Featured

ಬಿಜೆಪಿ ಪಕ್ಷದವರು ಸಂಘ ಪರಿವಾರದ ತಾಳಕ್ಕೆ ಕುಣಿಯುತ್ತಾ ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಲು ಹೊರಟಿದ್ದಾರೆ : ಸಿದ್ದರಾಮಯ್ಯ – Vishwanews24

ಬಿಜೆಪಿ ಪಕ್ಷದವರು ಸಂಘ ಪರಿವಾರದ ತಾಳಕ್ಕೆ ಕುಣಿಯುತ್ತಾ ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಲು ಹೊರಟಿದ್ದಾರೆ : ಸಿದ್ದರಾಮಯ್ಯ – Vishwanews24

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ಬಚಾವೊ, ಭೇಟಿ ಪಡಾವೋ ಎನ್ನುತ್ತಾರೆ ಆದರೆ ಬಿಜೆಪಿ ಪಕ್ಷದವರೇ ಸಂಘ ಪರಿವಾರದ ತಾಳಕ್ಕೆ ಕುಣಿಯುತ್ತಾ ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಲು ಹೊರಟಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಪಾದಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ” ಹಿಜಾಬ್ ವಿವಾದದ ಹಿಂದೆ ಯಾವುದೇ ಸಂಘಟನೆ ಇದ್ದರೂ ಅದನ್ನು ಖಂಡಿಸುತ್ತೇನೆ. ಅದು ಆರ್.ಎಸ್.ಎಸ್ ಇರಲಿ, ಎಸ್.ಡಿ.ಪಿ.ಐ ಇರಲಿ, ಭಜರಂಗ ದಳವಿರಲಿ. ಮೂಲಭೂತವಾದಿ ಸಂಘಟನೆಗಳು ಸಾಮಾಜಿಕ ಸಾಮರಸ್ಯ ಮತ್ತು ಶಾಂತಿಗೆ ಮಾರಕ ಎಂದು ಹೇಳಿದ್ದಾರೆ.

ರಾಜ್ಯದ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆ ಕಾರ್ಯದರ್ಶಿಗಳು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವಂತೆ ಹೊರಡಿಸಿರುವ ಸುತ್ತೋಲೆಯನ್ನು ಕೂಡಲೇ ಹಿಂಪಡೆದು, ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿಎಸ್ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ. ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ನಲ್ಲಿ ಮಧ್ಯಂತರ ತೀರ್ಪು ಬಂದಿದೆ. ಶಾಲಾಭಿವೃದ್ಧಿ ಕಮಿಟಿ ಇರುವ ಕಡೆಗಳಲ್ಲಿ ಸಮಿತಿಯು ಸಮವಸ್ತ್ರ ನೀತಿ ರೂಪಿಸಿದ್ದರೆ ಅಲ್ಲಿ ಮಾತ್ರ ಈ ಆದೇಶ ಅನ್ವಯವಾಗುತ್ತದೆ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಇಲಾಖೆಯ ಕಾರ್ಯದರ್ಶಿಗಳು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧೀನದಲ್ಲಿನ ವಸತಿ ಶಾಲಾ ಕಾಲೇಜುಗಳು, ಮೌಲಾನಾ ಆಜಾದ್ ಮಾದರಿ ಶಾಲೆಗಳು (ಆಂಗ್ಲ ಮಾಧ್ಯಮ) ಶಾಲೆಗಳಿಗೂ ಹೈಕೋರ್ಟ್ ತೀರ್ಪು ಅನ್ವಯವಾಗುತ್ತದೆ ಎಂದು ಸುತ್ತೋಲೆ ಹೊರಡಿಸಿದ್ದಾರೆ. ಮೊದಲನೆಯದಾಗಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಶಾಲಾಭಿವೃದ್ಧಿ ಸಮಿತಿಯೇ ಇರುವುದಿಲ್ಲ, ಶಾಲಾಭಿವೃದ್ಧಿ ಸಮಿತಿ ರೂಪಿಸಿದ ಸಮವಸ್ತ್ರ ನೀತಿಗೆ ಮಾತ್ರ ಹೈಕೋರ್ಟ್ ತೀರ್ಪು ಅನ್ವಯವಾಗುತ್ತದೆ. ಹಾಗಾಗಿ ಈ ಸುತ್ತೋಲೆ ಘನ ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆಯಾಗುತ್ತದೆ ಎಂದು ಆರೋಪಿಸಿದ್ದಾರೆ.

ಅಲ್ಪಸಂಖ್ಯಾತ ನಿಯೋಗದ ಜೊತೆ ನಾನು, ಡಿ.ಕೆ ಶಿವಕುಮಾರ್ ಅವರು ಇಂದು ಮುಖ್ಯಮಂತ್ರಿ ಬಿ.ಎಸ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಗೊಂದಲ ನಿವಾರಿಸುವಂತೆ ಹೇಳಿದ್ದೇವೆ. ಯಾವ ಮಕ್ಕಳೂ ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ನಮ್ಮ ಕಾಳಜಿ ಎಂದು ಹೇಳಿದ್ದಾರೆ.

 

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

12 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

13 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

13 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

14 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

15 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

15 hours ago