ಮಂಗಳೂರು,: ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ವಿಪರೀತ ವರ್ಗಾವಣೆಗೆ ಅಧಿಕಾರಿಗಳು ರೋಸಿ ಹೋಗಿದ್ದಾರೆ. ಇದಕ್ಕೆ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ನಿದರ್ಶನವಾಗಿದೆ ಎಂದು ಶಾಸಕ ಯು.ಟಿ.ಖಾದರ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಶಾಸಕರು, ರಾಜೀನಾಮೆ ಹಿಂದೆಗೆದುಕೊಳ್ಳುವಂತೆ ಸಸಿಕಾಂತ್ ಸೆಂಥಿಲ್ ಅವರನ್ನು ಮನವೊಲಿಸುವಂತೆ ಮುಖ್ಯ ಕಾರ್ಯದರ್ಶಿಯನ್ನು ಒತ್ತಾಯಿಸಿದ್ದೇನೆ ಎಂದರು.
ಬಿಜೆಪಿ ನೇತೃತ್ವದ ರಾಜ್ಯ ಸರಕಾರವು ಅಧಿಕಾರಕ್ಕೆ ಬಂದಾಗಿನಿಂದ ಮೇಲಿಂದ ಮೇಲೆ ಅಧಿಕಾರಿಗಳ ವರ್ಗಾವಣೆ ಪರ್ವ ಇನ್ನಿಲ್ಲದಂತೆ ಮುಂದುವರಿದಿದೆ. ಎಲ್ಲ ಇಲಾಖೆಗಳ ಅಧಿಕಾರಿಗಳು ರೋಸಿ ಹೋಗಿದ್ದಾರೆ. ಉಡುಪಿ ಜಿಲ್ಲಾಧಿಕಾರಿ, ದ.ಕ. ಜಿಲ್ಲೆಯ ಹೌಸಿಂಗ್ ಬೋರ್ಡ್‌ನ ಅಧಿಕಾರಿ ಸೇರಿದಂತೆ ಇನ್ನು ಅಸಂಖ್ಯಾತ ಸಂಖ್ಯೆಯಲ್ಲಿ ವರ್ಗಾವಣೆ ಪ್ರಕ್ರಿಯೆಗಳು ನಡೆಯುತ್ತಿವೆ ಎಂದರು.
ಯಾವುದೇ ಅಧಿಕಾರಿ ರಾಜೀನಾಮೆ ಸಲ್ಲಿಸುವ ಆಲೋಚನೆ ಮಾಡುತ್ತಾರೆಂದರೆ, ಅಂಥವರು ಕೆಲಸ ಮಾಡುವ ಸ್ಥಳದಲ್ಲಿ ಉತ್ತಮ ವಾತಾವರಣವಿಲ್ಲ ಎನ್ನುವುದು ಇದರಿಂದ ಖಾತರಿಯಾಗುತ್ತದೆ. ಇಚ್ಛೆಗೆ ಅನುಗುಣವಾಗಿ ಕೆಲಸ ಮಾಡಲು ಬಿಟ್ಟರೆ ಯಾರೂ ಹುದ್ದೆಯನ್ನು ತ್ಯಜಿಸುವುದಿಲ್ಲ ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…