Featured

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ..

ದಲಿತರಿಗೆ ಮೀಸಲಾತಿ ತಂದವರು ನಾವು ..

ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ ಬರಲಿಲ್ಲ..

ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಟ್ಟಿದ್ದು ಕಾಂಗ್ರೆಸ್ ,  ಬಿಜೆಪಿ ಹೋರಾಟದಲ್ಲಿ ಭಾಗಿಯಾಗಲೇ ಇಲ್ಲ: ಸಿದ್ದರಾಮಯ್ಯ

ಬಾಗಲಕೋಟೆ: ನಮ್ಮ ಜನಪರವಾದ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ಅಣಕಿಸಿದ್ದಾರೆ. ಆದರೆ, ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ. ನಮ್ಮದು ಪಕ್ಷಾತೀತವಾದ ಅಭಿವೃದ್ಧಿಪರ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ ಅವರು ನುಡಿದರು.

ಬಾಗಲಕೋಟೆ ಉಪ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಾತನಾಡಿದ ಅವರು, “ಬಿಜೆಪಿಯವರಿಗೆ ಬಡವರ, ಮಹಿಳೆಯರ ಕಷ್ಟ ಗೊತ್ತಿಲ್ಲ. ಅದಕ್ಕೇ ಅವರು ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ದಲಿತರಿಗೆ ಮೀಸಲಾತಿ ತಂದವರು ನಾವು. ಬಿಜೆಪಿ ತರಲಿಲ್ಲ. ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ಬ್ರಿಟೀಷರ ಜೊತೆ ಸೇರಿದ್ದ ಬಿಜೆಪಿಯವರು ದೇಶದ ಸ್ವಾತಂತ್ರ‍್ಯಕ್ಕಾಗಿ ನಡೆದ ಹೋರಾಟದಲ್ಲಿ ಭಾಗಿಯಾಗಲೇ ಇಲ್ಲ. 1925 ರಲ್ಲೇ ಆರ್‌ಎಸ್‌ಎಸ್ ಸ್ಥಾಪನೆ ಆಗಿದ್ದರೂ ಬ್ರಿಟೀಷರ ವಿರುದ್ಧ ಆರ್‌ಎಸ್‌ಎಸ್ ಧ್ವನಿ ಎತ್ತಲಿಲ್ಲ. ಸ್ವಾತಂತ್ರ‍್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ. ಇದು ಕಾಂಗ್ರೆಸ್ ನ ಹೋರಾಟದ ಪರಂಪರೆ ಮತ್ತು ಕಾಂಗ್ರೆಸ್ ಪಕ್ಷದ ಇತಿಹಾಸ” ಎಂದರು.

“ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ ಬರಲಿಲ್ಲ. ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರೂ ಬಡವರ, ಹಿಂದುಳಿದವರ ಅಭಿವೃದ್ಧಿಗೆ ಕೆಲಸ ಮಾಡಲೇ ಇಲ್ಲ. ಮಾತೆತ್ತಿದರೆ ಡಬಲ್ ಎಂಜಿನ್ ಸರ್ಕಾರ ಎನ್ನುತ್ತಿದ್ದರು. ಆದರೆ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಕೃಷ್ಣ ಮೇಲ್ದಂಡೆ ಮತ್ತು ಆಲಮಟ್ಟಿ ವಿಚಾರದಲ್ಲಿ ಜನವಿರೋಧಿ ನಿಲುವು ಹೊಂದಿದ್ದರಿಂದಲೇಹದಿಮೂರು ವರ್ಷಗಳಿಂದ ಗೆಜೆಟ್ ನೋಟಿಫಿಕೇಶನ್ ಕೂಡ ಮಾಡಲಿಲ್ಲ. ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗಲೂ ಭೂ ಪರಿಹಾರ ಘೋಷಿಸಿದರೂ ಹಣ ನೀಡಲಿಲ್ಲ. ನಾನು ಮುಖ್ಯಮಂತ್ರಿಯಾಗಿ ಸಭೆ ನಡೆಸಿ ಎಕರೆ ನೀರಾವರಿ ಜಮೀನಿಗೆ 40 ಲಕ್ಷ ರೂ., ಒಣ ಭೂಮಿಗೆ 30 ಲಕ್ಷ ರೂ ಪರಿಹಾರ ಕೊಡುವ ತೀರ್ಮಾನ ಮಾಡಿ ಕೆಲಸ ಪ್ರಾರಂಭ ಮಾಡಿದ್ದು ಮೂರು ವರ್ಷದಲ್ಲಿ ಪರಿಹಾರ ಕೊಡುತ್ತೇವೆ” ಎಂದು ಭರವಸೆ ನೀಡಿದರು.

“ನಾವು ಪ್ರತೀ ವರ್ಷ 52 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯದ ಜನರ ಜೇಬಿಗೆ ಹಾಕುತ್ತಲೇ ಅಭಿವೃದ್ಧಿ ಕೆಲಸವನ್ನೂ ಮಾಡುತ್ತಿದ್ದೇವೆ. ಬಿಜೆಪಿಯವರು ಕಳ್ಳೆತ್ತುಗಳು. ಗೇಯುವ ಎತ್ತಿಗೆ ತಾನೆ ಮೇವು ಹಾಕೋದು, ಹಾಗೆಯೇ ಕೆಲಸ ಮಾಡಿದ ನಮಗೆ ಕೂಲಿ ಕೊಡಿ” ಎಂದು ವಾಗ್ದಾಳಿ ನಡೆಸಿದರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

3 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

3 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

3 days ago