Featured

ಬಿಜೆಪಿ ಭದ್ರಕೋಟೆ ಕರಾವಳಿ ಜಿಲ್ಲೆಗೆ ಅಮಿತ್ ಶಾ : ಫೆ. 11ಕ್ಕೆ ಪುತ್ತೂರಿಗೆ ಭೇಟಿ – Vishwanews24

ಬಿಜೆಪಿ ಭದ್ರಕೋಟೆ ಕರಾವಳಿ ಜಿಲ್ಲೆಗೆ ಅಮಿತ್ ಶಾ ,ಫೆ. 11ಕ್ಕೆ ಪುತ್ತೂರು, ಮಂಗಳೂರಿಗೆ ಭೇಟಿ

ಹೀಗಿದೆ ʻಸಂಚಾರ ಮಾರ್ಗ’ದ ಬದಲಾವಣೆ

ಮಂಗಳೂರು: ಪುತ್ತೂರಿನ ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಲುವಾಗಿ ಕೇಂದ್ರ ಸಚಿವ ಅಮಿತ್ ಶಾ ನಾಳೆ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ ಜನರು ತಾವಾಗಿಯೇ ಗೆಲ್ಲಿಸಿಕೊಡುವಷ್ಟು ಸಾಧನೆಯನ್ನು ನಾವು ಮಾಡಿಲ್ಲ ಅನ್ನೋ ಕಟು ಸತ್ಯ ಬಿಜೆಪಿಗಗೂ ತಿಳಿದಿದೆ. ಹೀಗಾಗಿ ಪ್ರಬಲ ನಾಯಕರ ಹೆಸರಲ್ಲಿ ತನ್ನ ಭದ್ರಕೋಟೆಗಳನ್ನು ಉಳಿಸಿಕೊಳ್ಳುವ ಸಾಹಸ ಮಾಡ್ತಿರುವ ಬಿಜೆಪಿ ಕರಾವಳಿ ಜಿಲ್ಲೆಗೆ ಅಮಿತ್ ಶಾ ಭೇಟಿಗೆ ರತ್ನಗಂಬಳಿ ಹಾಸಿದೆ.

ರಾಜ್ಯ ವಿಧಾನಸಭಾ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್ ಕರ್ನಾಟಕದಲ್ಲಿ ಪ್ರಚಾರ ಕಾರ್ಯವನ್ನು ನಡೆಸುವ ಯಾವುದೇ ಸಣ್ಣ ಅವಕಾಶವೂ ತಪ್ಪಿಹೋಗಲು ಬಿಡುತ್ತಿಲ್ಲ. ಪ್ರಧಾನಿ ಮೋದಿ, ಅಮಿತ್ ಶಾ ಜಿದ್ದಿಗೆ ಬಿದ್ದವರಂತೆ ಕರ್ನಾಟಕಕ್ಕೆ ಬರುತ್ತಲೇ ಇದ್ದಾರೆ. ಹಿಂದಿನ ಭೇಟಿಗಳಲ್ಲಿ ಕಾಂಗ್ರೆಸ್, ಜೆಡಿಎಸ್ ಭದ್ರಕೋಟೆಯಲ್ಲಿ ಕೇಸರಿ ಕಹಳೆ ಮೊಳಗಿಸಿದ್ದ ಮಾಜಿ ಬಿಜೆಪಿ ಅಧ್ಯಕ್ಷ ಹಾಗೂ ಚುನಾವಣಾ ಚಾಣಕ್ಯ ಎಂದು ಹೆಸರಾದ ಅಮಿತ್ ಶಾ ಪುತ್ತೂರು ಹಾಗೂ ಮಂಗಳೂರಿನಲ್ಲಿ ಒಂದು ದಿನದ ಪ್ರವಾಸ ನಡೆಸಲಿದ್ದು, ಅವರ ಕಾರ್ಯಕ್ರಮದ ವಿವರ ಇಲ್ಲಿದೆ:

