ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ..
ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ..
ಐತಿಹಾಸಿಕ ಕ್ಷಣಕ್ಕೆ ಮೋದಿ, ಶಾ, ಎನ್‌ಡಿಎ ಆಡಳಿತ ರಾಜ್ಯಗಳ 20 ಸಿಎಂಗಳು ಸಾಕ್ಷಿ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ ಶುರುವಾಗಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಸುವೇಂದು ಅಧಿಕಾರಿ ಪ್ರಮಾಣ ಸ್ವೀಕರಿಸಿದ್ದು, ಈ ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಹಾಗೂ ಎನ್‌ಡಿಎ ಆಡಳಿತದ 20 ರಾಜ್ಯಗಳ ಮುಖ್ಯಮಂತ್ರಿಗಳು ಸಾಕ್ಷಿಯಾಗಿದ್ದಾರೆ.
ಇದನ್ನೂ ಓದಿ :
ಭಾರತೀಯ ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ರಾಜಾ ಸುಬ್ರಮಣಿ ನೇಮಕ – VISHWAEWS24
ಸುವೇಂದು ಅಧಿಕಾರಿ ಅವರೊಂದಿಗೆ ಇತರ ಶಾಸಕರಾದ ದಿಲೀಪ್ ಘೋಷ್, ಅಗ್ನಿಮಿತ್ರಾ ಪೌಲ್, ಅಶೋಕ್ ಕಿರ್ತನ್ಯ, ಕ್ಷುದಿರಂ ತಡು, ನಿಶಿತ್ ಪ್ರಾಮಾಣಿಕ್ ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದ್ದಾರೆ.
ಇನ್ನೂ ಪಟ್ಟಾಭಿಷೇಕ ಸಮಾರಂಭಕ್ಕೆ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ವೇದಿಕೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಜನ್ಮ ವಾರ್ಷಿಕೋತ್ಸವದ ಅಂಗವಾಗಿ ರವೀಂದ್ರನಾಥ ಟ್ಯಾಗೋರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಇದನ್ನೂ ಓದಿ :
ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಇಂದು ಪ್ರಮಾಣ ವಚನ – VISHWANEWS24
