Featured

ಬಿಜೆಪಿ ಪಕ್ಷ ಒಂದು ಉಗ್ರ ಸಂಘಟನೆ : ಮಮತಾ ಬ್ಯಾನರ್ಜಿ

ಕೋಲ್ಕತ: ಬಿಜೆಪಿ ಪಕ್ಷ ಒಂದು ಉಗ್ರ ಸಂಘಟನೆ, ಆ ಪಕ್ಷ ಜಾತಿ ಮತ್ತು ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ ಮತ್ತು ಟಿಎಂಸಿ ಪಕ್ಷದ ಕಾರ್ಯಕರ್ತರ ಮೇಲೆ ದಾಳಿ ನಡೆಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ.

ತೃಣಮೂಲ ಕಾಂಗ್ರೆಸ್​ ಪಕ್ಷದ ಕೋರ್​ ಕಮಿಟಿ ಸಭೆಯಲ್ಲಿ ಇಂದು ಮಾತನಾಡಿದ ಅವರು ನಾವು ಬಿಜೆಪಿ ಪಕ್ಷದಂತೆ ಉಗ್ರ ಸಂಘಟನೆಯಲ್ಲ. ಅವರು ಅಹಂಕಾರಿಗಳು ಮತ್ತು ಅಸಹಿಷ್ಣುಗಳು, ಜತೆಗೆ ಧಾರ್ಮಿಕವಾಗಿ ಪಕ್ಷಪಾತ ನೀತಿ ಉಳ್ಳವರು. ಅವರು ಮುಸ್ಲಿಮ್​, ಕ್ರೈಸ್ತ ಮತ್ತು ಸಿಖ್ ಧರ್ಮಗಳನ್ನು ಇಷ್ಟ ಪಡುವುದಿಲ್ಲ. ಜತೆಗೆ ಹಿಂದುಗಳಲ್ಲೂ ಮೇಲ್ವರ್ಗ ಮತ್ತು ಕೆಳವರ್ಗದ ಜನರ ನಡುವೆ ತಾರತಮ್ಯ ಮಾಡುತ್ತಿದೆ.

ಬಿಜೆಪಿ ಪಕ್ಷ ದೆಹಲಿಯಲ್ಲಿ ಅಧಿಕಾರದಲ್ಲಿದೆ ಎಂಬ ಮಾತ್ರಕ್ಕೆ ಎನ್​ಕೌಂಟರ್​ ನಡೆಸುವ ಬೆದರಿಕೆ ಒಡ್ಡುತ್ತಿದ್ದಾರೆ. ಬಾಂಬ್​ ದಾಳಿ ನಡೆಸುವ ಕುರಿತು ಮಾತನಾಡುತ್ತಿದ್ದಾರೆ. ಅವರು ನಮ್ಮ ತಂಟೆಗೆ ಬಂದರೆ ನಾವು ಸುಮ್ಮನಿರುವುದಿಲ್ಲ, ಅವರಿಗೆ ತಕ್ಕ ಪ್ರತ್ಯುತ್ತರ ನೀಡುತ್ತೇವೆ ಎಂದು ಮಮತಾ ಕಿಡಿ ಕಾರಿದ್ದಾರೆ.

ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್​ ಘೋಷ್​ ಅವರು ತೃಣಮೂಲ ಕಾಂಗ್ರೆಸ್​ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಡೆಸುವುದನ್ನು ಸಹಿಸಲು ಸಾಧ್ಯವಿಲ್ಲ, ನಾವು ಸೂಕ್ತ ಪ್ರತ್ಯುತ್ತರ ನೀಡುತ್ತೇವೆ ಎಂದು ತಿಳಿಸಿದ್ದರು

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

2 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

22 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago