ಬೆಂಗಳೂರು:ಚಂದ್ರಯಾನ-3 ಯಶಸ್ಸಿಗಾಗಿ ಶ್ರಮಪಟ್ಟ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ನಗರಕ್ಕೆ ಆಗಮಿಸಿದ್ದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಆರ್.ಅಶೋಕ್ ಸೇರಿದಂತೆ ಕೆಲವು ಬಿಜೆಪಿ ಶಾಸಕರು ರಸ್ತೆ ಬದಿ ನಿಂತು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದ್ದಾರೆ.
ಈ ಕುರಿತ ಫೋಟೊವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ʼʼಬಿಜೆಪಿ ನಾಯಕರದ್ದು ಎಂತಹಾ ದುಸ್ಥಿತಿ..ʼ ಎಂದು ಬಿಜೆಪಿ ನಾಯಕರನ್ನು ಲೇವಡಿ ಮಾಡಿದ್ದಾರೆ.
ʼʼರಾಜ್ಯ ಬಿಜೆಪಿಯ ‘ದಂಡ’ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆʼʼ ಎಂದು ಕಾಂಗ್ರೆಸ್ ಟೀಕಿಸಿದೆ. ʼʼಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ. ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ?ʼʼ ಎಂದು ಕಾಂಗ್ರೆಸ್ ವ್ಯಂಗ್ಯ ಮಾಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…