ವರುಣಾ: ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು BJP-JDS ಷಡ್ಯಂತ್ರಕ್ಕೆ ಹೆದರಲ್ಲ. ಎಲ್ಲಾ ಷಡ್ಯಂತ್ರ ಸೋಲಿಸುತ್ತೇನೆ. ಅವರ ಆಟಗಳಿಗೆ ಜಗ್ಗಲ್ಲ, ಬಗ್ಗಲ್ಲ. ಸಾಮಾಜಿಕ ನ್ಯಾಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 501.81 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿ ಮಾತನಾಡಿದರು.ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ ಆಗಿದ್ದೇನೆ. ವರುಣಾ ಕಾಂಗ್ರೆಸ್ಸಿನ ಭದ್ರ ಕೋಟೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗಿಂತ ಹೆಚ್ಚು ಮತ ಕೊಟ್ಟಿದ್ದೀರಿ. ನನಗೆ ವಿಶೇಷವಾಗಿ ಆಶೀರ್ವಾದ ಮಾಡಿದ್ದಕ್ಕಾಗಿ ನಾನು ಕ್ಷೇತ್ರದ ಮತದಾರರಿಗೆ ಅನಂತ ಅನಂತ ಧನ್ಯವಾದ ಅರ್ಪಿಸಿದರು.
ವರುಣಾ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಅನುದಾನ ಕೊಡಲಾಗುತ್ತಿದೆ. ನಾನು ಉಪಕಾರ ಮಾಡುತ್ತಿಲ್ಲ. ಕ್ಷೇತ್ರದ ಪ್ರತಿನಿಧಿಯಾಗಿ ಅಭಿವೃದ್ಧಿ ಮಾಡುವ ನನ್ನ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇನೆ ಎಂದರು.
ಕೇಂದ್ರದಲ್ಲಿರುವ ಮೋದಿ ಸರ್ಕಾರವಾಗಲಿ, ರಾಜ್ಯದಲ್ಲಿದ್ದ ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ಜನರ ಕಲ್ಯಾಣ ಮಾಡದೆ ಲೂಟಿ ಮಾಡಿ ಹೋದರು ಎಂದರು.ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿ. ಬಡವರ ವಿರೋಧಿ. ಮೂರು ಬಾರಿ ಪ್ರಧಾನಿ ಆಗಿರುವ ಮೋದಿ ಕೊಟ್ಟ ಮಾತಿನಂತೆ ನಡೆದ ಉದಾಹರಣೆ ಇದೆಯಾ ಹೇಳಿ. ಇಷ್ಟು ವರ್ಷ ಪ್ರಧಾನಿಯಾಗಿ ಮೋದಿ ಬಡಪರ ಪರವಾಗಿ ಒಂದೇ ಒಂದು ಯೋಜನೆ ಜಾರಿ ಮಾಡಿದ್ದಾರಾ ಹೇಳಿ ಅಂದರು.
ನೀವೇ ನನ್ನ ಮಾಲೀಕರು. ನೀವೇ ನನ್ನ ಯಜಮಾನರು. ನಿಮ್ಮ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದರು.ಬಿಜೆಪಿ-ಜೆಡಿಎಸ್ ನಾಯಕರ ಹೊಟ್ಟೆಕಿಚ್ಚಿನಿಂದ ನನ್ನ ವರ್ಚಸ್ಸು ಕಡಿಮೆ ಆಗಲ್ಲ. ನನ್ನ ವರ್ಚಸ್ಸು ವರುಣಾ ಜನತೆ, ನನ್ನ ವರ್ಚಸ್ಸು ರಾಜ್ಯದ ಜನತೆ ಎಂದರು.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…