ಬೆಂಗಳೂರು,: “ಭಾರತೀಯ ಜನತಾ ಪಕ್ಷದಲ್ಲಿ ಜೆಡಿಎಸ್ ಪಕ್ಷವನ್ನು ವಿಲೀನಗೊಳಿಸುವ ವಿಚಾರ ಕೇವಲ ವದಂತಿಯಾಗಿದೆ. ಇದು ಸತ್ಯಕ್ಕೆ ದೂರವಾದ ಸಂಗತಿ” ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಈ ವಿಚಾರವಾಗಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಸಿಎಂ, “ವಿಧಾನ ಪರಿಷತ್ ಸಭಾಪತಿಗಳ ವಿಚಾರದಲ್ಲಿ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಆದರೆ, ಬಿಜೆಪಿಯೊಂದಿಗೆ ಜೆಡಿಎಸ್ ವಿಲೀನ ಅಥವಾ ಬಿಜೆಪಿಗೆ ಬರುವಂತ ವಿಚಾರದ ಸುಳ್ಳು” ಎಂದಿದ್ದಾರೆ.
“ಹೆಚ್.ಡಿ.ಕುಮಾರಸ್ವಾಮಿ ಅವರು ನಮಗೆ ಪರಿಷತ್‌ನ ಸಭಾಪತಿ ವಿಚಾರದಲ್ಲಿ ಬೆಂಬಲ ನೀಡಿದ್ದಾರೆ. ಬದಲಾಗಿ ಬೇರೆನೂ ಇಲ್ಲ. ಅಲ್ಲದೇ, ಅವರು ಗೋಹತ್ಯೆ ನಿಷೇಧದ ವಿಚಾರಕ್ಕೆ ನಮ್ಮ ಬೆಂಬಲವಿಲ್ಲ ಎಂದು ತಿಳಿಸಿದ್ದರು. ಈ ನಿಟ್ಟಿನಲ್ಲಿ ನಾವು ಸುಗ್ರೀವಾಜ್ಞೆಯ ಮೂಲಕ ಗೋಹತ್ಯೆ ನಿಷೇಧ ಅನುಷ್ಠಾನಕ್ಕೆ ತರುತ್ತಿದ್ದೇವೆ” ಎಂದು ತಿಳಿಸಿದ್ದಾರೆ.
“ವಿಧಾನಸಭೆ ಚುನಾವಣೆಗೆ ಇನ್ನು ಎರಡೂವರೆ ವರ್ಷ ಇದೆ. ಬಿಜೆಪಿ ಹಾಗೂ ಜೆಡಿಎಸ್ ವಿಲೀನ ವಿಚಾರವಾಗಿ ಮಾಧ್ಯ,ಗಳಲ್ಲಿ ಬರುತ್ತಿರುವ ಸುದ್ದಿಗಳು ಸುಳ್ಳು” ಎಂದು ಸಿಎಂ ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…