ಬೆಳ್ತಂಗಡಿ, : ಏಪ್ರಿಲ್ 18 ರಂದು ಬಿಜೆಪಿ ಭದ್ರಕೋಟೆಯನ್ನು ಕಾಂಗ್ರೆಸ್ ಭದ್ರಕೋಟೆಯಾಗಿ ಪರಿವರ್ತಿಸುವ ಬಗ್ಗೆ ಸಂಕಲ್ಪ ಮಾಡಿದ್ದೇನೆ. ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ವಿಶ್ವಾಸ ವ್ಯಕ್ತಪಡಿಸಿದರು.
ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಹನುಮಾನ್ ಚಾಲೀಸ ಪಠಿಸಿ ನಂತರ ಮಾತನಾಡಿದ ಅವರು, ನನ್ನ ರಾಜಕೀಯ ಗುರುವಿನ (ಡಿ.ಕೆ ಶಿವಕುಮಾರ) ಮುಂದೆ ಮಾಡುವ ಮೊದಲ ಭಾಷಣ. ಬೆಳ್ತಂಗಡಿಯನ್ನು ಬಿಜೆಪಿಯ ಭದ್ರಕೋಟೆ ಎಂದು ಹಲವರು ಹೇಳುತ್ತಿದ್ದಾರೆ. ಆದರೆ, ಮುಂದಿನ ದಿನಗಳಲ್ಲಿ ಬಿಜೆಪಿಯ ಕೋಟೆ ಕಾಂಗ್ರೆಸ್ ಕೈ ಸೇರಲಿದೆ ಎಂದು ತಿಳಿಸಿದರು.
ಬೆಳ್ತಂಗಡಿಯಿಂದಲೇ ನನ್ನ ಚುನಾವಣೆಯ ಪ್ರಚಾರ ಪ್ರಾರಂಭಿಸಿದ್ದೇನೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಜನರ ಸೇವೆಯ ಸಂಕಲ್ಪ ಮಾಡಿರುವ ನನಗೆ ಜಿಲ್ಲೆಯ ಜನತೆಯ ಹರಕೆ ನನ್ನ ಮೇಲಿದೆ ..ಇದು ನನ್ನ ಚುನಾವಣೆಯಲ್ಲ, ಕಾಂಗ್ರೆಸ್ ಪಕ್ಷದ ನಿಷ್ಠಾವಂತರ ಚುನಾವಣೆ. ಈ ಬಾರಿ ಕಾಂಗ್ರೆಸ್ ಚುನಾವಣೆಯಲ್ಲಿ ಗೆಲ್ಲಲಿದೆ. ಈ ಮೂಲಕ ಬಿಜೆಪಿಯ ಕೋಟೆ ಕಾಂಗ್ರೆಸ್ ಪಕ್ಷದ ಕೈ ಸೇರುತ್ತದೆ ಎಂದು ಹೇಳಿದರು.
ಏಪ್ರಿಲ್ 18 ರಂದು ಬಿಜೆಪಿ ಭದ್ರಕೋಟೆಯನ್ನು ಕಾಂಗ್ರೆಸ್ ಭದ್ರಕೋಟೆಯಾಗಿ ಪರಿವರ್ತಿಸುವ ಬಗ್ಗೆ ಸಂಕಲ್ಪ ಮಾಡಿದ್ದೇನೆ. ಜಿಲ್ಲೆಯ ಜನರಿಗೆ ದಾರಿದೀಪವಾಗಿದ್ದ ವಿಜಯಾ ಬ್ಯಾಂಕ್ ವಿಲೀನವಾಗಿ ತನ್ನ ಅಸ್ತಿತ್ವ ಕಳೆದುಕೊಂಡಿದೆ. ವಿಜಯಾಬ್ಯಾಂಕ್ ಉಳಿಸುವ ಸಂಕಲ್ಪವನ್ನು ನಾವು ಕೈಗೊಳ್ಳುತ್ತೇವೆ. ಅವಕಾಶ ಸಿಕ್ಕಿದ ಮೇಲೆ ನನ್ನ ಸಂಸದೀಯ ಪಟ್ಟ ಹೋದರೂ ಪರವಾಗಿಲ್ಲ, ಶತಾಯಗತಾಯ ಹೋರಾಟ ನಡೆಸಿ ವಿಜಯಾ ಬ್ಯಾಂಕ್ ಲಾಂಛನ ಮತ್ತೆ ತರುತ್ತೇನೆ ಎಂದು ಭರವಸೆ ನೀಡಿದರು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…