Featured

ಬಿಜೆಪಿ, ಜೆಡಿಎಸ್‌ನಿಂದ ಹೆಚ್ಚಿನ ನಾಯಕರು ಕಾಂಗ್ರೆಸ್ ಸೇರಲು ಕಾದು ಕುಳಿತಿದ್ದಾರೆ : ಸಿದ್ದರಾಮಯ್ಯ – Vishwanews24

ಬಿಜೆಪಿ, ಜೆಡಿಎಸ್‌ನಿಂದ ಹೆಚ್ಚಿನ ನಾಯಕರು ಕಾಂಗ್ರೆಸ್ ಸೇರಲು ಕಾದು ಕುಳಿತಿದ್ದಾರೆ: ಸಿದ್ದರಾಮಯ್ಯ – Vishwanews24

2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ..

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್‌ನಿಂದ ಹೆಚ್ಚಿನ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಕಾದು ಕುಳಿತಿದ್ದು, 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಮಾಜಿ ವಿಧಾನಪರಿಷತ್ ಸದಸ್ಯರಾದ ಬೆಮೆಲ್ ಕಾಂತರಾಜು ಅವರು ನಿನ್ನೆಯಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಧ್ವಜ ನೀಡಿ ಕಾಂತರಾಜು ರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಜೆಡಿಎಸ್ ಹಾಗೂ ಬಿಜೆಪಿಯ ಹಲವು ನಾಯಕರು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಆದರೆ, ಅವರು ಪಕ್ಷದ ಟಿಕೆಟ್‌ ನಿರೀಕ್ಷೆ ಮಾಡದೆ ಬೇಷರತ್ತಾಗಿ ಸೇರಬೇಕು, ನಮ್ಮ ಸಾಲಿಗೆ ಕಟ್ಟುಬಿದ್ದು ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿರಬೇಕು. ರಾಜ್ಯದ ಜನತೆ 2013-2018ರ ಅವಧಿಯಂತೆ ಮತ್ತೆ ಉತ್ತಮ ಆಡಳಿತವನ್ನು ಮರುಸ್ಥಾಪಿಸಲು ಬಯಸಿದ್ದಾರೆ. ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ಧ ಮಾತನಾಡಲು ಆರಂಭಿಸಿದ್ದಾರೆ. ಕಾಂಗ್ರೆಸ್ ಮತ್ತೆ ಅಧಿಕಾರ ಹಿಡಿಯುವುದು ಶೇ.120ರಷ್ಟು ಖಚಿತ ಎಂದು ಹೇಳಿದ್ದಾರೆ.

ಮೇಕೆದಾಟು ಯೋಜನೆ ಜಾರಿ ವಿಳಂಬಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರನ್ನು ಗುರಿಯಾಗಿಸಿ ಮಾತನಾಡಿದ ಅವರು, ಎರಡೂವರೆ ವರ್ಷಗಳಲ್ಲಿ ಬಿಜೆಪಿ ಸರ್ಕಾರ ಕಾನೂನು ತೊಡಕುಗಳನ್ನು ನಿವಾರಿಸಲು ಏನು ಮಾಡಿದೆ ಎಂದು ಪ್ರಶ್ನಿಸಿದರು.

ನಾನು ಈ ವಿಚಾರವನ್ನು ಪ್ರಸ್ತಾಪಿಸಿದ ನಂತರ ಬಿಜೆಪಿ ಸರ್ಕಾರ ಇತ್ತೀಚೆಗೆ ಬಡವರಿಗೆ ಐದು ಲಕ್ಷ ಮನೆಗಳನ್ನು ಘೋಷಿಸಿದೆ, ಮಾರ್ಚ್ 2022 ರೊಳಗೆ ಫಲಾನುಭವಿಗಳಿಗೆ ಅದನ್ನು ವಿತರಿಸುತ್ತದೆಯೇ ಎಂಬುದರ ಬಗ್ಗೆ ನನಗೆ ಅನುಮಾನವಿದೆ ಎಂದು ತಿಳಿಸಿದ್ದಾರೆ.

 

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

10 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

10 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

10 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

11 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

12 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

12 hours ago