ಬಿಜೆಪಿ ನಾಯಕರದ್ದು ಎಂತಹಾ ದುಸ್ಥಿತಿ : ಕಾಂಗ್ರೆಸ್‌ ವ್ಯಂಗ್ಯ – Vishwanews24

Featured, ರಾಜ್ಯ ನ್ಯೂಸ್

ರಾಜ್ಯದ ನಾಯಕರನ್ನು ಮೋದಿ ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ : ಕಾಂಗ್ರೆಸ್‌ ವ್ಯಂಗ್ಯ

ಬೆಂಗಳೂರು:ಚಂದ್ರಯಾನ-3 ಯಶಸ್ಸಿಗಾಗಿ ಶ್ರಮಪಟ್ಟ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ನಗರಕ್ಕೆ ಆಗಮಿಸಿದ್ದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಮಾಜಿ ಸಚಿವ ಆರ್.ಅಶೋಕ್‌ ಸೇರಿದಂತೆ ಕೆಲವು ಬಿಜೆಪಿ ಶಾಸಕರು ರಸ್ತೆ ಬದಿ ನಿಂತು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದ್ದಾರೆ.

ಈ ಕುರಿತ ಫೋಟೊವನ್ನು ಟ್ವಿಟರ್‌ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್‌, ʼʼಬಿಜೆಪಿ ನಾಯಕರದ್ದು ಎಂತಹಾ ದುಸ್ಥಿತಿ..ʼ ಎಂದು ಬಿಜೆಪಿ ನಾಯಕರನ್ನು ಲೇವಡಿ ಮಾಡಿದ್ದಾರೆ.

ʼʼರಾಜ್ಯ ಬಿಜೆಪಿಯ ‘ದಂಡ’ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆʼʼ ಎಂದು ಕಾಂಗ್ರೆಸ್‌ ಟೀಕಿಸಿದೆ. ʼʼಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ. ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ?ʼʼ ಎಂದು ಕಾಂಗ್ರೆಸ್‌ ವ್ಯಂಗ್ಯ ಮಾಡಿದೆ.

ಯಾವುದೇ ಬಿಪಿಎಲ್, ಎಪಿಎಲ್ ಕಾರ್ಡ್ ರದ್ದು ಮಾಡೋದಿಲ್ಲ : ಸಚಿವ K H ಮುನಿಯಪ್ಪ ಸ್ಪಷ್ಟನೆ – Vishwanews24

 

Leave a Reply