ಮದ್ದೂರು: ‘ಜಿಲ್ಲೆಯಲ್ಲಿ ಬಿಜೆಪಿ ಬಲವರ್ಧನೆಗೆ ಕಾರ್ಯಕರ್ತರು ದುಡಿಯಬೇಕು’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಉಮೇಶ್ ಸಲಹೆ ನೀಡಿದರು.
ಪಟ್ಟಣದ ಸೋಮೇಶ್ವರ ಸಮುದಾಯ ಭವನದಲ್ಲಿ ಮಂಗಳವಾರ ನಡೆದ ತಾಲ್ಲೂಕು ಮಟ್ಟದ ಘಟ ನಾಯಕರು ಹಾಗೂ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು.
‘ಜೂನ್‌ನಲ್ಲಿ ನಡೆಯುವ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಸ್ಪರ್ಧಿಸಿದ್ದು, ಅವರ ಗೆಲುವಿಗೆ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು’ ಎಂದು ಮನವಿ ಮಾಡಿದರು.
ಮನ್‌ಮುಲ್ ನಿರ್ದೇಶಕ ಎಸ್.ಪಿ ಸ್ವಾಮಿ ಮಾತನಾಡಿ, ‘ಮೈ.ವಿ.ರವಿಶಂಕರ್ ಅವರಿಗೆ ತಾಲ್ಲೂಕಿನಲ್ಲಿ ಹೆಚ್ಚು ಮತಗಳು ಸಿಗುವಂತೆ ಕಾರ್ಯಕರ್ತರು ದುಡಿಯಬೇಕು’ ಎಂದು ಕರೆ ನೀಡಿದರು.
ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಪಣ್ಣೇದೊಡ್ಡಿ ರಘು, ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಡಾ.ಸದಾನಂದ, ಮಧು ಗಂಗಾಧರ್, ರಾಜ್ಯ ವಕ್ತಾರರಾದ ಮಹೇಶ್, ಮುಖಂಡರಾದ ಮರಿ ಹೆಗಡೆ, ಬೋರಯ್ಯ, ಹನುಮಂತು, ಚಿಕ್ಕಂಕನಹಳ್ಳಿ ಮನು, ತಾಲ್ಲೂಕು ಘಟಕದ ಕಿಸಾನ್ ಮೋರ್ಚಾ ಅಧ್ಯಕ್ಷ ಶಿವದಾಸ್ ಸತೀಶ್, ಟಿಎಪಿಸಿಎಂಎಸ್ ಅಧ್ಯಕ್ಷ ಮಹದೇವು, ತಾಲ್ಲೂಕು ಕಾರ್ಯದರ್ಶಿ ಹೊನ್ನಲಗೆರೆ ಸ್ವಾಮಿ, ಕದಲೂರು ಸುರೇಶ್ ಇದ್ದರು.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…