ಬರಲಿದ್ದು, ನಾಳೆ ರಾತ್ರಿಯೇ ಅಭ್ಯರ್ಥಿಗಳನ್ನು ಆಯ್ಕೆ ಅಂತಿಮಗೊಳಿಸಲಾಗುತ್ತದೆ ಎಂದರು.
ಸೋಮವಾರ ನಡೆದ ಸಭೆಯಲ್ಲಿ ಯಾವ ಮಾತಿನ ಚಕಮಕಿ ಆಗಿಯೇ ಇಲ್ಲ. ಊಹಾಪೂಹ, ಕಪೋಕಲ್ಪಿತ. ಮಾಧ್ಯಮಗಳು ರೋಚಕತೆಗಾಗಿ ಹೆಡ್ ಲೈನ್ ಹಾಕಿದ್ದಕ್ಕೆಲ್ಲ ನಾವು ಪ್ರತಿಕ್ರಿಯಿಸಲಾರೆ ಎಂದರು.
ಬಿಜೆಪಿಗೆ ಇನ್ನಷ್ಟು ಶಾಸಕರು ಬರೋದಾಗಿ ಸಿಟಿ ರವಿ ಹೇಳಿರುವ ವಿಚಾರದಲ್ಲಿ ಮಾತನಾಡಿದ ಅವರು, ನಿಮ್ಮ ಪಕ್ಷದವರು ಮಾತ್ರ ಇಂಥ ಹೇಳಿಕೆ ನೀಡಲು ಸಾಧ್ಯ. ಬಿಜೆಪಿಗೆ ಬರೀ ಪಕ್ಷಾಂತರ ಮಾಡಿಸೋದೆ ನಿಮ್ಮ ಕೆಲಸ ಆಗಿದೆ. ನಿಮ್ಮ ಉಡಾಫೆ ಮಾತಿಗೆ ಜನ ನಿಮ್ಮ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹದಿನೈದು ಶಾಸಕರನ್ನು ಮೂರು ದಿನದಲ್ಲಿ ಮಂತ್ರಿ ಮಾಡ್ತಿವಿ ಅಂತ ನಂಬಿಸಿದ್ದರು. ಈಗ ಅವರ ಸ್ಥಿತಿ ಏನಾಗಿದೆ, ಹೀಗೆ ಮಾಡೋದೆ ಬಿಜೆಪಿ ಕೆಲಸ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿಯವರಿಗೆ ಕೇಂದ್ರದಿಂದ ಹಣ ತರೋ ತಾಕತ್ತಿಲ್ಲ, ಬರೀ ಮಾತಾಡ್ತಾರೆ. ಇವತ್ತಿನ ಕೆಟ್ಟ ಪರಿಸ್ಥಿತಿಗೆ ಬಿಜೆಪಿ ಕಾರಣ ಎಂದು ಟೀಕಿಸಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…