ಬೆಳಗಾವಿ: ಬಿಜೆಪಿ ನಡೆಸಿದ ಸಮೀಕ್ಷೆಯಲ್ಲೇ ಬಿಜೆಪಿ ಗೆಲ್ಲುವುದಿಲ್ಲ ಎಂದು ವರದಿ ಬಂದಿದೆ ಎಂಬುದಾಗಿ . ಬಿಜೆಪಿ ಸಂಸದರು ಉತ್ತಮವಾಗಿ ಕೆಲಸ ಮಾಡಿದ್ದರೆ 14 ಜನ ಅಭ್ಯರ್ಥಿಗಳನ್ನು ಬದಲಿಸಿದ್ದೇಕೆ? ಸದಾನಂದ ಗೌಡ, ಪ್ರತಾಪ್ ಸಿಂಹ, ಕರಡಿ ಸಂಗಣ್ಣ, ಶ್ರೀನಿವಾಸ್ ಪ್ರಸಾದ್, ಕಟೀಲ್ ಅವರಿಗೆ ಏಕೆ ಕೊಡಲಿಲ್ಲ? ಶೋಭಕ್ಕ ಅವರಿಗೆ ಗೋ ಬ್ಯಾಕ್ ಎಂದು ಏಕೆ ಕಳುಹಿಸಲಾಯಿತು? ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಕುರುಬರಿಗೆ, ಅಲ್ಪಸಂಖ್ಯಾತರಿಗೆ ಒಂದೇ ಒಂದು ಸ್ಥಾನ ಕೊಟ್ಟಿಲ್ಲ. ಇದು ಸಾಮಾಜಿಕ ನ್ಯಾಯವೇ? ಇದರ ಅರ್ಥ ನಿಮ್ಮ ಸೋಲು ನಿಮಗೆ ಅರ್ಥವಾಗಿದೆ. “ಕಳೆದ ಒಂದು ವರ್ಷದ ಹಿಂದೆ ಮೈಸೂರಿನ ಅದೇ ಮೈದಾನದಲ್ಲಿ ದೇಶದ ಪ್ರಧಾನಿ ತಂದೆ, ಮಗನ ಬಗ್ಗೆ ಏನು ಮಾತನಾಡಿದರು. ಗೌಡ್ರು ಏನು ಮಾತನಾಡಿದರು, ಬಿಜೆಪಿಯವರು ಏನು ಮಾತನಾಡಿದರು. ಅಮಿತ್ ಶಾ ವಿರುದ್ಧ ಏನೂ ಮಾತನಾಡಿದರು ಎಂದು ಮಾಧ್ಯಮದವರು ಜನರಿಗೆ ತೋರಿಸಬೇಕು ಎಂದರು.
ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು ಎಂದು ಜೆಡಿಎಸ್ ಗೆ ಬೆಂಬಲ ನೀಡಿದ್ದೆವು. ನಾನು ಕುಮಾರಸ್ವಾಮಿ ಅವರು ಸಿಎಂ ಆಗಲಿ ಎಂದು ಬಯಸಿದ್ದು ನಿಜ. ಅವರಿಂದ ಅಧಿಕಾರ ಉಳಿಸಿಕೊಳ್ಳಲು ಆಗಲಿಲ್ಲ. ಯಾರು ಅವರ ಸರ್ಕಾರವನ್ನು ಕೆಡವಿದರೋ ಅವರ ಜೊತೆಯೇ ಕುಮಾರಸ್ವಾಮಿ ಸೇರಿಕೊಂಡಿದ್ದಾರೆ ಎಂದು ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…