ಬಿಜೆಪಿ ಪಕ್ಷವು ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದೆ, ದ.ಕ ಜಿಲ್ಲೆಯಲ್ಲಿ ನಡೆದ ಯಾವುದೇ ಹತ್ಯೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಕೈವಾಡವಿಲ್ಲ. ಈ ವಿಷಯವನ್ನು ನಾನು ಎಲ್ಲಿ ಬೇಕಾದರೂ ಪ್ರಮಾಣ ಮಾಡಿ ಹೇಳಲು ಸಿದ್ಧ : ರಮಾನಾಥ್ ರೈ -Vishwanews24

ಬಂಟ್ವಾಳ: ಕಲ್ಲಡ್ಕ ಪ್ರಭಾಕರ್‌ ಭಟ್‌ ಕ್ರೈಸ್ತರನ್ನು ಪ್ರಚೋದನೆ ಮಾಡುವ ನಿಟ್ಟಿನಲ್ಲಿ ಭಾಷಣ ಮಾಡಿದ್ದಾರೆ. ದಕ್ಷಿಣ ಕನ್ನಡವನ್ನು ಮತೀಯ ಪ್ರಯೋಗಾಲಯ ಮಾಡಲು ಮುಂದಾದ ಅವರು ಕನಕಪುರದಲ್ಲಿ ಪ್ರಚೋದನಕಾರಿ ಭಾಷಣವನ್ನು ಮಾಡಿದ್ದಾರೆ. ಆದರೆ ಕ್ರೈಸ್ತ ಸಮುದಾಯ ದಕ್ಷಿಣ ಕನ್ನಡ ಜಿಲ್ಲೆಯ ಸಾಮರಸ್ಯ ಬಯಸುವವರು ಎಂದು ಆರ್‌ಎಸ್‌ಎಸ್‌ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ರಮಾನಾಥ್ ರೈ ವಾಗ್ದಾಳಿ ನಡೆಸಿದ್ದಾರೆ.

ಕನಕಪುರದಲ್ಲಿ ಯೇಸು ಪ್ರತಿಭೆ ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸಿ ಕಲ್ಲಡ್ಕ ಪ್ರಭಾಕರ್‌ ಮಾತನಾಡಿದ್ದರ ವಿರುದ್ಧ ಸಿಡಿಮಿಡಿಗೊಂಡ ಅವರು, “ಬಿಜೆಪಿಯ ಅಂಗಸಂಸ್ಥೆಗಳು ರಾಜ್ಯದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿದೆ. ಪ್ರಭಾಕರ್‌ ಭಟ್‌ ಅವರು ಕ್ರೈಸ್ತರನ್ನು ಪ್ರಚೋಧಿಸುವ ನಿಟ್ಟಿನಲ್ಲಿ ಭಾಷಣ ಮಾಡಿದ್ದಾರೆ. ಅವರನ್ನು ಪ್ರಚೋದನೆಗೊಳಿಸಿ ಅವರು ಬೀದಿಗಿಳಿದರೆ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡುತ್ತಿದ್ದಾರೆ. ಆದರೆ ಕ್ರೈಸ್ತರು ಪ್ರಚೋದನೆಗೆ ಒಳಗಾಗುವುದಿಲ್ಲ ಎಂದು ಹೇಳಿದ್ದಾರೆ.

ಇನ್ನೂ ಶ್ರೀ ರಾಮ ಶಾಲೆಯ ಕುರಿತು ಮಾತನಾಡಿದ ಅವರು, “ರಾಜ್ಯ ಸರ್ಕಾರ ಶ್ರೀ ರಾಮ ಶಾಲೆಗೆ ನೀಡಲಾಗುವ ಅಕ್ಕಿ ನಿಲ್ಲಿಸಿದ್ದಾರೆ ಎಂದು ಹೇಳುತ್ತಾರೆ. ಆದರೆ ಒಂದು ಕೆ.ಜಿ ಅಕ್ಕಿಯೂ ಕೊಲ್ಲೂರು ದೇವಸ್ಥಾನದಿಂದ ಶಾಲೆಗೆ ನೀಡಿಲ್ಲ. ಪ್ರತಿ ತಿಂಗಳು ನಾಲ್ಕು ಲಕ್ಷದ ಚೆಕ್ ಮಾತ್ರ ನೀಡಲಾಗುತ್ತಿದೆ. ಅದನ್ನು ಶಾಲೆಗೆ ಬಳಕೆ ಮಾಡಲಾಗಿದೆಯೋ ಅಥವಾ ಸ್ವಂತ ಕಾರ್ಯಗಳಿಗೆ ಬಳಸಲಾಗಿದೆಯೋ ತಿಳಿದಿಲ್ಲ ಎಂದು ಅನುಮಾನ ವ್ಯಕ್ತ ಪಡಿಸಿದ್ದಾರೆ.

ಬಿಜೆಪಿ ಪಕ್ಷವು ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದೆ. ದ.ಕ ಜಿಲ್ಲೆಯಲ್ಲಿ ನಡೆದ ಯಾವುದೇ ಹತ್ಯೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಕೈವಾಡವಿಲ್ಲ. ಈ ವಿಷಯವನ್ನು ನಾನು ಎಲ್ಲಿ ಬೇಕಾದರೂ ಪ್ರಮಾಣ ಮಾಡಿ ಹೇಳಲು ಸಿದ್ಧ ಎಂದು ತಿಳಿಸಿದರು.

ರಾಜ್ಯದಲ್ಲಿ ಎಸ್‌ಡಿಪಿಐ ಸಂಘಟನೆ ನಿಷೇಧ ವಿಚಾರದಲ್ಲಿ ಮಾತನಾಡಿ, ನಾನು ಯಾವುದೇ ಮತೀಯವಾದವನ್ನು ಒಪ್ಪುವುದಿಲ್ಲ. ನಿಷೇಧ ಮಾಡುವಲ್ಲಿ ಲಾಭ ನಷ್ಟದ ಲೆಕ್ಕಾಚಾರ ಇರುವ ಸಾಧ್ಯತೆಯಿದೆ. ಇದರಿಂದಾಗಿ ಯಾರಿಗೆ ಲಾಭ ಅನ್ನುವುದನ್ನು ನೀವು ತಿಳಿಯಬೇಕು. ನಿಷೇಧದಿಂದ ಬಿಜೆಪಿಗೆ ಲಾಭ ಆಗುವುದಾದರೆ ನಿಷೇಧ ಮಾಡುತ್ತಾರೆ. ನಷ್ಟ ಆಗುತ್ತದೆ ಎಂದು ಆದಲ್ಲಿ ನಿಷೇಧ ಮಾಡದೆಯೂ ಇರಬಹುದು ಎಂದು ಹೇಳಿದರು.

ಈ ವಿಚಾರದಲ್ಲಿ ನಾನು ಪಕ್ಷದ ನಿರ್ಧಾರಕ್ಕೆ ಬದ್ಧ. ಮತೀಯವಾದಿಗಳೆಲ್ಲರಿಗೂ ಸುಳ್ಳು ಹೇಳುವುದೇ ಬಂಡವಾಳ. ಬಿಜೆಪಿಗೆ ಆಹಾರವೇ ಅಲ್ಪಸಂಖ್ಯಾತರು, ಅವರಿಲ್ಲದಿದ್ರೆ ಬಿಜೆಪಿ ಪಕ್ಷವೇ ಇಲ್ಲ ಎಂದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

 

Vishwa News 24

Recent Posts

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

30 minutes ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

42 minutes ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

3 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

4 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

17 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

21 hours ago