Featured

ಬಿಜೆಪಿ ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ – Vishwanews24

ಬಿಜೆಪಿ ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಇಂದು (ಏ.12) ನಾಮಪತ್ರ ಸಲ್ಲಿಸಿದರು.

ಬೃಹತ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ಉಮೇದುವಾರಿಕೆ ಸಲ್ಲಿಸಿದರು. ಪುತ್ರ ಕಾಂತೇಶ್​ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್​ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಬಿಜೆಪಿ ಹಿರಿಯ ಮುಖಂಡ ಕೆಎಸ್​ ಈಶ್ವರಪ್ಪ ಅವರು ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ರಾಜ್ಯ ಬಿಜೆಪಿಯಲ್ಲಿನ ಕುಟುಂಬ ರಾಜಕಾರಣದ ವಿರೋಧಿಸಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಕೆಎಸ್​ ಈಶ್ವರಪ್ಪ ಹೇಳಿದ್ದಾರೆ.

ಈ ಲೋಕಸಭೆ ಚುನಾವಣೆಯಲ್ಲಿ ಗೆದ್ದರೆ ನಾನು ನರೇಂದ್ರ ಮೋದಿಯವರಿಗೆ ಬೆಂಬಲ ನೀಡುತ್ತೇನೆ ಎಂದು ಕೆಎಸ್ ಈಶ್ವರಪ್ಪ ಅವರು ಹೇಳಿದ್ದಾರೆ.​ ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಪ್ರತಿ ಮನೆ ಮನೆಗೆ ಹೋಗಿ ಈಶ್ವರಪ್ಪ ಏಕೆ ಚುನಾವಣೆಗೆ ನಿಂತಿದ್ದಾರೆ, ಏನು ಅನ್ಯಾಯ ಆಗಿದೆ ಅಂತ ನಮ್ಮ ಕಾರ್ಯಕರ್ತರು ತಿಳಿಸುತ್ತಾರೆ. ಅಪ್ಪ ಮಕ್ಕಳ ಕೈಯಲ್ಲಿ ಪಕ್ಷ ಏಕೆ ಇದೆ? ಚುನಾವಣೆ ಬಳಿಕ ನಂತರ ಬಿಜೆಪಿಯಲ್ಲಿ ಕೆಲವು ಬದಲಾವಣೆ ಆಗುತ್ತದೆ. ಪಕ್ಷ ಶುದ್ದೀಕರಣ ಆಗುವ ವಿಶ್ವಾಸ ಇದೆ ಎಂದು ನಾಮಪತ್ರ ಸಲ್ಲಿಕೆ ಬಳಿಕ ಬಂಡಾಯ ಅಭ್ಯರ್ಥಿ ಕೆ.ಎಸ್​.ಈಶ್ವರಪ್ಪ ಹೇಳಿದರು.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

21 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago