ಬೆಂಗಳೂರು: ಬಿಜೆಪಿ ಸರ್ಕಾರವೂ ತಮ್ಮ ಭ್ರಷ್ಟಾಚಾರ ಮುಚ್ಚಿಹಾಕಲು ಅಗಲಿ ಹೋಗಿರುವ ನನ್ನ ಮಗನ ಹೆಸರನ್ನು ಎಳೆದು ರಾಜಕೀಯ ಮಾಡಲು ಹೊರಟಿರುವುದು “ಅತ್ಯಂತ ವೈಯಕ್ತಿಕ ಮತ್ತು ಕ್ಷುಲಕತನದ’ ರಾಜಕಾರಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬಿಜೆಪಿ ಟ್ವೀಟ್ ಗೆ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕವೇ ತಿರುಗೇಟು ನೀಡಿದ್ದು, “ತಮ್ಮ ಭ್ರಷ್ಟಾಚಾರ ಮುಚ್ಚಿಹಾಕಲು ಬಿಜೆಪಿ ಅಗಲಿ ಹೋಗಿರುನನ್ನ ಮಗನ ಹೆಸರನ್ನು ಎಳೆದು ತಂದಿದೆ.ಸರಿ, ನಮ್ಮ ಸರ್ಕಾರದ ಅವಧಿಯನ್ನೂ ಸೇರಿಸಿ ಬಿಟ್ ಕಾಯಿನ್ ಹಗರಣವನ್ನು ಸುಪ್ರೀಮ್ ಕೋರ್ಟ್ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಬೊಮ್ಮಯಿ ಅವರನ್ನು ಒತ್ತಾಯಿಸುತ್ತೇನೆ.ನನ್ನ ಮಗ ರಾಕೇಶ್ ನಮ್ಮನಗಲಿ ಐದು ವರ್ಷಗಳಾಗಿವೆ, ಪುತ್ರಶೋಕ ನಿರಂತರ. ತನ್ನ ಮೇಲಿನ ಆರೋಪಕ್ಕೆ ಆತ ಪ್ರತಿಕ್ರಿಯಿಸಲೂ ಸಾಧ್ಯವಿಲ್ಲಇಂತಹ ಸಮಯದಲ್ಲಿ ಬಿಜೆಪಿ ಸರ್ಕಾರ ನನ್ನ ದಿವಂಗತ ಮಗನ ಹೆಸರನ್ನು ಎಳೆದು ರಾಜಕೀಯ ಮಾಡಲು ಹೊರಟಿರುವುದು “ಅತ್ಯಂತ ವೈಯಕ್ತಿಕ ಮತ್ತು ಕ್ಷುಲಕತನದ’ ರಾಜಕಾರಣ ” ಎಂದು ಹೇಳಿದ್ದಾರೆ.
“ನನ್ನ ಕೈಯಲ್ಲಿ ಪುರಾವೆಗಳಿಲ್ಲದ ಕಾರಣ ನಾನು ಇಲ್ಲಿಯವರೆಗೆ ಯಾರ ವಿರುದ್ಧವೂ ನೇರ ಆರೋಪ ಮಾಡಿಲ್ಲ. ಬಿಜೆಪಿ ಸರ್ಕಾರ ಸರ್ಕಾರವೇ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿರುವ ವಿಷಯವನ್ನಷ್ಟೇ ಹೇಳುತ್ತಿದ್ದೇನೆ. ಈ ವರೆಗಿನ ಪೊಲೀಸರ ತನಿಖೆ ಯಾರೋ ಪ್ರಭಾವಿಗಳನ್ನು ರಕ್ಷಿಸಲು ನಡೆಸಿರುವ ನಾಟಕದಂತಿದೆ. ನಮ್ಮ ಬುಟ್ಟಿಯಲ್ಲಿ ಹಾವು ಇಲ್ಲ ಎಂದಾದರೆ ಬಿಜೆಪಿ ಸರ್ಕಾರದ ನಾಯಕರು ಯಾಕೆ ಹಾವು ಕಂಡ ಹಾಗೆ ಬೆಚ್ಚಿ ಬೀಳುತ್ತಿದ್ದಾರೆ? ಯಾಕೆ ಸರತಿ ಸಾಲಲ್ಲಿ ನಿಂತು ಹೆಗಲು ಮುಟ್ಟಿ ನೋಡಿಕೊಂಡು ” ಸರ್ಕಾರ ತಪ್ಪುಮಾಡಿಲ್ಲ, ನಾವೆಲ್ಲ ನಿರಪರಾಧಿಗಳು’ ಎಂದು ಎದೆ ಬಡಿದು ಕೊಳ್ಳುತ್ತಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ
“ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿ ಸರ್ಕಾರದ ನಾಯಕರ ಮಕ್ಕಳ ಹೆಸರೂ ಕೇಳಿ ಬರುತ್ತಿವೆ. ಪುರಾವೆಗಳಿಲ್ಲದೆ ಕುಟುಂಬದ ಸದಸ್ಯರ ಹೆಸರು ಎಳೆದು ತರಬಾರದೆಂದು ಸುಮ್ಮನಿದ್ದೇನೆ.ಬಿಜೆಪಿ ನಾಯಕರು ಜೇನು ಗೂಡಿಗೆ ಕಲ್ಲೆಸೆಯುತ್ತಿದ್ದಾರೆ. ಕೆರಳಿದ ಜೇನು ನೊಣಗಳು ಯಾರಿಗೆಲ್ಲ ಕಚ್ಚಲಿದೆಯೋ ಗೊತ್ತಿಲ್ಲ” ಎಂದು ಹೇಳಿದ್ದಾರೆ.
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…
ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್ ಶೆಟ್ಟಿ ಆತ್ಮಹತ್ಯೆ…