Featured

ಬಿಜೆಪಿ ಗೆದ್ದು ಮತ್ತೆ ಅಧಿಕಾರಕ್ಕೆ ಬಂದರೆ ಜಮ್ಮು ಕಾಶ್ಮೀರಕ್ಕೆ ನೀಡುವ ವಿಶೇಷ ಸ್ಥಾನಮಾನ ರದ್ದು : ಅಮಿತ್‌ ಶಾ – Vishwanews24

ಪಶ್ಚಿಮ ಬಂಗಾಲ : ‘ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾವು ಗೆದ್ದು ಮತ್ತೆ ಅಧಿಕಾರಕ್ಕೆ ಬಂದರೆ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದು ಮಾಡುವೆವು, ಮತ್ತು ಪ್ರಜೆಗಳ ರಾಷ್ಟ್ರೀಯ ರಿಜಿಸ್ಟ್ರಿ (ಎನ್‌ಆರ್‌ಸಿ) ಯೋಜನೆಯನ್ನು ದೇಶಾದ್ಯಂತ ಜಾರಿಗೆ ತರುವೆವು’ ಎಂದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಇಂದಿಲ್ಲಿ ಚುನಾವಣಾ ರಾಲಿಯೊಂದರಲ್ಲಿ ಹೇಳಿದರು.

ಡಾರ್ಜಿಲಿಂಗ್‌ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಕೈಗಾರಿಕೋದ್ಯಮಿ ರಾಜು ಸಿಂಗ್‌ ಬಿಷ್‌ತ್‌ ಪ್ರಚಾರಾರ್ಥ ನಡೆಸಲಾದ ರಾಲಿಯಲ್ಲಿ ಮಾತನಾಡುತ್ತಿದ್ದ ಅಮಿತ್‌ ಶಾ, ‘ಪ.ಬಂಗಾಲದ ಸಿಎಂ ಮಮತಾ ಅವರು ಅಸ್ಸಾಂ ಎನ್‌ಆರ್‌ಸಿ ಬಗ್ಗೆ ಹುಯಿಲೆಬ್ಬಿಸುತ್ತಿದ್ದಾರೆ; ಆದರೆ ನಾವು ಈ ಬಾರಿ ಮತ್ತೆ ಗೆದ್ದು ಬಂದರೆ ದೇಶಾದ್ಯಂತ ಎನ್‌ಆರ್‌ಸಿ ಯೋಜನೆಯನ್ನು ಜಾರಿಗೆ ತರುತ್ತೇವೆ’ ಎಂದು ಹೇಳಿದರು.

‘ದೇಶಾದ್ಯಂತ ಎನ್‌ಆರ್‌ಸಿ ತರವುದಕ್ಕೆ ನಾವು ಬದ್ಧರಾಗಿದ್ದೇವೆ. ಅಕ್ರಮ ವಲಸಿಗರನ್ನು ಹೊರ ಹಾಕಿಯೇ ತೀರುತ್ತೇವೆ. ಆದರೆ ಮಮತಾ ಅವರಂತಹವರು ಅಕ್ರಮ ವಲಸಿಗರನ್ನು ತಮ್ಮ ಓಟ್‌ ಬ್ಯಾಂಕ್‌ ಮಾಡಿಕೊಂಡಿರುವುದರಿಂದ ಎನ್‌ಆರ್‌ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾರೆ; ನಮಗೆ ರಾಷ್ಟ್ರೀಯ ಭದ್ರತೆಯೇ ಪರಮೋಚ್ಚ’ ಎಂದು ಶಾ ಹೇಳಿದರು.

‘ನೆರೆ ದೇಶಗಳಲ್ಲಿನ ಹಿಂಸೆ ಕಿರುಕುಳ ತಾಳಲಾರದೆ ಆಸರೆ ಕೋರಿ ಭಾರತಕ್ಕೆ ಬಂದಿರುವ ಪ್ರತಿಯೋರ್ವ ಹಿಂದು ಮತ್ತು ಬೌದ್ಧ ನಿರಾಶ್ರಿತರಿಗೆ ನಾವು ದೇಶದ ಪೌರತ್ವ ನೀಡುವೆವು’ ಎಂದು ಶಾ ಹೇಳಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago