ನವದೆಹಲಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ‘ಸಂಕಲ್ಪ ಪತ್ರ’ ಎಂಬ ಹೆಸರಿನಲ್ಲಿ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ನವದೆಹಲಿಯಲ್ಲಿ ಏ 8ರ ಸೋಮವಾರ ಬಿಡುಗಡೆ ಮಾಡಿದೆ.
45 ಪುಟಗಳ ‘ಸಂಕಲ್ಪ ಪತ್ರ’ ಹೆಸರಿನ ಪ್ರಣಾಳಿಕೆಯಲ್ಲಿ ರಾಷ್ಟ್ರೀಯ ಭದ್ರತೆಗೆ ಮೊದಲ ಸ್ಥಾನವನ್ನು ನೀಡಲಾಗಿದೆ. 2022ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುತ್ತೇವೆ. ರಾಮ ಮಂದಿರವನ್ನು ನಿರ್ಮಾಣ ಮಾಡುತ್ತೇವೆ ಎಂದು ಬಿಜೆಪಿ ತಿಳಿಸಿದೆ.
ಭಯೋತ್ಪಾದನೆ ನಿರ್ಮೂಲನೆ ನಮ್ಮ ಪ್ರಮುಖ ಗುರಿಯಾಗಿದ್ದು, ಸ್ವದೇಶಿ ಶಸ್ತ್ರಾಸ್ತ್ರಗಳ ನಿರ್ಮಾಣಕ್ಕೆ ಒತ್ತು ನೀಡುತ್ತೇವೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ 2022ಕ್ಕೆ ಒಂದು ಕುಟುಂಬಕ್ಕೆ ಒಂದು ಮನೆಯನ್ನು ನಿರ್ಮಿಸಿ ಕೊಡುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ತಿಳಿಸಿದೆ.
ಪ್ರಣಾಳಿಕೆ ಬಿಡುಗಡೆ ಸಂದರ್ಭ ಮಾತನಾಡಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ‘ನಮ್ಮ ಆಡಳಿತದಲ್ಲಿ ಒಂದೇ ಒಂದು ಹಗರಣ ನಡೆದಿಲ್ಲ. ಯುಪಿಎ ಆಡಳಿತದ ಹತ್ತು ವರ್ಷಗಳು ಹೇಗಿದ್ದವು ಎಂಬುದನ್ನು ಒಮ್ಮೆ ನೆನಪಿಸಿಕೊಳ್ಳಿ’ ಎಂದು ಹೆಮ್ಮೆಯಿಂದ ಹೇಳಿದರು.
‘ದೇಶದ ಆರ್ಥಿಕತೆ ಸುಧಾರಿಸಲು ನಮ್ಮ ಸರ್ಕಾರ ಸಾಕಷ್ಟು ಶ್ರಮವಹಿಸಿತು. ಬೆಳೆ ಉತ್ಪತ್ತಿ ಸುಧಾರಿಸಲು 12 ಕೋಟಿ ರೈತರಿಗೆ ಅಗತ್ಯ ನೆರವು ಒದಗಿಸಲಾಯಿತು. ವಿಶ್ವಮಟ್ಟದ ಹಲವು ಸೂಚ್ಯಂಕಗಳಲ್ಲಿ ನಮ್ಮ ಸ್ಥಿತಿಗತಿ ಸುಧಾರಿಸಿದೆ. 2014ರಿಂದ 2019ರ ಅವಧಿಯನ್ನು ದೇಶದ ಇತಿಹಾಸವು ಸುವರ್ಣಯುಗ ಎಂದೇ ನೆನಪಿರಿಸಿಕೊಳ್ಳುತ್ತದೆ’ ಎಂದು ಅವರು ಅಭಿಪ್ರಾಯಪಟ್ಟರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…