ಬಿಜೆಪಿ ನಾಯಕನಿಗೆ ನೀಡಿದ್ದ ರಾಜ್ಯ ಸಚಿವ ಸ್ಥಾನಮಾನ ಹಿಂಪಡೆದ ಸರ್ಕಾರ – vishwanews24

Featured, ರಾಜ್ಯ ನ್ಯೂಸ್

ಬಿಜೆಪಿ ನಾಯಕನಿಗೆ ನೀಡಿದ್ದ ರಾಜ್ಯ ಸಚಿವ ಸ್ಥಾನಮಾನ ಹಿಂಪಡೆದ ಸರ್ಕಾರ

ಬೆಂಗಳೂರು: ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಾಗಿರುವ ಒಟ್ಟು 54 ಮಂದಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದ ರಾಜ್ಯ ಸರ್ಕಾರ, ಇದೀಗ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ಅಧ್ಯಕ್ಷ ಭೂಕಾಂತ್ ಅವರಿಗೆ ನೀಡಿದ್ದ ಸ್ಥಾನಮಾನವನ್ನು ಹಿಂಪಡೆದಿದೆ. ಕಾಂಗ್ರೆಸ್ ಕಾರ್ಯಕರ್ತರಿಂದ ವ್ಯಕ್ತವಾದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಭೂಕಾಂತ್ ಅವರು ಬಿಜೆಪಿ ಹಿನ್ನೆಲೆಯ ನಾಯಕರು ಎನ್ನುವ ವಿಚಾರ ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು. ಅವರ ಪತ್ನಿಯೂ ಬಿಜೆಪಿ ಪರವಾಗಿ ಜಿಲ್ಲಾ ಪಂಚಾಯಿತಿ ಸದಸ್ಯೆಯಾಗಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿತ್ತು. ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿರುವ ಸಂದರ್ಭದಲ್ಲಿ ಬಿಜೆಪಿ ಮುಖಂಡನಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿರುವುದು ಸರಿಯೇ ಎಂಬ ಪ್ರಶ್ನೆಗಳು ಪಕ್ಷದ ಒಳಗಿನಿಂದಲೇ ಕೇಳಿಬಂದಿದ್ದವು.

ಇದನ್ನೂ ಓದಿ :

ಬಿಗ್ ಬಾಸ್ ರನ್ನರ್ ಅಪ್ ಅದ ರಕ್ಷಿತಾರವರಿಗೆ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಸನ್ಮಾನ – vishwanews24

ಇಲ್ಲಿಯವರೆಗೆ ಪ್ರಮುಖ ನಿಗಮಗಳ ಅಧ್ಯಕ್ಷರಾಗಿರುವ ಶಾಸಕರಿಗೆ ಮಾತ್ರ ರಾಜ್ಯ ಸಚಿವ ಸ್ಥಾನಮಾನ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಸರ್ಕಾರ ಈ ಸ್ಥಾನಮಾನವನ್ನು ಎಲ್ಲಾ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಿಗೆ ವಿಸ್ತರಿಸಿ ಆದೇಶ ಹೊರಡಿಸಿತ್ತು. ಅದರ ಭಾಗವಾಗಿ ಭೂಕಾಂತ್ ಅವರಿಗೆ ಸಹ ಸ್ಥಾನಮಾನ ನೀಡಲಾಗಿತ್ತು.

ಈ ಕ್ರಮದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಪಕ್ಷದ ಕಾರ್ಯಕರ್ತರ ಅಸಮಾಧಾನ ಹಾಗೂ ಒಳಾಂಗಣ ವಿರೋಧದ ಹಿನ್ನೆಲೆಯಲ್ಲಿ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆದಿದೆ.

ಇದನ್ನೂ ಓದಿ :

ಉಡುಪಿ : ಉದ್ಯಮಿಗೆ ವ್ಯವಹಾರದಲ್ಲಿ ಕೋಟಿ ರೂ. ವಂಚನೆ ಆರೋಪ; ದಂಪತಿ ವಿರುದ್ಧ ಪ್ರಕರಣ ದಾಖಲು – vishwanews24

 

Leave a Reply