ಅಮಿತ್ ಶಾ ಮಂಗಳೂರು ಭೇಟಿ ವೇಳಾಪಟ್ಟಿ:  ಫೆಬ್ರುವರಿ 11, ಶನಿವಾರ ಮಧ್ಯಾಹ್ನ 2.15 – ಕಣ್ಣೂರು ವಿಮಾನ ನಿಲ್ದಾಣಕ್ಕೆ ಅಮಿತ್ ಶಾ ಆಗಮನ. ಮಧ್ಯಾಹ್ನ 2.45 – ಕಣ್ಣೂರಿನಿಂದ ಬಿಎಸ್ಎಫ್‌ ಹೆಲಿಕಾಪ್ಟರ್‌ ಮೂಲಕ ಪುತ್ತೂರಿನ ಈಶ್ವರ ಮಂಗಲಕ್ಕೆ ಆಗಮನ. ಮಧ್ಯಾಹ್ನ 2.50 – ಈಶ್ವರಮಂಗಲ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ ಮಧ್ಯಾಹ್ನ 3.35 – ಹೆಲಿಕಾಪ್ಟರ್‌ ಮೂಲಕ ಈಶ್ವರ ಮಂಗಲದಿಂದ ಪುತ್ತೂರಿಗೆ ಆಗಮನ. ಮಧ್ಯಾಹ್ನ 3.40: ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಮಾರಂಭದಲ್ಲಿ ಭಾಗಿ ಸಂಜೆ 6.00: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಮಿತ್ ಶಾ ಆಗಮನ ಸಂಜೆ 6:15 ರಿಂದ 8:00 : ಏರ್​ಪೋರ್ಟ್ ಸಮೀಪ ಬಿಜೆಪಿ ಪ್ರಮುಖರೊಂದಿಗೆ ಆಂತರಿಕ ಸಭೆ ರಾತ್ರಿ 8:15 : ಮಂಗಳೂರು ಏರ್​ಪೋರ್ಟ್​ನಿಂದ ದೆಹಲಿಗೆ ಪ್ರಯಾಣ

ಶನಿವಾರ ಮಧ್ಯಾಹ್ನ 2:15ಕ್ಕೆ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಲ್ಲಿಂದ ಬಿಎಸ್​ಎಫ್ ಹೆಲಿಕಾಪ್ಟರ್ ಮೂಲಕ ಪುತ್ತೂರಿನ ಈಶ್ವರ ಮಂಗಲಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 2:50ಕ್ಕೆ ಈಶ್ವರ ಮಂಗಲ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಬಿಜೆಪಿ ಚಾಣಕ್ಯ ಬಳಿಕ ಹೆಲಿಕಾಪ್ಟರ್ ಮೂಲಕ ಪುತ್ತೂರಿಗೆ ಬಂದಿಳಿಯಲಿದ್ದಾರೆ. ಇಲ್ಲಿ ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಲಿರಿವ ಅಮಿತ್ ಶಾ ಸಂಜೆ ಆರು ಗಂಟೆ ವೇಳೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರಳಲಿದ್ದಾರೆ. ಸಂಜೆ ಆರು ಹದಿನೈದರಿಂದ ರಾತ್ರಿ ಎಂಟು ಗಂಟೆಯವರೆಗೂ ಮಂಗಳೂರು ಏರ್​ಪೋರ್ಟ್ ಸಮೀಪ ಬಿಜೆಪಿ ಪ್ರಮುಖರೊಂದಿಗೆ ಅಮಿತ್ ಶಾ ಆಂತರಿಕ ಸಭೆ ನಡೆಸಲಿದ್ದಾರೆ. ಈ ಸಭೆ ಮುಕ್ತಾಯಗೊಂಡ ಬಳಿಕ ಅಮಿತ್ ಶಾ ದೆಹಲಿಗೆ ಮರಳಲಿದ್ದಾರೆ.

ಪರ್ಯಾಯ ಮಾರ್ಗಗಳು :

ಪುತ್ತೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಲಿನೆಟ್‌ ಜಂಕ್ಷನ್‌ನಿಂದ – ಮುಕ್ರಂಪಾಡಿಯವರೆಗೂ ಸದ್ರಿ ರಸ್ತೆಯಲ್ಲಿ ಫೆ. 11 ಮಧ್ಯಾಹ್ನ 2.00 ಗಂಟೆಯಿಂದ ಸಂಜೆ 5.30 ಗಂಟೆಯವರೆಗೂ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿಲ್ಲ, ಸುಗಮ ಸಂಚಾರದ ದೃಷ್ಟಿಯಿಂದ ಆ ಸಮಯದಲ್ಲಿ ಮಂಗಳೂರು ಕಡೆಯಿಂದ – ಸುಳ್ಯ ಮತ್ತು ಮಡಿಕೇರಿ ಕಡೆ ಹೋಗುವ ವಾಹನಗಳು ಲಿನೆಟ್ ಜಂಕ್ಷನ್ – ಬೊಳುವಾರು ಜಂಕ್ಷನ್ – ದರ್ಬೆ – ಪುರುಷರಕಟ್ಟೆ – ಪಂಜಳ ಪರ್ಪುಂಜ ಮಾರ್ಗವನ್ನು ಬಳಸುವುದು.

ಮಡಿಕೇರಿ – ಸುಳ್ಯ ಕಡೆಯಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳು ಪರ್ಪುಂಜ – ಪಂಜಳ – ಪುರುಷರಕಟ್ಟೆ – ದರ್ಬೆ – ಬೊಳುವಾರು ಜಂಕ್ಷನ್ – ಲಿನೆಟ್ ಜಂಕ್ಷನ್ ಮಾರ್ಗವನ್ನು ಬಳಸುವುದು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

14 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

14 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

17 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

17 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago