Featured

ಬಿಜೆಪಿ-ಜೆಡಿಎಸ್ ನಾಯಕರ ಹೊಟ್ಟೆಕಿಚ್ಚಿನಿಂದ ನನ್ನ ವರ್ಚಸ್ಸು ಕಡಿಮೆ ಆಗಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ – vishwanews24

ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು BJP-JDS ಎಲ್ಲಾ ಷಡ್ಯಂತ್ರ ಸೋಲಿಸುತ್ತೇನೆ : ಸಿದ್ದರಾಮಯ್ಯ

ವರುಣಾ: ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು BJP-JDS ಷಡ್ಯಂತ್ರಕ್ಕೆ ಹೆದರಲ್ಲ. ಎಲ್ಲಾ ಷಡ್ಯಂತ್ರ ಸೋಲಿಸುತ್ತೇನೆ. ಅವರ ಆಟಗಳಿಗೆ ಜಗ್ಗಲ್ಲ, ಬಗ್ಗಲ್ಲ. ಸಾಮಾಜಿಕ ನ್ಯಾಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 501.81 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿ ಮಾತನಾಡಿದರು.ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ‌ ಆಗಿದ್ದೇನೆ. ವರುಣಾ ಕಾಂಗ್ರೆಸ್ಸಿನ ಭದ್ರ ಕೋಟೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗಿಂತ ಹೆಚ್ಚು ಮತ ಕೊಟ್ಟಿದ್ದೀರಿ. ನನಗೆ ವಿಶೇಷವಾಗಿ ಆಶೀರ್ವಾದ ಮಾಡಿದ್ದಕ್ಕಾಗಿ ನಾನು ಕ್ಷೇತ್ರದ ಮತದಾರರಿಗೆ ಅನಂತ ಅನಂತ ಧನ್ಯವಾದ ಅರ್ಪಿಸಿದರು.

ವರುಣಾ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಅನುದಾನ ಕೊಡಲಾಗುತ್ತಿದೆ. ನಾನು ಉಪಕಾರ ಮಾಡುತ್ತಿಲ್ಲ. ಕ್ಷೇತ್ರದ ಪ್ರತಿನಿಧಿಯಾಗಿ ಅಭಿವೃದ್ಧಿ ಮಾಡುವ ನನ್ನ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇನೆ ಎಂದರು.

ಕೇಂದ್ರದಲ್ಲಿರುವ ಮೋದಿ ಸರ್ಕಾರವಾಗಲಿ, ರಾಜ್ಯದಲ್ಲಿದ್ದ ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ಜನರ ಕಲ್ಯಾಣ ಮಾಡದೆ ಲೂಟಿ ಮಾಡಿ ಹೋದರು ಎಂದರು.ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿ. ಬಡವರ ವಿರೋಧಿ. ಮೂರು ಬಾರಿ ಪ್ರಧಾನಿ ಆಗಿರುವ ಮೋದಿ ಕೊಟ್ಟ ಮಾತಿನಂತೆ ನಡೆದ ಉದಾಹರಣೆ ಇದೆಯಾ ಹೇಳಿ.‌ ಇಷ್ಟು ವರ್ಷ ಪ್ರಧಾನಿಯಾಗಿ ಮೋದಿ ಬಡಪರ ಪರವಾಗಿ ಒಂದೇ ಒಂದು ಯೋಜನೆ ಜಾರಿ ಮಾಡಿದ್ದಾರಾ ಹೇಳಿ ಅಂದರು.

ನೀವೇ ನನ್ನ ಮಾಲೀಕರು. ನೀವೇ ನನ್ನ ಯಜಮಾನರು. ನಿಮ್ಮ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದರು.ಬಿಜೆಪಿ-ಜೆಡಿಎಸ್ ನಾಯಕರ ಹೊಟ್ಟೆಕಿಚ್ಚಿನಿಂದ ನನ್ನ ವರ್ಚಸ್ಸು ಕಡಿಮೆ ಆಗಲ್ಲ. ನನ್ನ ವರ್ಚಸ್ಸು ವರುಣಾ ಜನತೆ, ನನ್ನ ವರ್ಚಸ್ಸು ರಾಜ್ಯದ ಜನತೆ ಎಂದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago