ಕಡೂರು: ಕೋಮುವಾದಿ ಪಕ್ಷದ ಜತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದೆಯೆನ್ನುವವರು ಕೇರಳದಲ್ಲಿ ಮುಸ್ಲಿಂ ಲೀಗ್ ಜತೆ ಹೊಂದಾಣಿಕೆ ಮಾಡಿಕೊಂಡಿರುವುದರ ಬಗ್ಗೆ ಏನು ಹೇಳುತ್ತಾರೆ. ಮುಸ್ಲಿಂ ಲೀಗ್ ಕೋಮುವಾದಿ ಪಕ್ಷವಲ್ಲವೇ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಪ್ರಶ್ನಿಸಿದರು.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ವಿವಿಧ ರಾಜ್ಯಗಳಲ್ಲಿ ವಿಭಿನ್ನ ಪಕ್ಷಗಳಿಗೆ ಮತದಾರರು ಮತ ನೀಡಿದರೂ ದೇಶದಲ್ಲಿ ಬಿಜೆಪಿ ಸರ್ಕಾರವಿರಬೇಕು ಹಾಗೂ ಪ್ರಧಾನಿ ನರೇಂದ್ರ ಮೋದಿಯವರೇ ಸಮರ್ಥ ನಾಯಕ ಎಂದು ನಿರ್ಧರಿಸಿದ್ದಾರೆ. ಹಾಗಾಗಿ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಂಡಿತಾ. ಈ ಬಗ್ಗೆ ಯಾವುದೇ ಅನುಮಾನವಿಲ್ಲ. ಬಿಜೆಪಿ ಜೆಡಿಎಸ್ ಮೈತ್ರಿ ಕೂಟ ೨೫ ಕ್ಕೂ ಹೆಚ್ಚು ಸ್ಥಾನ ಪಡೆಯುವುದು ನಿಶ್ಚಿತ ಎಂದು ಹೇಳಿದರು.
ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ನ್ಯಾಯಮಂಡಳಿಯವರು ಎಸಿ ರೂಮಿನಲ್ಲಿ ಕುಳಿತು ದಿನಕ್ಕೊಂದು ಆದೇಶ ಹೊರಡಿಸುವುದು ಸರಿಯಲ್ಲ. ಕೆಆರ್‌ಎಸ್ ಅಣೆಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…