Featured

ಬಿಜೆಪಿ ಪರ ನಾನು ಯಾಕೇ ಪ್ರಚಾರ ಮಾಡಲಿ…? ಬಿಜೆಪಿ ವಿರುದ್ಧ ತಿರುಗಿಬಿದ್ದ ಬಾಬಾ ರಾಮ್‍ದೇವ್.

ನವದೆಹಲಿ: ತೈಲ ಬೆಲೆ ಏರಿಕೆಯನ್ನು ನಿಯಂತ್ರಿಸದೇ ಇದ್ದರೆ ನರೇಂದ್ರ ಮೋದಿ ಸರ್ಕಾರಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಯೋಗ ಗುರು ಬಾಬಾ ರಾಮ ದೇವ್ ಎಚ್ಚರಿಕೆ ನೀಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆ ಪ್ರಚಾರದಲ್ಲಿ ತಾನು ಭಾಗಿಯಾಗುವುದಿಲ್ಲ ಎಂದು ಹೇಳಿದ ರಾಮದೇವ್, ನನಗೆ ಅವಕಾಶ ನೀಡಿದರೆ ಪೆಟ್ರೋಲ್ ಮತ್ತು ಡೀಸೆಲ್‍ನ್ನು ಈಗಿರುವ ಬೆಲೆಯ ಅರ್ಧ ಬೆಲೆಗೆ ಮಾರುವುದಾಗಿ ಹೇಳಿದ್ದಾರೆ.

2015ರಲ್ಲಿ ರಾಮದೇವ್ ಬಿಜೆಪಿ ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿದ್ದರು. ಅದರ ನಂತರದ ವರ್ಷದಲ್ಲಿ ಅವರನ್ನು ಹರ್ಯಾಣದ ರಾಯಭಾರಿಯನ್ನಾಗಿ ಮಾಡಿ ಸಂಪುಟ ಸಚಿವರ ದರ್ಜೆಯ ಅನುಕೂಲಗಳನ್ನು ನೀಡುವುದರ ಜತೆಗೆ ಕೆಂಪುಗೂಟದ ಕಾರು, ರಕ್ಷಣಾ ಸಿಬ್ಬಂದಿ ಮತ್ತು ಬೆಂಗಾವಲು ವಾಹನಗಳನ್ನೂ ನೀಡಲಾಗಿತ್ತು.

ಇದೀಗ ನೀವು ಬಿಜೆಪಿ ಪರ ಚುನಾವಣಾ ಪ್ರಚಾರಕ್ಕಿಳಿಯುತ್ತೀರಾ? ಎಂದು ಕೇಳಿದರೆ ನಾನು ಯಾಕೆ ಪ್ರಚಾರ ಮಾಡಬೇಕು ಎಂದು ಉತ್ತರಿಸಿದ್ದಾರೆ ರಾಮದೇವ್.

ನಾನು ಈಗ ರಾಜಕೀಯದಿಂದ ದೂರ ಸರಿದಿದ್ದೇನೆ. ನಾನು ಎಲ್ಲ ಪಕ್ಷದವರೊಂದಿಗೆ ಇದ್ದೇನೆ ಆದರೆ ನಾನು ಯಾವ ಪಕ್ಷದೊಂದಿಗೂ ಇಲ್ಲ ಎಂದು ಎನ್‍ಡಿಟಿವಿ ಯುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಹೇಳಿದ್ದಾರೆ.
ಯಾವುದೇ ಕಾರಣ, ವಿವರಣೆ ನೀಡದೆಯೇ ಪ್ರಧಾನಿ ಮೋದಿಯವರನ್ನು ಟೀಕಿಸುವುದು ನಮ್ಮ ಹಕ್ಕು ಎಂದು ಹೇಳಿದ ಬಾಬಾ, ಮರುಗಳಿಗೆಯಲ್ಲಿಯೇ ಪ್ರಧಾನಿ ಮೋದಿ ಉತ್ತಮ ಕೆಲಸ ಮಾಡಿದ್ದಾರೆ. ಸ್ವಚ್ಛ ಭಾರತ ಅಭಿಯಾನವನ್ನು ಮಾಡಿದ್ದಾರೆ. ಯಾವುದೇ ದೊಡ್ಡ ಹಗರಣಗಳನ್ನು ಮಾಡಲು ಬಿಡಲಿಲ್ಲ ಎಂದಿದ್ದಾರೆ.
ಸರ್ಕಾರ ಇಂಧನಕ್ಕೂ ಜಿಎಸ್‍ಟಿ ಅನ್ವಯ ಮಾಡಬೇಕು. ಆದರೆ ತೆರಿಗೆ ಶೇ.28ಕ್ಕಿಂತ ಹೆಚ್ಚಿರಬಾರದು. ಆದಾಯದಲ್ಲಿನ ನಷ್ಟ ದೇಶದ ಪ್ರಗತಿಯನ್ನು ಬಾಧಿಸಬಾರದು. ಶ್ರೀಮಂತರ ಮೇಲೆ ನಾವು ತೆರಿಗೆ ಹಾಕಬೇಕು ಎಂದ ಬಾಬಾ ಅವರಲ್ಲಿ
ಅದು ಹೇಗೆ ನೀವು ಪೆಟ್ರೋಲ್ ದರವನ್ನು ಕಡಿಮೆ ಮಾಡುತ್ತೀರಿ ಎಂದು ಕೇಳಿದಾಗ, ಸರ್ಕಾರ ನನಗೆ ಅವಕಾಶ ನೀಡಿದರೆ ಮತ್ತು ತೆರಿಗೆಯಲ್ಲಿ ಕಡಿತ ಮಾಡಿದರೆ ನಾನು ಪೆಟ್ರೋಲ್, ಡೀಸೆಲ್ ಲೀಟರ್‌ಗೆ ₹30-₹40 ಮಾಡಬಲ್ಲೆ ಎಂದಿದ್ದಾರೆ.

ಜಾಹಿರಾತು: ಪಂಡೀತ್ ಸುದರ್ಶನ್ ಭಟ್

Vishwa News 24

Recent Posts

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

5 minutes ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

42 minutes ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

49 minutes ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

53 minutes ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

1 hour ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

1 hour ago