Featured

ಬಿಜೆಪಿ ಬಡವರ ವಿರೋಧಿ, ಅವರು ಕೊಡೋದೂ ಇಲ್ಲ, ಕೊಟ್ಟವರನ್ನ ಸಹಿಸೋದು ಇಲ್ಲ : ರಾಮಲಿಂಗಾರೆಡ್ಡಿ – vishwanews24

ಬಿಜೆಪಿಯವರು ಬಡವರ ವಿರೋಧಿಗಳು ಗ್ಯಾರಂಟಿ ಯೋಜನೆ ಸಹಿಸುತ್ತಿಲ್ಲ : ರಾಮಲಿಂಗಾರೆಡ್ಡಿ

ಬೆಂಗಳೂರು: ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಬಿಜೆಪಿಯವರು ಬಡವರ ವಿರೋಧಿಗಳು ಗ್ಯಾರಂಟಿ ಯೋಜನೆ ಸಹಿಸುತ್ತಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ವಿಚಾರವಾಗಿ ಮಾತನಾಡಿದ ಅವರು, ಮೂರುವರೆ ವರ್ಷ ಎಲ್ಲಾ ಗ್ಯಾರಂಟಿ ಇದ್ದೇ ಇರುತ್ತದೆ. ಮುಂದೆ ಮತ್ತೆ ಚುನಾವಣೆ ಬರುತ್ತದೆ. ಆಗಲೂ ನಾವೇ ಗೆಲ್ಲುತ್ತೇವೆ. ಆಗಲೂ ಈ ಗ್ಯಾರಂಟಿ ಮುಂದುವರೆಯುತ್ತದೆ. ಬಿಜೆಪಿ ಬಡವರ ವಿರೋಧಿಗಳು. ಅವರು ಕೊಡೋದೂ ಇಲ್ಲ, ಕೊಟ್ಟವರನ್ನ ಸಹಿಸೋದು ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯವರು ಅಧಿಕಾರದಲ್ಲಿ ಇದ್ದಾಗ ಸಾಲ ಹೊರಿಸಿ ಹೋದವರು. ಎಲ್ಲಾ ಕಡೆ ಸಾವಿರಾರು ಕೋಟಿ ಸಾಲ ಇಟ್ಟು ಹೋಗಿದ್ದಾರೆ. ಅಭಿವೃದ್ಧಿಗೆ ಮಾಡುವ ಖರ್ಚಿನ ಹಣ ಸೇರಿ ಎಲ್ಲಾ ಕಡೆ ಸಾಲ ಇಟ್ಟು ಹೋಗಿದ್ದಾರೆ. ಈಗ ನಮ್ಮ ಮೇಲೆ ಹೇಳುತ್ತಾರೆ. ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ವಕ್ಫ್ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರಿಂದ ಹಿಡಿದು ಎಲ್ಲಾ ನಾಯಕರು ಆರಾಮವಾಗಿ ಇದ್ದಾರೆ. ಮುಂದಿನ ಐದು ವರ್ಷ ಕೂಡ ಅವರು ಬಿಡುವಾಗಿ ಇರುತ್ತಾರೆ. ವಿಪಕ್ಷದಲ್ಲೇ ಕೂರುತ್ತಾರೆ. ಹೀಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಮುಂದುವರೆದು ಈಗಾಗಲೇ ವಕ್ಫ್ ವಿಚಾರವಾಗಿ ಸಿಎಂ ಸ್ಪಷ್ಟನೆ ನೀಡಿದ್ದಾರೆ. ನೋಟಿಸ್ ಕೊಡಲು ಕಾರಣ ಯಾರು ಅಂದರೆ ಅದು ಬಿಜೆಪಿ ಅವರೇ. ಮಗು ಚಿವುಟೋದು ಅವರೇ, ತೊಟ್ಟಿಲು ತೂಗೋದು ಅವರೇ. ಅವರಿಂದಲೇ ನೋಟಿಸ್ ಕೊಟ್ಟಿದ್ದು ಅಲ್ವಾ. ಅದನ್ನು ಈಗ ನಾವು ನಿಲ್ಲಿಸುತ್ತಿದ್ದೇವೆ. ನಾವು ರೈತರ ಪರವಾಗಿ ಇದ್ದೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago