ಪಶ್ಚಿಮ ಬಂಗಾಲ : ‘ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾವು ಗೆದ್ದು ಮತ್ತೆ ಅಧಿಕಾರಕ್ಕೆ ಬಂದರೆ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದು ಮಾಡುವೆವು, ಮತ್ತು ಪ್ರಜೆಗಳ ರಾಷ್ಟ್ರೀಯ ರಿಜಿಸ್ಟ್ರಿ (ಎನ್ಆರ್ಸಿ) ಯೋಜನೆಯನ್ನು ದೇಶಾದ್ಯಂತ ಜಾರಿಗೆ ತರುವೆವು’ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಇಂದಿಲ್ಲಿ ಚುನಾವಣಾ ರಾಲಿಯೊಂದರಲ್ಲಿ ಹೇಳಿದರು.
ಡಾರ್ಜಿಲಿಂಗ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಕೈಗಾರಿಕೋದ್ಯಮಿ ರಾಜು ಸಿಂಗ್ ಬಿಷ್ತ್ ಪ್ರಚಾರಾರ್ಥ ನಡೆಸಲಾದ ರಾಲಿಯಲ್ಲಿ ಮಾತನಾಡುತ್ತಿದ್ದ ಅಮಿತ್ ಶಾ, ‘ಪ.ಬಂಗಾಲದ ಸಿಎಂ ಮಮತಾ ಅವರು ಅಸ್ಸಾಂ ಎನ್ಆರ್ಸಿ ಬಗ್ಗೆ ಹುಯಿಲೆಬ್ಬಿಸುತ್ತಿದ್ದಾರೆ; ಆದರೆ ನಾವು ಈ ಬಾರಿ ಮತ್ತೆ ಗೆದ್ದು ಬಂದರೆ ದೇಶಾದ್ಯಂತ ಎನ್ಆರ್ಸಿ ಯೋಜನೆಯನ್ನು ಜಾರಿಗೆ ತರುತ್ತೇವೆ’ ಎಂದು ಹೇಳಿದರು.
‘ದೇಶಾದ್ಯಂತ ಎನ್ಆರ್ಸಿ ತರವುದಕ್ಕೆ ನಾವು ಬದ್ಧರಾಗಿದ್ದೇವೆ. ಅಕ್ರಮ ವಲಸಿಗರನ್ನು ಹೊರ ಹಾಕಿಯೇ ತೀರುತ್ತೇವೆ. ಆದರೆ ಮಮತಾ ಅವರಂತಹವರು ಅಕ್ರಮ ವಲಸಿಗರನ್ನು ತಮ್ಮ ಓಟ್ ಬ್ಯಾಂಕ್ ಮಾಡಿಕೊಂಡಿರುವುದರಿಂದ ಎನ್ಆರ್ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾರೆ; ನಮಗೆ ರಾಷ್ಟ್ರೀಯ ಭದ್ರತೆಯೇ ಪರಮೋಚ್ಚ’ ಎಂದು ಶಾ ಹೇಳಿದರು.
‘ನೆರೆ ದೇಶಗಳಲ್ಲಿನ ಹಿಂಸೆ ಕಿರುಕುಳ ತಾಳಲಾರದೆ ಆಸರೆ ಕೋರಿ ಭಾರತಕ್ಕೆ ಬಂದಿರುವ ಪ್ರತಿಯೋರ್ವ ಹಿಂದು ಮತ್ತು ಬೌದ್ಧ ನಿರಾಶ್ರಿತರಿಗೆ ನಾವು ದೇಶದ ಪೌರತ್ವ ನೀಡುವೆವು’ ಎಂದು ಶಾ ಹೇಳಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…